
ಬೆಂಗಳೂರು, ಮೇ 09: ನಾಳೆ (ಮೇ 10) ಬೆಂಗಳೂರಿಗೆ ಪ್ರಧಾನ ಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆ ನರೇಂದ್ರ ಮೋದಿಯವರು ಭಾಗಿಯಾಗಲಿರುವ ಕಾರ್ಯಕ್ರಮದ ಸ್ಥಳದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹೆಚ್ಎಎಲ್ ಗೇಟ್ ನಂ.30ರ ಮುಂಭಾಗ ನಾಳೆ ಮುಂಜಾನೆ 5ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಮಾರಂಭ ನಡೆಯಲಿದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಠಿಯಿಂದ ಕೆಲವು ಮಾರ್ಪಾಡು ಮಾಡಿರೋದಾಗಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ; ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ
ಬೆಳಗ್ಗೆ 9 ರಿಂದ ಮಧ್ಯಾಹ್ನ 3ರೆಗೆ ನೈಸ್ ರಸ್ತೆಯಲ್ಲಿಯೂ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಈ ಮಾರ್ಗವಾಗಿ ಬರುವವರಿಗೆ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.
ತುಮಕೂರು ರಸ್ತೆಯಿಂದ ಕನಕಪುರ ರಸ್ತೆ: ತುಮಕೂರು ರಸ್ತೆಯಿಂದ ನೈಸ್ ರೋಡ್ ಮೂಲಕ ಕನಕಪುರ ರಸ್ತೆ ಕಡೆ ತೆರಳುವ ವಾಹನ ಸವಾರರು ಸಿಎಂಟಿಐ ಜಂಕ್ಷನ್ ಬಳಿ ಬಲ ತಿರುವು ಪಡೆದು ರಾಜ್ ಕುಮಾರ್ ಪುಣ್ಯಭೂಮಿ ರಸ್ತೆ ಮೂಲಕ ತೆರಳಬೇಕು. ತುಮಕೂರು ರಸ್ತೆಯಲ್ಲಿ ನಗರದ ಒಳಭಾಗದಿಂದ ಬಂದು ನೈಸ್ ರೋಡ್ ಮೂಲಕ ಕನಕಪುರ ರಸ್ತೆ ಕಡೆ ತೆರಳುವವರೂ ರಾಜ್ ಕುಮಾರ್ ಪುಣ್ಯಭೂಮಿ ರಸ್ತೆ ಮೂಲಕವೇ ಸಾಗಬೇಕಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:20 pm, Sat, 9 May 26