ಬೆಂಗಳೂರು, ಡಿಸೆಂಬರ್ 11: ಬೆಂಗಳೂರಿನ ಹೊರ ವರ್ತುಲ ರಸ್ತೆಯ ಹೊಸಕೆರೆಹಳ್ಳಿ ಬಳಿ ನಾಯಂಡಳ್ಳಿ-ಹೊಸಕೆರೆಹಳ್ಳಿ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದೆ. ಕಳೆದ ಮೂರು ವರ್ಷಳ ಹಿಂದೆ ಕಾಮಗಾರಿ ಆರಂಭ ಮಾಡಲಾಗಿತ್ತು. 380 ಮೀಟರ್ ಉದ್ದದ ಮೇಲ್ಸೇತುವೆ ಇದಾಗಿದ್ದು, 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಕಾಮಗಾರಿ ವಿಳಂಬ ನೀತಿ ಧೋರಣೆಯಿಂದ ಬೆಳಿಗ್ಗೆ, ಸಾಯಂಕಾಲ ಪೀಕ್ ಅವರ್ ಸಂದರ್ಭದಲ್ಲಿ ಭಾರಿ ಸಂಚಾರ ದಟ್ಟಣೆಯಿಂದಾಗಿ ವಾಹನ ಸವಾರರ ಪರದಾಡುವಂತಾಗಿದೆ.
ಸಂಚಾರ ದಟ್ಟಣೆಯಿಂದ ಬಳಲುತ್ತಿರುವ ಪ್ರಯಾಣಿಕರು, ಆದಷ್ಟು ಬೇಗ ಕಾಮಗಾರಿ ಮುಗಿಸಿ ವಾಹನ ಸವಾರರ ಓಡಾಟಕ್ಕೆ ಅನಕೂಲ ಮಾಡಿಕೊಡುವಂತೆ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.
ಮೈಸೂರು ರಸ್ತೆ, ಬನಶಂಕರಿ, ನಾಯಂಡಳ್ಳಿ, ಶ್ರೀನಗರ ಅಲ್ಲದೇ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ ಪಿಇಎಸ್ ಕಾಲೇಜು ಬಳಿಯ ಜಂಕ್ಷನ್ ಇದಾಗಿದೆ. ಆದರೆ ಫ್ಲೈ ಓವರ್ ಕಾಮಗಾರಿಯಿಂದ ಈಕಡೆಯಿಂದ ಆಕಡೆಯ ರಸ್ತೆಗೆ ಹೋಗಬೇಕು ಎಂದರೆ ಅರ್ಧ ಕಿಲೋ ಮೀಟರ್ ಸುತ್ತಿ ಬಳಸಿ ಬರಬೇಕು. ಮತ್ತೊಂದೆಡೆಗೆ ಪಾದಚಾರಿಗಳಿಗೂ ರಸ್ತೆ ದಾಟಲೂ ತೊಂದರೆ. ಕೆಲಸಕ್ಕೆ ಹೋಗುವವರು, ಬರುವರು ಪ್ರತಿನಿತ್ಯ ಇಲ್ಲಿ ಓಡಾಡಬೇಕು ಅಂದರೆ ಹತ್ತು ನಿಮಿಷದ ದಾರಿಗೆ ಅರ್ಧ ಗಂಟೆ ವರೆಗೂ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪರದಾಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಕಾಮಗಾರಿ ಆದಷ್ಟು ಬೇಗ ಮುಗಿಸುವಂತೆ ವಾಹನ ಸವಾರರು ಆಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗ: ಬೊಮ್ಮಸಂದ್ರ ನಿಲ್ದಾಣಕ್ಕೆ ತೈವಾನ್ ಕಂಪನಿಯ ಹೆಸರು! ಕಾರಣ ಇಲ್ಲಿದೆ
ಒಟ್ಟಿನಲ್ಲಿ ಆಮೆ ಗತಿಯಲ್ಲಿ ಸಾಗುತ್ತಿರುವ ಫ್ಲೈ ಓವರ್ ಕಾಮಗಾರಿಯಿಂದ ಪ್ರತಿನಿತ್ಯ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಟ್ರಾಫಿಕ್ ಸಮಸ್ಯೆಯಿಂದ ರೋಸಿ ಹೋಗುವಂತಾಗಿದೆ. ಬಿಬಿಎಂಪಿ ಅಧಿಕಾರಿಗಳು ಆದಷ್ಟು ಬೇಗನೆ ಎಚ್ಚೆತ್ತುಕೊಂಡು ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನಕೂಲ ಮಾಡಿಕೊಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:15 am, Wed, 11 December 24