AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸವಾರರ ಗಮನಕ್ಕೆ: 10 ದಿನ ಪೀಣ್ಯ ಫ್ಲೈಓವರ್ ಬಂದ್; ಹೀಗಿವೆ ಪರ್ಯಾಯ ಮಾರ್ಗಗಳು

Peenya Flyover Closed: ಬೆಂಗಳೂರಿನ ಪೀಣ್ಯ ಫ್ಲೈಓವರ್‌ನಲ್ಲಿ ಡಾಂಬರೀಕರಣ ಕಾಮಗಾರಿ ಹಿನ್ನೆಲೆ ಇಂದಿನಿಂದ ಆಗಸ್ಟ್ 5ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಕುರಿತಾಗಿ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗಾದರೆ ಪರ್ಯಾಯ ಮಾರ್ಗಗಳು ಯಾವವು ಎಂಬ ಮಾಹಿತಿ ಇಲ್ಲಿದೆ.

ವಾಹನ ಸವಾರರ ಗಮನಕ್ಕೆ: 10 ದಿನ ಪೀಣ್ಯ ಫ್ಲೈಓವರ್ ಬಂದ್; ಹೀಗಿವೆ ಪರ್ಯಾಯ ಮಾರ್ಗಗಳು
ಪೀಣ್ಯ ಫ್ಲೈಓವರ್ ಬಂದ್Image Credit source: tv9 kannada
ಪ್ರದೀಪ್​ ಚಿಕ್ಕಾಟಿ
| Edited By: |

Updated on: Jul 27, 2026 | 10:01 PM

Share

ಬೆಂಗಳೂರು, ಜುಲೈ 27: ರಾಷ್ಟ್ರೀಯ ಹೆದ್ದಾರಿಯ ಪೀಣ್ಯ ಫ್ಲೈಓವರ್ (Peenya Flyover) ಮೇಲೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆ ಇಂದಿನಿಂದ ಆಗಸ್ಟ್ 5ರವರೆಗೆ ಒಟ್ಟು 10 ದಿನಗಳ ಕಾಲ ಬೆಂಗಳೂರು (bangaluru) ನಗರ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ವಿಭಾಗ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?

ಈ ಕುರಿತಾಗಿ ಬೆಂಗಳೂರು ಸಂಚಾರ ವಿಭಾಗ ಪೊಲೀಸರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ‘‘ಪೀಣ್ಯ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-4ರ ಪೀಣ್ಯ ಎಲಿವೇಟೆಡ್ ಫ್ಲೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಾಂಬರೀಕರಣ ಕಾಮಗಾರಿ ಕೈಗೊಂಡಿದೆ.’’

ಬೆಂಗಳೂರು ಸಂಚಾರ ಪೊಲೀಸ್ ಟ್ವೀಟ್​

‘‘ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಇಂದಿನಿಂದ ಆಗಸ್ಟ್​​ 05 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗೆ 5 ಗಂಟೆಯವರೆಗೆ ಹಾಗೂ ಈ ಅವಧಿಯಲ್ಲಿ ಶನಿವಾರ ಮತ್ತು ಭಾನುವಾರ ರಾತ್ರಿ 12 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಬೆಂಗಳೂರು ನಗರ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ’’.

ಈ ಮಾರ್ಗದಲ್ಲಿ  ಸಂಚಾರ ನಿರ್ಬಂಧ

ರಾಷ್ಟ್ರೀಯ ಹೆದ್ಮಾರಿ-4ರ ಪೀಣ್ಯ ಎಲಿವೇಟೆಡ್ ಫ್ಲೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ಮೇಲೆ ಕೆನ್ನಮೆಟಲ್ ಮೀಡಿಯಾ (upper ramp)ದಿಂದ ಎಸ್​​ಆರ್​​ಎಸ್​​ (down ramp) ವರೆಗೆ ಫ್ಲೈಓವರ್ ಮೇಲೆ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ 

ನೆಲಮಂಗಲದಿಂದ ಬೆಂಗಳೂರು ಕಡೆಗೆ ಸಂಚರಿಸುವ ವಾಹನಗಳು ಕೆನ್ನಮೆಟಲ್ ಫ್ಯಾಕ್ಟರಿ ಹತ್ತಿರ ಫ್ಲೈಓವರ್ ಕೆಳಭಾಗದ ಎನ್.ಹೆಚ್.-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ ತಲುಪಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್.ಆರ್.ಎಸ್ ಜಂಕ್ಷನ್ ಹಾಗೂ ಗೊರಗುಂಟೆಪಾಳ್ಯ ಮೂಲಕ ಸಂಚರಿಸಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್