AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಮೇ 10ರಂದು ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆ: ಮಾಹಿತಿ ಇಲ್ಲಿದೆ

ಮೇ 10ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರದ ಸಂಚಾರದಲ್ಲಿ ಕೆಲ ಬದಲಾವಣೆಗಳನ್ನು ಘೋಷಿಸಲಾಗಿದೆ. ಪ್ರಮುಖವಾಗಿ HAL ಗೇಟ್ ನಂ.30 ಸುತ್ತಮುತ್ತ ಮತ್ತು ನೈಸ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧವಿರುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಪರ್ಯಾಯ ಮಾರ್ಗಗಳು ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಸೂಚಿಸಲಾಗಿದೆ. ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಠಿಯಿಂದ ಕೆಲವು ಮಾರ್ಪಾಡು ಮಾಡಿರೋದಾಗಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಮೇ 10ರಂದು ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆ: ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: alamy.com
ಪ್ರದೀಪ್​ ಚಿಕ್ಕಾಟಿ
| Edited By: |

Updated on:May 09, 2026 | 3:21 PM

Share

ಬೆಂಗಳೂರು, ಮೇ 09: ನಾಳೆ (ಮೇ 10) ಬೆಂಗಳೂರಿಗೆ ಪ್ರಧಾನ ಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆ ನರೇಂದ್ರ ಮೋದಿಯವರು ಭಾಗಿಯಾಗಲಿರುವ ಕಾರ್ಯಕ್ರಮದ ಸ್ಥಳದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹೆಚ್ಎಎಲ್ ಗೇಟ್ ನಂ.30ರ ಮುಂಭಾಗ ನಾಳೆ ಮುಂಜಾನೆ 5ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಮಾರಂಭ ನಡೆಯಲಿದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಠಿಯಿಂದ ಕೆಲವು ಮಾರ್ಪಾಡು ಮಾಡಿರೋದಾಗಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಾರ ನಿರ್ಬಂಧಿತ ಪ್ರದೇಶಗಳು

  • ಹೆಚ್.ಎ.ಎಲ್ ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿ.ಜಿ.ಸಿ.ಎ ಕಚೇರಿವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.(ಎರಡೂ ಬದಿಯಲ್ಲಿ)
  • ಹೆಚ್.ಎ.ಎಲ್ ವಿಮಾನ ನಿಲ್ದಾಣ ಗೇಟ್ ನಂ.30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ.30ರ ವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.(ಎರಡೂ ಬದಿಯಲ್ಲಿ)

ಇದನ್ನೂ ಓದಿ: ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ; ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ

ವಾಹನ ನಿಲುಗಡೆ ನಿರ್ಬಂಧಿಸಿರುವ ರಸ್ತೆಗಳು

  • ​ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಸ್.ಡಿ ರಸ್ತೆ ಜಂಕ್ಷನ್‌ನಿಂದ ಟ್ರಿನಿಟಿ ಜಂಕ್ಷನ್‌ವರೆಗೆ
  • ​HAL ವಿಮಾನ ನಿಲ್ದಾಣ ಗೇಟ್ ನಂ. 30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ. 30ರ ವರೆಗೆ
  • HAL ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ DGCA ಕಚೇರಿವರೆಗೆ

ಪಾರ್ಕಿಂಗ್ ಸ್ಥಳಗಳು

  • HAL ಟ್ರಾನ್ಸ್‌ಪೋರ್ಟ್ ಡಿಪಾರ್ಟ್‌ಮೆಂಟ್ ಪಾರ್ಕಿಂಗ್ (ಎಸ್.ಡಿ ರಸ್ತೆ ಜಂಕ್ಷನ್).
  • ಸಾರ್ವಜನಿಕರಿಗೆ- ಸರ್ ಎಸ್.ಎಂ.ವಿ, ಕಾಲೇಜು ಮೈದಾನ, HAL ಬಸ್ ಯಾರ್ಡ್

ಬೆಳಗ್ಗೆ 9 ರಿಂದ ಮಧ್ಯಾಹ್ನ 3ರೆಗೆ ನೈಸ್ ರಸ್ತೆಯಲ್ಲಿಯೂ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಈ ಮಾರ್ಗವಾಗಿ ಬರುವವರಿಗೆ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.

ಪರ್ಯಾಯ ಮಾರ್ಗ

ತುಮಕೂರು ರಸ್ತೆಯಿಂದ ಕನಕಪುರ ರಸ್ತೆ: ತುಮಕೂರು ರಸ್ತೆಯಿಂದ ನೈಸ್​​ ರೋಡ್​​ ಮೂಲಕ ಕನಕಪುರ ರಸ್ತೆ ಕಡೆ ತೆರಳುವ ವಾಹನ ಸವಾರರು ಸಿಎಂಟಿಐ ಜಂಕ್ಷನ್​​ ಬಳಿ ಬಲ ತಿರುವು ಪಡೆದು ರಾಜ್​​ ಕುಮಾರ್​​ ಪುಣ್ಯಭೂಮಿ ರಸ್ತೆ ಮೂಲಕ ತೆರಳಬೇಕು. ತುಮಕೂರು ರಸ್ತೆಯಲ್ಲಿ ನಗರದ ಒಳಭಾಗದಿಂದ ಬಂದು ನೈಸ್​​ ರೋಡ್​​ ಮೂಲಕ ಕನಕಪುರ ರಸ್ತೆ ಕಡೆ ತೆರಳುವವರೂ ರಾಜ್​​ ಕುಮಾರ್​​ ಪುಣ್ಯಭೂಮಿ ರಸ್ತೆ ಮೂಲಕವೇ ಸಾಗಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:20 pm, Sat, 9 May 26

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ