AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಟ್ರಾಫಿಕ್​​ ಸಮಸ್ಯೆ ನಿವಾರಣೆಗೆ ಕ್ರಮ: ಸಿಗ್ನಲ್​​ ಸಮೀಪವಿರುವ ಬಸ್​​ ನಿಲ್ದಾಣಗಳ ತೆರವಿಗೆ ಸಚಿವ ಕೃಷ್ಣ ಭೈರೇಗೌಡ ಸೂಚನೆ

Bengaluru News: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಸಿಗ್ನಲ್‌ಗಳಿಂದ 75 ಮೀಟರ್ ವ್ಯಾಪ್ತಿಯಲ್ಲಿರುವ ಬಿಎಂಟಿಸಿ ಬಸ್ ನಿಲ್ದಾಣಗಳನ್ನು ಸ್ಥಳಾಂತರಿಸಲು ಸಚಿವ ಕೃಷ್ಣ ಭೈರೇಗೌಡ ಸೂಚನೆ ನೀಡಿದ್ದು, ಸಂಚಾರಿ ಪೊಲೀಸರು ಈ ನಿಲ್ದಾಣಗಳ ತೆರವಿಗೆ ಕ್ರಮ ಕೈಗೊಂಡಿದ್ದಾರೆ. ಈ ಹಿಂದೆ 103 ಬಸ್‌ ನಿಲ್ದಾಣಗಳನ್ನು ಶಿಫ್ಟ್ ಮಾಡಲು ಬಿಎಂಟಿಸಿ ಮತ್ತು ಬೆಂಗಳೂರು ಟ್ರಾಫಿಕ್ ಪೋಲಿಸರು ಗುರುತಿಸಿದ್ದರು. ಈಗ ಅವುಗಳ ಸ್ಥಳಾಂತರ ವಿಚಾರಕ್ಕೆ ಮರುಜೀವ ಬಂದಿದ್ದು, ಅದಾಗಲೇ 27 ಬಸ್ ಸ್ಟ್ಯಾಂಡ್​​ಗಳ ಸ್ಥಳ ಬದಲಾಯಿಸಲಾಗಿದೆ.

ಬೆಂಗಳೂರಲ್ಲಿ ಟ್ರಾಫಿಕ್​​ ಸಮಸ್ಯೆ ನಿವಾರಣೆಗೆ ಕ್ರಮ: ಸಿಗ್ನಲ್​​ ಸಮೀಪವಿರುವ ಬಸ್​​ ನಿಲ್ದಾಣಗಳ ತೆರವಿಗೆ ಸಚಿವ ಕೃಷ್ಣ ಭೈರೇಗೌಡ ಸೂಚನೆ
ಸಾಂದರ್ಭಿಕ ಚಿತ್ರImage Credit source: Tv9 Kannada
ಕಿರಣ್​ ಸೂರ್ಯ
| Edited By: |

Updated on:Jul 15, 2026 | 7:41 PM

Share

ಮುಖ್ಯಾಂಶಗಳು

  • ಬೆಂಗಳೂರು ನಗರದ ಟ್ರಾಫಿಕ್​​ ಸಮಸ್ಯೆಗೆ ಬ್ರೇಕ್​​ ಹಾಕಲು ಕ್ರಮ
  • ಸಿಗ್ನಲ್​​ ಸಮೀಪವಿರುವ ಬಸ್​​ ನಿಲ್ದಾಣಗಳ ತೆರವಿಗೆ ಸೂಚನೆ
  • ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವ ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು, ಜುಲೈ 15: ಕೃಷ್ಣ ಭೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದಲ್ಲಿನ ಪ್ರಮುಖ ಸಮಸ್ಯೆಗಳ ನಿವಾರಣೆಗೆ ಕ್ರಮಕ್ಕೆ ಮುಂದಾಗಿದ್ದು, ಈಗಾಗಲೇ ಫುಟ್​​​ಪಾತ್​​ ಒತ್ತುವರಿ ತೆರವು, ಬಿಡಾಡಿ ವಾಹನಗಳ ಎತ್ತಂಗಡಿ ಸೇರಿ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಇವುಗಳ ಜೊತೆಗೀಗ ನಗರದಲ್ಲಿನ ಟ್ರಾಫಿಕ್​​ ಸಮಸ್ಯೆ ನಿವಾರಣೆ ನಿಟ್ಟಿನಲ್ಲೂ ಸಚಿವರು ಕಾರ್ಯಪ್ರವತ್ತರಾಗಿದ್ದು, ಸಿಗ್ನಲ್​​ಗಳಿಂದ 75 ಮೀಟರ್ ಒಳಗಿರುವ ಬಸ್ ನಿಲ್ದಾಣಗಳ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ.

ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ

ಇತ್ತೀಚೆಗೆ ಸಚಿವ ಕೃಷ್ಣಭೈರೇಗೌಡ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಗರದ ಟ್ರಾಫಿಕ್ ಸಮಸ್ಯೆಗೆ ಪ್ರಮುಖ ಪರಿಹಾರವಾಗಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ನಗರದ ಸಂಚಾರದಟ್ಟಣೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಟ್ರಾಫಿಕ್​​ ಸಿಗ್ನಲ್​​ಗಳಿಂದ 75 ಮೀಟರ್ ಒಳಗಿರುವ ಬಿಎಂಟಿಸಿಯ ಬಸ್ ನಿಲ್ದಾಣಗಳನ್ನು ಶಿಫ್ಟ್ ಮಾಡಲು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರು ಟ್ರಾಫಿಕ್ ಪೋಲಿಸರು ಅಲರ್ಟ್ ಆಗಿದ್ದು, ಅಂತಹ ನಿಲ್ದಾಣಗಳ ತೆರವಿಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಜಿಬಿಎ ಸ್ಟಿಕ್ಕರ್ ಭೀತಿಗೆ ಗಲ್ಲಿ ಸೇರಿದ ಕಾರುಗಳು; ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ಪಾರ್ಕಿಂಗ್ ಹಾವಳಿ

ಅದಾಗಲೇ 27 ಬಸ್ ಸ್ಟ್ಯಾಂಡ್​​ಗಳ ಸ್ಥಳಾಂತರ

ಈ ಹಿಂದೆ 103 ಬಸ್‌ ನಿಲ್ದಾಣಗಳನ್ನು ಶಿಫ್ಟ್ ಮಾಡಲು ಬಿಎಂಟಿಸಿ ಮತ್ತು ಬೆಂಗಳೂರು ಟ್ರಾಫಿಕ್ ಪೋಲಿಸರು ಗುರುತಿಸಿದ್ದರು. ಈಗ ಅವುಗಳ ಸ್ಥಳಾಂತರ ವಿಚಾರಕ್ಕೆ ಮರುಜೀವ ಬಂದಿದ್ದು, ಅದಾಗಲೇ 27 ಬಸ್ ಸ್ಟ್ಯಾಂಡ್​​ಗಳ ಸ್ಥಳ ಬದಲಾಯಿಸಲಾಗಿದೆ. ಆದರೆ 76 ಬಸ್ ನಿಲ್ದಾಣಗಳ ಸ್ಥಳಾಂತರ ಇನ್ನೂ ಆಗಬೇಕಿರುವ ಕಾರಣ ಈ ಸಂಬಂಧ ಜಿಬಿಎಗೆ ಬೆಂಗಳೂರು ಟ್ರಾಫಿಕ್ ಪೋಲಿಸರು ಮತ್ತೊಮ್ಮೆ ಮನವಿ ಮಾಡಿದ್ದಾರೆ. ಆದರೆ ಇದಕ್ಕೆ ಜಿಬಿಎ ಅಧಿಕಾರಿಗಳು ಮೂರು ತಿಂಗಳ ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ. ಇನ್ನು ಜಿಬಿಎ ವ್ಯಾಪ್ತಿಗೆ ಬರದೇ ಇರುವ ಬಸ್ ಸ್ಟಾಂಡ್​​ಗಳನ್ನು ಸಹ ಗುರುತಿಸಲಾಗಿದ್ದು, ಅವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರಲಿವೆ. ಹೀಗಾಗಿ ಈ ಸಂಬಂಧ ಅವರಿಗೂ ಪತ್ರ ಬರೆಯಲು ಬೆಂಗಳೂರು ಟ್ರಾಫಿಕ್ ಪೋಲಿಸರು ನಿರ್ಧರಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:55 pm, Wed, 15 July 26

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ