ಬೆಂಗಳೂರು: ಟ್ರಾಫಿಕ್‌ನಲ್ಲಿ ಸಿಲುಕಿ ಆಂಬುಲೆನ್ಸ್‌ ಪರದಾಟ; ಆಂಬುಲೆನ್ಸ್​ಗೂ ದಾರಿ ಮಾಡಿಕೊಡದ್ದಕ್ಕೆ ಪೋಷಕರ ಆಕ್ರೋಶ

ತುರ್ತು ಸಂದರ್ಭದಲ್ಲೂ ಟ್ರಾಫಿಕ್ ಸಂಚಾರ, ಟ್ರಾಫಿಕ್ ದಟ್ಟಣೆ ಸರಿ ಮಾಡದ ಸಂಚಾರಿ ಪೊಲೀಸರ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು: ಟ್ರಾಫಿಕ್‌ನಲ್ಲಿ ಸಿಲುಕಿ ಆಂಬುಲೆನ್ಸ್‌ ಪರದಾಟ; ಆಂಬುಲೆನ್ಸ್​ಗೂ ದಾರಿ ಮಾಡಿಕೊಡದ್ದಕ್ಕೆ ಪೋಷಕರ ಆಕ್ರೋಶ
ಟ್ರಾಫಿಕ್‌ನಲ್ಲಿ ಸಿಲುಕಿ ಆಂಬುಲೆನ್ಸ್‌ ಪರದಾಟ
Follow us
TV9 Web
| Updated By: ganapathi bhat

Updated on:Sep 21, 2021 | 4:43 PM

ಬೆಂಗಳೂರು: ಟ್ರಾಫಿಕ್‌ನಲ್ಲಿ ಸಿಲುಕಿ ಆಂಬುಲೆನ್ಸ್‌ ಪರದಾಟ ಪಟ್ಟ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಟ್ರಾಫಿಕ್‌ ಜಾಂ ಆದಕಾರಣ ಆಂಬುಲೆನ್ಸ್ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಂಬುಲೆನ್ಸ್​ನಲ್ಲಿ ಇದ್ದ ರೋಗಿ ತೀವ್ರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ದರನ್ನ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಟ್ರಾಫಿಕ್ ಸಮಸ್ಯೆಗೆ ಸಿಲುಕಿದೆ.

ನೆಲಮಂಗಲದ ಮೋಟಗಾನಹಳ್ಳಿಯ 78 ವರ್ಷದ ವೃದ್ದ ಒಬಳಯ್ಯ ತೀವ್ರ ಅಸ್ವಸ್ಥ ಆಗಿದ್ದರು. ನೆಲಮಂಗಲದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಆಂಬುಲೆನ್ಸ್ ಹೋಗುತ್ತಿತ್ತು. ತುರ್ತು ಸಂದರ್ಭದಲ್ಲೂ ಟ್ರಾಫಿಕ್ ಸಂಚಾರ, ಟ್ರಾಫಿಕ್ ದಟ್ಟಣೆ ಸರಿ ಮಾಡದ ಸಂಚಾರಿ ಪೊಲೀಸರ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ರಸ್ತೆ ದುರಸ್ತಿ ಬಗ್ಗೆ ಗೌರವ್ ಗುಪ್ತಾ ಮಾಹಿತಿ ಬೆಂಗಳೂರು ನಗರ, ಬಿಬಿಎಂಪಿ ವ್ಯಾಪ್ತಿಯ ರಸ್ತೆ ದುರಸ್ತಿ ಕಾರ್ಯಗಳ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಂಗಳವಾರ ಮಾತನಾಡಿದ್ದಾರೆ. ಸೆಪ್ಟೆಂಬರ್ 20 ರ ಒಳಗೆ ರಸ್ತೆ ಗುಂಡಿ ಮುಚ್ಚಲು ಸಚಿವರ ಸೂಚನೆ ಇದೆ. ಅದರಂತೆ ಮುಖ್ಯರಸ್ತೆ, ಅಡ್ಡ ರಸ್ತೆಗಳಲ್ಲಿನ ಗುಂಡಿ ಮುಚ್ಚಲಾಗಿದೆ. ಸೆಪ್ಟೆಂಬರ್ 6 ರಂದು ಬೆಂಗಳೂರಿನಲ್ಲಿ 1,332 ರಸ್ತೆ ಗುಂಡಿ ಇತ್ತು. ಸದ್ಯ ನಗರದಲ್ಲಿ ಬಹುತೇಕ ಗುಂಡಿಗಳನ್ನು ಮುಚ್ಚಲಾಗಿದೆ. ಬೆಂಗಳೂರಿನಲ್ಲಿ ಈಗ 194 ರಸ್ತೆ ಗುಂಡಿಗಳು ಬಾಕಿ ಇವೆ ಎಂದು ಬಿಬಿಎಂಪಿ ಆಯುಕ್ತ ಗೌರವ್​​ ಗುಪ್ತಾ ಹೇಳಿದ್ದಾರೆ.

ರಸ್ತೆ ಗುಂಡಿಗಳಿಗೆ ಯಾರು ಹೊಣೆ ಎಂಬ ವಿಚಾರವಾಗಿ ಗೌರವ್ ಗುಪ್ತಾ ಪ್ರತಿಕ್ರಿಯಿಸಿದ್ದಾರೆ. ಮುಖ್ಯ ರಸ್ತೆಗಳ ನಿರ್ವಹಣೆ ಮಾಡಿಲ್ಲ. ವೈಟ್ ಟಾಪಿಂಗ್ ಮಾಡ್ತೇವೆ ಎಂದು ರಸ್ತೆ ನಿರ್ಮಾಣ ಮಾಡಿಲ್ಲ ಹೀಗಾಗಿ ಹಾಳಾಗಿದೆ. ಮೆಟ್ರೋ ಕಾಮಗಾರಿಗಾಗಿ ರಸ್ತೆ ನಿರ್ವಹಣೆ ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗುಂಡಿ ತೆಗೆದು ಕಾಟಾಚಾರಕ್ಕೆ ಬ್ಯಾರಿಕೇಡ್ ಅಳವಡಿಕೆ; ನೈಟ್ ಶಿಫ್ಟ್ ಮುಗಿಸಿ ಬರುತ್ತಿದ್ದ ಮೆಕ್ಯಾನಿಕ್ ಗುಂಡಿಗೆ ಬಿದ್ದು ಸಾವು

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳಲ್ಲಿನ ಗುಂಡಿ ಮುಚ್ಚಲಾಗಿದೆ: ಗೌರವ್ ಗುಪ್ತಾ ಮಾಹಿತಿ

Published On - 4:18 pm, Tue, 21 September 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ