AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಫೈನ್ ಶೇ 50 ರಿಯಾಯಿತಿ: ಕೇವಲ 4 ದಿನದಲ್ಲಿ 6 ಕೋಟಿ ರೂ. ಸಂಗ್ರಹ!

Traffic Fine Rebate: ಸಂಚಾರ ನಿಯಮ ಉಲ್ಲಂಘನೆಯ ಬಾಕಿ ದಂಡ ಪಾವತಿಗೆ ನೀಡಿರುವ ಶೇಕಡಾ 50 ರಷ್ಟು ರಿಯಾಯಿತಿ ಯೋಜನೆಗೆ ಬೆಂಗಳೂರಿನಲ್ಲಿ ಭರ್ಜರಿ ಬೆಂಬಲ ವ್ಯಕ್ತವಾಗಿದೆ. ಜೂನ್ 21 ರಿಂದ ಆರಂಭವಾದ ಈ ಕೊಡುಗೆಯಡಿ ಕೇವಲ ನಾಲ್ಕೇ ದಿನಗಳಲ್ಲಿ ಬೆಂಗಳೂರಿನಲ್ಲಿ ಬರೊಬ್ಬರಿ 2 ಲಕ್ಷಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥವಾಗಿವೆ. ಪೊಲೀಸರ ಖಜಾನೆಗೆ 6.06 ಕೋಟಿ ರೂಪಾಯಿ ದಂಡದ ಹಣ ಹರಿದುಬಂದಿದೆ.

ಟ್ರಾಫಿಕ್ ಫೈನ್ ಶೇ 50 ರಿಯಾಯಿತಿ: ಕೇವಲ 4 ದಿನದಲ್ಲಿ 6 ಕೋಟಿ ರೂ. ಸಂಗ್ರಹ!
ಸಾಂದರ್ಭಿಕ ಚಿತ್ರImage Credit source: @rtnagartraffic
ಗಣಪತಿ ಶರ್ಮಾ
|

Updated on:Jun 25, 2026 | 2:03 PM

Share

ಮುಖ್ಯಾಂಶಗಳು

  • ಮೂರೇ ದಿನದಲ್ಲಿ 6.06 ಕೋಟಿ ರೂ. ವಸೂಲಿ
  • 2 ಲಕ್ಷಕ್ಕೂ ಅಧಿಕ ಕೇಸ್ ಕ್ಲಿಯರ್
  • ಜುಲೈ 10 ರವರೆಗೆ ಇರಲಿದೆ ರಿಯಾಯಿತಿ

ಬೆಂಗಳೂರು, ಜೂನ್ 25: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಂಚಾರ ನಿಯಮ ಉಲ್ಲಂಘನೆಯ ಇ-ಚಲನ್ ಬಾಕಿ ದಂಡದ ಮೇಲಿನ ಶೇ 50 ರಷ್ಟು ರಿಯಾಯಿತಿ (Traffic Fine Discount) ಯೋಜನೆಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಜೂನ್ 21 ರಿಂದ ಅಧಿಕೃತವಾಗಿ ಆರಂಭವಾಗಿರುವ ಈ ರಿಯಾಯಿತಿ ಬಳಸಿಕೊಂಡು ಸಾವಿರಾರು ಸವಾರರು ವಾಹನಗಳ ಮೇಲಿದ್ದ ಹಳೇ ದಂಡಗಳನ್ನು ಪಾವತಿಸಿ ಚುಕ್ತಾಗೊಳಿಸುತ್ತಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಬಿಡುಗಡೆ ಮಾಡಿರುವ ಅಧಿಕೃತ ಅಂಕಿಅಂಶ ಪ್ರಕಾರ, ಜೂನ್ 21 ರಿಂದ ಜೂನ್ 24 ರವರೆಗಿನ ಮೊದಲ 4 ದಿನಗಳ ಅವಧಿಯಲ್ಲಿ ವಿವಿಧ ಆನ್‌ಲೈನ್ ಮತ್ತು ಆಫ್‌ಲೈನ್ ಮಾಧ್ಯಮಗಳ ಮೂಲಕ ಒಟ್ಟು 2,00,139 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಬರೋಬ್ಬರಿ 6,06,65,150 ರೂಪಾಯಿ ಭಾರೀ ಮೊತ್ತದ ದಂಡ ವಸೂಲಿಯಾಗಿದೆ.

ಬಾಕಿ ಉಳಿದ ಕೇಸ್ ವಿಲೇವಾರಿಗೆ ಕ್ರಮ

ಬೆಂಗಳೂರು ನಗರವೊಂದರಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ 5 ಕೋಟಿಗೂ ಅಧಿಕ ಇ-ಚಲನ್ ಪ್ರಕರಣಗಳು ದಂಡ ಪಾವತಿಯಾಗದೆ ವರ್ಷಗಳಿಂದ ಬಾಕಿ ಇದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸಾರಿಗೆ ಮತ್ತು ಪೊಲೀಸ್ ಇಲಾಖೆ, ಜೂನ್ 21 ರಿಂದ ಜುಲೈ 10 ರವರೆಗೆ ಅನ್ವಯವಾಗುವಂತೆ ಸೀಮಿತ ಅವಧಿಗೆ ಈ ಶೇ 50 ರಿಯಾಯಿತಿ ಯೋಜನೆಯನ್ನು ಮರುಜಾರಿ ಮಾಡಿತ್ತು. ಮೊದಲ ದಿನವೇ ಸವಾರರು ಪೇಟಿಎಂ, ಕರ್ನಾಟಕ ಒನ್ ಮತ್ತು ಸಂಚಾರ ಪೊಲೀಸ್ ವೆಬ್‌ಸೈಟ್‌ಗಳ ಮೂಲಕ ಮುಗಿಬಿದ್ದು ದಂಡ ಪಾವತಿಸಲು ಆರಂಭಿಸಿದ್ದರು.

ಟ್ರಾಫಿಕ್ ಪೊಲೀಸ್ ಎಕ್ಸ್ ಸಂದೇಶ

ಬಾಕಿ ಉಳಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ

ನಗರದ ಸಂಚಾರ ವಿಭಾಗದ ಹಿರಿಯ ಅಧಿಕಾರಿಗಳ ಪ್ರಕಾರ, ಈ ಯೋಜನೆಯು ಸಾರ್ವಜನಿಕರಿಗೆ ಆರ್ಥಿಕ ಹೊರೆ ಕಡಿಮೆ ಮಾಡಿಕೊಳ್ಳಲು ಸಿಕ್ಕಿರುವ ಸುವರ್ಣಾವಕಾಶವಾಗಿದೆ. ಜುಲೈ 10 ರ ಗಡುವು ಮುಗಿದ ನಂತರ ಯಾವುದೇ ಕಾರಣಕ್ಕೂ ರಿಯಾಯಿತಿ ವಿಸ್ತರಿಸಲಾಗುವುದಿಲ್ಲ ಮತ್ತು ಬಾಕಿ ಉಳಿಸಿಕೊಳ್ಳುವ ವಾಹನಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Thu, 25 June 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ