ಬೆಂಗಳೂರಿನ ಈ ರಸ್ತೆಯಲ್ಲಿ ಸಂಚರಿಸುವ ಮುನ್ನ ಗಮನಿಸಿ: ಸದಾ ಇರುತ್ತೆ ಟ್ರಾಫಿಕ್ ಜಾಮ್

ಅದು ಸದಾ ಟ್ರಾಫಿಕ್‌ನಿಂದ ಕೂಡಿರುವ ಬೆಂಗಳೂರಿನ ರಸ್ತೆ. ಆ ರಸ್ತೆಯಲ್ಲಿ ಸಾರ್ವಜನಿಕರ ಓಡಾಟಕ್ಕೆ ಅನಕೂಲ ಆಗಲಿ ಎಂದು ಫ್ಲೈ ಓವರ್ ಕಾಮಗಾರಿ ಮಾಡಲಾಗುತ್ತಿದೆ. ಆದರೆ ಅದೇ ಮೇಲ್ಸೇತುವೆ ಕಾಮಗಾರಿಯ ವಿಳಂಬ ನೀತಿ ಧೋರಣೆ ವಾಹನ ಸವಾರರು ಪರದಾಡುವಂತೆ ಮಾಡಿದೆ. ಅದ್ಯಾವ ರಸ್ತೆ? ಯಾವ ಫ್ಲೈಓವರ್ ಕಾಮಗಾರಿ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನ ಈ ರಸ್ತೆಯಲ್ಲಿ ಸಂಚರಿಸುವ ಮುನ್ನ ಗಮನಿಸಿ: ಸದಾ ಇರುತ್ತೆ ಟ್ರಾಫಿಕ್ ಜಾಮ್
ವೀರಭದ್ರ ನಗರ ಫ್ಲೈಓವರ್ ಕಾಮಗಾರಿ
Follow us
Vinayak Hanamant Gurav
| Updated By: Ganapathi Sharma

Updated on:Dec 11, 2024 | 7:16 AM

ಬೆಂಗಳೂರು, ಡಿಸೆಂಬರ್ 11: ಬೆಂಗಳೂರಿನ ಹೊರ ವರ್ತುಲ ರಸ್ತೆಯ ಹೊಸಕೆರೆಹಳ್ಳಿ ಬಳಿ ನಾಯಂಡಳ್ಳಿ-ಹೊಸಕೆರೆಹಳ್ಳಿ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದೆ. ಕಳೆದ ಮೂರು ವರ್ಷಳ ಹಿಂದೆ ಕಾಮಗಾರಿ ಆರಂಭ ಮಾಡಲಾಗಿತ್ತು. 380 ಮೀಟರ್ ಉದ್ದದ ಮೇಲ್ಸೇತುವೆ ಇದಾಗಿದ್ದು, 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಕಾಮಗಾರಿ ವಿಳಂಬ ನೀತಿ ಧೋರಣೆಯಿಂದ ಬೆಳಿಗ್ಗೆ, ಸಾಯಂಕಾಲ ‌ಪೀಕ್ ಅವರ್ ಸಂದರ್ಭದಲ್ಲಿ ಭಾರಿ ಸಂಚಾರ ದಟ್ಟಣೆಯಿಂದಾಗಿ ವಾಹನ ಸವಾರರ ಪರದಾಡುವಂತಾಗಿದೆ.

ಸಂಚಾರ ದಟ್ಟಣೆಯಿಂದ ಬಳಲುತ್ತಿರುವ ಪ್ರಯಾಣಿಕರು, ಆದಷ್ಟು ಬೇಗ ಕಾಮಗಾರಿ‌ ಮುಗಿಸಿ ವಾಹನ ಸವಾರರ ಓಡಾಟಕ್ಕೆ ಅನಕೂಲ ಮಾಡಿಕೊಡುವಂತೆ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.

ಮೈಸೂರು ರಸ್ತೆ, ಬನಶಂಕರಿ, ನಾಯಂಡಳ್ಳಿ, ಶ್ರೀನಗರ ಅಲ್ಲದೇ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ ಪಿ‌ಇಎಸ್ ಕಾಲೇಜು ಬಳಿಯ ಜಂಕ್ಷನ್ ಇದಾಗಿದೆ. ಆದರೆ ಫ್ಲೈ ಓವರ್ ಕಾಮಗಾರಿಯಿಂದ ಈಕಡೆಯಿಂದ ಆಕಡೆಯ ರಸ್ತೆಗೆ ಹೋಗಬೇಕು ಎಂದರೆ ಅರ್ಧ ಕಿಲೋ ಮೀಟರ್ ಸುತ್ತಿ ಬಳಸಿ ಬರಬೇಕು. ಮತ್ತೊಂದೆಡೆಗೆ ಪಾದಚಾರಿಗಳಿಗೂ ರಸ್ತೆ ದಾಟಲೂ ತೊಂದರೆ. ಕೆಲಸಕ್ಕೆ ಹೋಗುವವರು, ಬರುವರು ಪ್ರತಿನಿತ್ಯ ಇಲ್ಲಿ ಓಡಾಡಬೇಕು ಅಂದರೆ ಹತ್ತು ನಿಮಿಷದ ದಾರಿಗೆ ಅರ್ಧ ಗಂಟೆ ವರೆಗೂ ಟ್ರಾಫಿಕ್​​ ಜಾಮ್​ನಲ್ಲಿ ಸಿಲುಕಿ ಪರದಾಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಕಾಮಗಾರಿ ಆದಷ್ಟು ಬೇಗ ಮುಗಿಸುವಂತೆ ವಾಹನ ಸವಾರರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗ: ಬೊಮ್ಮಸಂದ್ರ ನಿಲ್ದಾಣಕ್ಕೆ ತೈವಾನ್‌ ಕಂಪನಿಯ ಹೆಸರು! ಕಾರಣ ಇಲ್ಲಿದೆ

ಒಟ್ಟಿನಲ್ಲಿ ಆಮೆ ಗತಿಯಲ್ಲಿ ಸಾಗುತ್ತಿರುವ ಫ್ಲೈ ಓವರ್ ಕಾಮಗಾರಿಯಿಂದ ಪ್ರತಿನಿತ್ಯ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಟ್ರಾಫಿಕ್ ಸಮಸ್ಯೆಯಿಂದ ರೋಸಿ ಹೋಗುವಂತಾಗಿದೆ. ಬಿಬಿಎಂಪಿ ಅಧಿಕಾರಿಗಳು ಆದಷ್ಟು ಬೇಗನೆ ಎಚ್ಚೆತ್ತುಕೊಂಡು ಕಾಮಗಾರಿ‌ ಪೂರ್ಣಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನಕೂಲ ಮಾಡಿಕೊಡಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Wed, 11 December 24

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!