
ಬೆಂಗಳೂರು, ಏಪ್ರಿಲ್ 26: ನಗರದಲ್ಲಿ ಇಂದು ನಡೆಯುತ್ತಿರುವ TCS ವರ್ಲ್ಡ್ 10K ಮ್ಯಾರಥಾನ್ನಲ್ಲಿ 30,000ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇರುವ ಹಿನ್ನೆಲೆ ಬೆಳಿಗ್ಗೆ 5 ಗಂಟೆಯಿಂದ 11 ಗಂಟೆಯವರೆಗೆ ವಿವಿಧ ರಸ್ತೆಗಳಲ್ಲಿ ಸಂಚಾರವನ್ನು ನಿರ್ಭಂಧಿಸಲಾಗಿದೆ. ಮಾರ್ಗ ಬದಲಾವಣೆ ಜೊತೆಗೆ ನೋ-ಪಾರ್ಕಿಂಗ್ ನಿಯಮಗಳನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು ಜಾರಿಗೊಳಿಸಿದ್ದಾರೆ. ಮ್ಯಾರಥಾನ್ RSAOI ಮೈದಾನದಿಂದ ಆರಂಭವಾಗಿ ಅಲ್ಲಿಯೇ ಮುಕ್ತಾಯವಾಗಲಿದೆ. ಕಬ್ಬನ್ ರಸ್ತೆ, ಕಾಮರಾಜ್ ರಸ್ತೆ, ರಾಜಭವನ ರಸ್ತೆ ಹಾಗೂ ಅಂಬೇಡ್ಕರ್ ರಸ್ತೆಗಳಲ್ಲಿ ಮ್ಯಾರಥಾನ್ ನಡೆಯಲಿದ್ದು, ಹಲಸೂರು, ಫ್ರೇಸರ್ ಟೌನ್ ಮತ್ತು ಶಿವಾಜಿನಗರ ಪ್ರದೇಶಗಳ ಮೂಲಕ ಸಾಗಲಿದೆ.
ಇದನ್ನೂ ಓದಿ: ಜನಗಣತಿ ಕಾರ್ಯಕ್ಕೆ ಅಡ್ಡಿ; ಮಹಿಳಾ ಸಿಬ್ಬಂದಿಗೆ ಅವಮಾನ; ನಿವಾಸಿ ವಿರುದ್ಧ ಎಫ್ಐಆರ್ ದಾಖಲು
ಕಸ್ತೂರಬಾ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ ಮತ್ತು ಕಬ್ಬನ್ ಪಾರ್ಕ್ ಸುತ್ತಮುತ್ತ ನೋ-ಪಾರ್ಕಿಂಗ್ ಜೋನ್ ಆಗಿರುತ್ತದೆ. ಮ್ಯಾರಥಾನ್ನಲ್ಲಿ ಭಾಗವಹಿಸುವವರು ಮತ್ತು ಪ್ರೇಕ್ಷಕರು UB ಸಿಟಿ, ಶಿವಾಜಿನಗರ ಬಸ್ ನಿಲ್ದಾಣ ಅಥವಾ ಚರ್ಚ್ ಸ್ಟ್ರೀಟ್‌ನ ಶೋಭಾ ಮಾಲ್‌ನಲ್ಲಿ ಪಾವತಿಸಬಹುದಾದ ಪಾರ್ಕಿಂಗ್ ಸೌಲಭ್ಯವನ್ನು ಬಳಸಬಹುದು. MS ಬಿಲ್ಡಿಂಗ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲೂ ಅಧಿಕೃತ ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:42 am, Sun, 26 April 26