
ಬೆಂಗಳೂರು, ಜುಲೈ 28: ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಟ್ರಾಫಿಕ್ ಜಾಮ್ (Traffic Jam) ಸಮಸ್ಯೆ ಜನರನ್ನು ಹೈರಾಣಾಗಿಸಿದೆ. ಈ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಇದೀಗ, ಕಾರ್ತಿಕ್ ನಗರ ಜಂಕ್ಷನ್‌ನಿಂದ ಕಲಾಮಂದಿರವರೆಗೆ ಹೊರವರ್ತುಲ ರಸ್ತೆಯಲ್ಲಿನ ಮತ್ತು ವರ್ತೂರು ಕೋಡಿಯಿಂದ ಮಾರತ್ತಹಳ್ಳಿ ಕಡೆಗೆ ಮತ್ತು ಮಾರತ್ತಹಳ್ಳಿಯಿಂದ ವರ್ತೂರು ಕೋಡಿ ಕಡೆಗೆ ತೆರಳುವ ರಸ್ತೆಯಲ್ಲಿನ ಟ್ರಾಫಿಕ್ ಕಡಿಮೆ ಮಾಡಲು ಪೊಲೀಸರು ವಾಹನ ಸಂಚಾರ ಮಾರ್ಗದಲ್ಲಿ ಕೆಲವು ಬದಲಾವಣೆ ಮಾಡಿದ್ದಾರೆ.
ಚಿನ್ನಪ್ಪನಹಳ್ಳಿ ರೈಲ್ವೆ ಗೇಟ್ ಕಡೆಯಿಂದ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸುವ ವಾಹನಗಳು ಜೀವಿಕಾ ಆಸ್ಪತ್ರೆಯ ಸರ್ವೀಸ್ ರಸ್ತೆಯ ಮೂಲಕ ಸಂಚರಿಸಿ ಕಡ್ಡಾಯವಾಗಿ ಯಮಹಾ ಶೋ ರೂಂ ಬಳಿ ಹೊರವರ್ತುಲ ರಸ್ತೆಗೆ ಪ್ರವೇಶಿಸಿ ಸಂಚರಿಸಬೇಕು.
ಮಹದೇವಪುರ ಮತ್ತು ಕಾರ್ತಿಕನಗರ ಹೊರವರ್ತುಲ ರಸ್ತೆ ಕಡೆಯಿಂದ ವೈಟ್‌ಫೀಲ್ಡ್ / ವರ್ತೂರು ಕಡೆಗೆ ಸಂಚರಿಸುವ ವಾಹನಗಳು ಕಲಾಮಂದಿರ ಜಂಕ್ಷನ್‌ನಲ್ಲಿ ಸರ್ವಿಸ್ ರಸ್ತೆಯನ್ನು ಪ್ರವೇಶಿಸಿ. ಕುಂದಲಹಳ್ಳಿ / ವರ್ತೂರು ಕಡೆಗೆ ಸಂಚರಿಸಬಹುದಾಗಿದೆ.
ಇದನ್ನೂ ಓದಿ: 7.3 ಕಿ.ಮೀ ಕ್ರಮಿಸಲು ನನಗೆ 73 ನಿಮಿಷಗಳು ಬೇಕೇ ಬೇಕು; ಇದು ನನ್ನ ದಿನನಿತ್ಯದ ಪಾಡು
ವರ್ತೂರು ಕೋಡಿಯಿಂದ ಮಾರತ್ತಹಳ್ಳಿ ಕಡೆಗೆ ಮತ್ತು ಮಾರತ್ತಹಳ್ಳಿಯಿಂದ ವರ್ತೂರು ಕೋಡಿ ಕಡೆಗೆ ತೆರಳುವ ರಸ್ತೆಯಲ್ಲಿನ ಟ್ರಾಫಿಕ್ ಕಡಿಮೆ ಮಾಡಲು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಸಲುವಾಗಿ ಈ ಕೆಳಕಂಡಂತೆ ಪ್ರಾಯೋಗಿಕವಾಗಿ ಸಂಚಾರ ಮಾರ್ಪಾಡು ಮಾಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:10 pm, Mon, 28 July 25