AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಗಮನಿಸಿ: TCS ಮ್ಯಾರಥಾನ್​​ ಹಿನ್ನೆಲೆ ಈ ಪ್ರಮುಖ ರಸ್ತೆಗಳ ಸಂಚಾರದಲ್ಲಿಂದು ಭಾರಿ ಬದಲಾವಣೆ

ಬೆಂಗಳೂರಿನಲ್ಲಿ ಇಂದು ನಡೆಯುತ್ತಿರುವ TCS ವರ್ಲ್ಡ್ 10K ಮ್ಯಾರಥಾನ್ ಹಿನ್ನೆಲೆಯಲ್ಲಿ  ಬೆಳಿಗ್ಗೆ 5 ರಿಂದ 11 ಗಂಟೆಯವರೆಗೆ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಕಬ್ಬನ್ ರಸ್ತೆ, ಕಾಮರಾಜ್ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳು ಬಂದ್ ಆಗಲಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮತ್ತು ನೋ-ಪಾರ್ಕಿಂಗ್ ಪ್ರದೇಶಗಳನ್ನು ಗಮನಿಸುವಂತೆ ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ.

ಬೆಂಗಳೂರಿಗರೇ ಗಮನಿಸಿ: TCS ಮ್ಯಾರಥಾನ್​​ ಹಿನ್ನೆಲೆ ಈ ಪ್ರಮುಖ ರಸ್ತೆಗಳ ಸಂಚಾರದಲ್ಲಿಂದು ಭಾರಿ ಬದಲಾವಣೆ
ಸಾಂದರ್ಭಿಕ ಚಿತ್ರImage Credit source: AI Image
ಪ್ರಸನ್ನ ಹೆಗಡೆ
|

Updated on:Apr 26, 2026 | 7:46 AM

Share

ಬೆಂಗಳೂರು, ಏಪ್ರಿಲ್​​ 26: ನಗರದಲ್ಲಿ ಇಂದು ನಡೆಯುತ್ತಿರುವ TCS ವರ್ಲ್ಡ್ 10K ಮ್ಯಾರಥಾನ್​​ನಲ್ಲಿ 30,000ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇರುವ ಹಿನ್ನೆಲೆ ಬೆಳಿಗ್ಗೆ 5 ಗಂಟೆಯಿಂದ 11 ಗಂಟೆಯವರೆಗೆ ವಿವಿಧ ರಸ್ತೆಗಳಲ್ಲಿ ಸಂಚಾರವನ್ನು ನಿರ್ಭಂಧಿಸಲಾಗಿದೆ. ಮಾರ್ಗ ಬದಲಾವಣೆ ಜೊತೆಗೆ ನೋ-ಪಾರ್ಕಿಂಗ್ ನಿಯಮಗಳನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು ಜಾರಿಗೊಳಿಸಿದ್ದಾರೆ. ಮ್ಯಾರಥಾನ್ RSAOI ಮೈದಾನದಿಂದ ಆರಂಭವಾಗಿ ಅಲ್ಲಿಯೇ ಮುಕ್ತಾಯವಾಗಲಿದೆ. ಕಬ್ಬನ್ ರಸ್ತೆ, ಕಾಮರಾಜ್ ರಸ್ತೆ, ರಾಜಭವನ ರಸ್ತೆ ಹಾಗೂ ಅಂಬೇಡ್ಕರ್ ರಸ್ತೆಗಳಲ್ಲಿ ಮ್ಯಾರಥಾನ್​​ ನಡೆಯಲಿದ್ದು, ಹಲಸೂರು, ಫ್ರೇಸರ್ ಟೌನ್ ಮತ್ತು ಶಿವಾಜಿನಗರ ಪ್ರದೇಶಗಳ ಮೂಲಕ ಸಾಗಲಿದೆ.

ಯಾವೆಲ್ಲ ರಸ್ತೆಗಳು ಬಂದ್​​

  • ಕಬ್ಬನ್ ರಸ್ತೆ: CTO ಜಂಕ್ಷನ್‌ನಿಂದ ಮಣಿಪಾಲ್ ಸೆಂಟರ್ ವರೆಗೆ ಸಂಚಾರಕ್ಕೆ ಅವಕಾಶ ಇಲ್ಲ
  • ವಿಧಾನಸೌಧದ ಕಡೆ ಪ್ರವೇಶ: ಎಲ್ಲಾ ವಾಹನಗಳಿಗೆ ಸಂಪೂರ್ಣ ನಿರ್ಬಂಧ
  • ಇತರೆ ಮಾರ್ಗಗಳು: ಸೇಂಟ್ ಜಾನ್ಸ್ ರಸ್ತೆ (ಡಿಕನ್ಸನ್ ರಸ್ತೆದಿಂದ ವೀರಪಿಳ್ಳೈ ಸ್ಟ್ರೀಟ್), ಕಾಮರಾಜ್ ರಸ್ತೆ, ಇನ್ಫ್ಯಾಂಟ್ರಿ ರಸ್ತೆ ಹಾಗೂ ಲೇಡಿ ಕರ್ಝನ್ ರಸ್ತೆಯ ಕೆಲವು ಭಾಗಗಳು ಕ್ಲೋಸ್​​ ಇರಲಿವೆ.

ಇದನ್ನೂ ಓದಿ: ಜನಗಣತಿ ಕಾರ್ಯಕ್ಕೆ ಅಡ್ಡಿ; ಮಹಿಳಾ ಸಿಬ್ಬಂದಿಗೆ ಅವಮಾನ; ನಿವಾಸಿ ವಿರುದ್ಧ ಎಫ್​ಐಆರ್​ ದಾಖಲು

ಪರ್ಯಾಯ ಮಾರ್ಗಗಳು

  • ಕ್ವೀನ್ಸ್ ರಸ್ತೆಯಿಂದ ವಾಹನಗಳು ಬಾಳೇಕುಂದ್ರಿ ಜಂಕ್ಷನ್​​ ಮಾರ್ಗವಾಗಿ ಕನ್ನಿಂಗ್‌ಹ್ಯಾಮ್ ರಸ್ತೆ ಮೂಲಕ ಚಾಲುಕ್ಯ ಸರ್ಕಲ್​​ನಿಂದ ಮೆಜೆಸ್ಟಿಕ್/ಸಿಟಿ ಮಾರ್ಕೆಟ್ ಕಡೆ ತೆರಳಬೇಕು
  • ಶಿವಾಜಿನಗರ ಬಸ್ ನಿಲ್ದಾಣದಿಂದ ಮೆಜೆಸ್ಟಿಕ್/ಕೆ.ಆರ್. ಮಾರ್ಕೆಟ್ ಕಡೆಗೆ ಹೋಗುವ BMTC ಬಸ್‌ಗಳು ವೆಂಕಟಸ್ವಾಮಿ ನಾಯ್ಡು ರಸ್ತೆ ಮತ್ತು ಕನ್ನಿಂಗ್‌ಹ್ಯಾಮ್ ರಸ್ತೆಯ ಮೂಲಕ ಸಾಗಬೇಕು
  • ಎಂಜಿ ರಸ್ತೆದಿಂದ ಹಲಸೂರು ಕಡೆಗೆ ಹೋಗುವವರು ವೆಬ್ಸ್ ಜಂಕ್ಷನ್, ಟ್ರಿನಿಟಿ ಜಂಕ್ಷನ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಬಳಸಿ ಸಾಗಬೇಕು
  • ಭಾರಿ ವಾಹನಗಳಿಗೆ ಸಿಬಿಡಿ ಪ್ರದೇಶಕ್ಕೆ ಪ್ರವೇಶವಿಲ್ಲ. ಓಲ್ಡ್ ಮದ್ರಾಸ್ ರಸ್ತೆಯಿಂದ ಬರುವವರು ಎನ್‌ಜಿಇಎಫ್ ಜಂಕ್ಷನ್‌, ಸುರಂಜನ್ ದಾಸ್ ರಸ್ತೆ ಮೂಲಕ ಓಲ್ಡ್ ಏರ್‌ಪೋರ್ಟ್ ರಸ್ತೆಗೆ ಹೋಗಬೇಕು

ಕಸ್ತೂರಬಾ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ ಮತ್ತು ಕಬ್ಬನ್ ಪಾರ್ಕ್ ಸುತ್ತಮುತ್ತ ನೋ-ಪಾರ್ಕಿಂಗ್ ಜೋನ್ ಆಗಿರುತ್ತದೆ. ಮ್ಯಾರಥಾನ್​​ನಲ್ಲಿ ಭಾಗವಹಿಸುವವರು ಮತ್ತು ಪ್ರೇಕ್ಷಕರು UB ಸಿಟಿ, ಶಿವಾಜಿನಗರ ಬಸ್ ನಿಲ್ದಾಣ ಅಥವಾ ಚರ್ಚ್ ಸ್ಟ್ರೀಟ್‌ನ ಶೋಭಾ ಮಾಲ್‌ನಲ್ಲಿ ಪಾವತಿಸಬಹುದಾದ ಪಾರ್ಕಿಂಗ್ ಸೌಲಭ್ಯವನ್ನು ಬಳಸಬಹುದು. MS ಬಿಲ್ಡಿಂಗ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲೂ ಅಧಿಕೃತ ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:42 am, Sun, 26 April 26

Follow Us
ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ
ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ
ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು
ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್