AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಪ್ರಯಾಣಿಕರಿಗೆ ಕಹಿ ಸುದ್ದಿ: ಇನ್ನರ್ ರಿಂಗ್ ಮೆಟ್ರೋ ಯೋಜನೆ ಕೈಬಿಡಲು ಪ್ಲ್ಯಾನ್

ಬೆಂಗಳೂರು ಮೆಟ್ರೋ ನಗರದ ಸಂಚಾರ ದಟ್ಟಣೆಗೆ ಪ್ರಮುಖ ಪರಿಹಾರವಾಗಬೇಕಿದ್ದ ಇನ್ನರ್ ರಿಂಗ್ ಮೆಟ್ರೋ ಯೋಜನೆಯನ್ನು ಶಾಶ್ವತವಾಗಿ ಕೈಬಿಡಲು BMRCL ಮುಂದಾಗಿದೆ. ನಿತ್ಯ 2500 ವಾಹನ ನೋಂದಣಿಯಾಗಿ ಟ್ರಾಫಿಕ್ ಹೆಚ್ಚುತ್ತಿರುವಾಗ ಈ ಯೋಜನೆ ರದ್ದುಪಡಿಸಿರುವುದು ಪ್ರಯಾಣಿಕರ ಅಸಮಾಧಾನಕ್ಕೂ ಕಾರಣವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಮೆಟ್ರೋ ಪ್ರಯಾಣಿಕರಿಗೆ ಕಹಿ ಸುದ್ದಿ: ಇನ್ನರ್ ರಿಂಗ್ ಮೆಟ್ರೋ ಯೋಜನೆ ಕೈಬಿಡಲು ಪ್ಲ್ಯಾನ್
ಪ್ರಾತಿನಿಧಿಕ ಚಿತ್ರ
Kiran Surya
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 07, 2025 | 9:48 PM

Share

ಬೆಂಗಳೂರು, ನವೆಂಬರ್​ 07: ನಗರದಲ್ಲಿ ಪ್ರತಿದಿನ ಎರಡೂವರೆ ಸಾವಿರ ಹೊಸ ವಾಹನಗಳು ನೋಂದಣಿ ಆಗುತ್ತಿವೆ. ಹೀಗಾಗಿ ಪ್ರತಿದಿನ ಟ್ರಾಫಿಕ್ ಸಮಸ್ಯೆ (Traffic problem) ಹೆಚ್ಚಾಗುತ್ತಿದೆ. ಆದರೆ ಇದಕ್ಕೆ ಬ್ರೇಕ್ ಹಾಕಬೇಕಿದ್ದ ಪ್ರಮುಖ ಮೆಟ್ರೋ ಮಾರ್ಗವನ್ನು ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಶಾಶ್ವತವಾಗಿ ಕೈಬಿಡಲು ಮುಂದಾಗಿದೆ.

ನಗರದ ಎಲ್ಲಾ ಏರಿಯಾಗಳನ್ನು ಮತ್ತು ಎಲ್ಲಾ ಮೆಟ್ರೋ ಮಾರ್ಗಗಳನ್ನು ಸಂಪರ್ಕಿಸುವ ಏಕೈಕ ಮೆಟ್ರೋ ಮಾರ್ಗವಾಗಲಿದ್ದ, ಇನ್ನರ್ ರಿಂಗ್ ಮೆಟ್ರೋ ಯೋಜನೆಯನ್ನು ಶಾಶ್ವತವಾಗಿ ಕೈಬಿಡುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಇದು ಮೆಟ್ರೋ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕಿತ್ತಳೆ ಮಾರ್ಗಕ್ಕಾಗಿ ಸಾವಿರಾರು ಮರಗಳ ಮಾರಣಹೋಮಕ್ಕೆ ಮುಂದಾದ BMRCL: ಸಿಡಿದೆದ್ದ ಪರಿಸರ ಪ್ರೇಮಿಗಳು

ಮಹಾಲಕ್ಷ್ಮೀ ಲೇಔಟ್ ಮೆಟ್ರೋ ಸ್ಟೇಷನ್​​ನಿಂದ ಕುವೆಂಪು ರಸ್ತೆ ಮೆಟ್ರೋ ಸ್ಟೇಷನ್​​ವರೆಗೆ ಈ ಇನ್ನರ್ ರಿಂಗ್ ಮೆಟ್ರೋ ಮಾರ್ಗವನ್ನು ನಿರ್ಮಾಣ ಮಾಡಲು ತಜ್ಞರು ವರದಿ ಸಿದ್ದಪಡಿಸಿದ್ದರು. ಐಐಎಸ್​​ಸಿ ಪ್ರೊ. ಆಶಿಷ್ ವರ್ಮ ನೇತೃತ್ವದಲ್ಲಿ ನಗರದೊಳಗೆ ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಹಾಕಲು ಸಿದ್ದಪಡಿಸಿದ್ದ ಸಂಪೂರ್ಣ ಅಂಡರ್ ಗ್ರೌಂಡ್ ಮೆಟ್ರೋ ಯೋಜನೆ ಇದು. ಇನ್ನರ್ ರಿಂಗ್ ಮೆಟ್ರೋವನ್ನು ಹಂತ- 3 ರಿಂದ ಸದ್ಯ ಕೈ ಬಿಡಲಾಗಿದೆಯಂತೆ. ಇದರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಬೀಳಲಿದೆ ಎಂದು ಇಂಜಿನಿಯರ್ ಲೋಹೀತ್ ಕುಮಾರ್ ಹೇಳುತ್ತಾರೆ.

ಈ ಇನ್ನರ್ ರಿಂಗ್ ಮಾರ್ಗವು 34 ಕಿಮೀ, 24 ಮೆಟ್ರೋ ಸ್ಟೇಷನ್, 6 ಇಂಟರ್ ಚೇಂಜ್ ಮೆಟ್ರೋ ಸ್ಟೇಷನ್ ಮಾಡಲು ಪ್ಲ್ಯಾನ್ ಮಾಡಲಾಗಿತ್ತು. ರಾಜ್ಯ ಸರ್ಕಾರ ನಗರದೊಳಗೆ ಟ್ರಾಫಿಕ್ ಕಡಿಮೆ ಮಾಡುವ ಇನ್ನರ್ ರಿಂಗ್ ಮೆಟ್ರೋ ಮಾಡುವ ಬದಲಿಗೆ ಬೆಂಗಳೂರು ಹೊರವಲಯದಲ್ಲಿರುವ ತುಮಕೂರು, ದೇವನಹಳ್ಳಿ, ಹಾರೋಹಳ್ಳಿ, ಅತ್ತಿಬೆಲೆ, ಬಿಡದಿ, ತಾವರೆಕೆರೆ, ಹೊಸಕೋಟೆ ಮತ್ತು ಜಿಗಣಿಗೆ ಮೆಟ್ರೋ ಮಾರ್ಗಗಳ ಫಿಸಿಬಿಲಿಟಿ ಸ್ಟಡಿ ಮಾಡಲು ಸರ್ಕಾರ ನಿರ್ದೇಶನ ನೀಡಿದೆ.

ಪ್ರಯಾಣಿಕರು ಅಸಮಾಧಾನ 

ಈ ಇನ್ನರ್ ಮೆಟ್ರೋ ಆರಂಭವಾಗಿದ್ದರೆ ನಗರದ ಒಳಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಯುತ್ತಿತ್ತು. ಆದರೆ ಯೋಜನೆ ಕೈಬಿಟ್ಟಿದ್ದು ಸರಿಯಲ್ಲ ಎಂದು ಪ್ರಯಾಣಿಕರಾದ ಪರಮೇಶ್​​​ ಎನ್ನುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೇಶದ ಮೊದಲ ಅಂತಾರಾಜ್ಯ ಮೆಟ್ರೋ ಸಂಪರ್ಕಕ್ಕೆ ಕೊಕ್: ಹೊಸೂರು ಮೆಟ್ರೋ ಯೋಜನೆ ಕೈಬಿಟ್ಟ ಬಿಎಂಆರ್​ಸಿಎಲ್

ಒಟ್ಟಿನಲ್ಲಿ ನಗರದೊಳಗಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹಾಡಬೇಕಿದ್ದ ಇನ್ನರ್ ರಿಂಗ್ ಮೆಟ್ರೋ ಯೋಜನೆ ಮಾಡಲು ಬಿಎಂಆರ್​ಸಿಎಲ್​​ ಅಧಿಕಾರಿಗಳು ಯಾಕೋ ಮನಸ್ಸು ಮಾಡುವಂತೆ ಕಾಣುತ್ತಿಲ್ಲ. ಆದರೆ ಈ‌ ಮಾರ್ಗ ಓಪನ್ ಆಗಿದ್ದರೆ ದೊಡ್ಡ ಮಟ್ಟದಲ್ಲಿ ಜನರಿಗೆ ಸಹಾಯವಾಗುವುದರಲ್ಲಿ ಯಾವುದೇ ಅನುಮಾನವಿರಲಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ