AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಿನಿ ಎಲೆಕ್ಟ್ರಿಕ್ ಬೈಕ್‌ಗಳ ಹಾವಳಿ: ಸಂಚಾರ ನಿಯಮ ಗಾಳಿಗೆ ತೂರಿ ಪಾದಾಚಾರಿಗಳ ಜೀವದ ಜೊತೆ ಚೆಲ್ಲಾಟ!

ಬೆಂಗಳೂರಿನಲ್ಲಿ ಮಿನಿ ಎಲೆಕ್ಟ್ರಿಕ್ ಬೈಕ್ ಸವಾರರ ನಿಯಮ ಉಲ್ಲಂಘನೆ ಹೆಚ್ಚುತ್ತಿದ್ದು, ಪಾದಾಚಾರಿಗಳ ಭದ್ರತೆಗೆ ಭೀತಿ ಎದುರಾಗಿದೆ. 250 ವ್ಯಾಟ್ಸ್‌ಗಿಂತ ಕಡಿಮೆ ಸಾಮರ್ಥ್ಯ ಹೊಂದಿರುವ ಈ ವಾಹನಗಳು ಮೋಟಾರು ವಾಹನ ಕಾಯ್ದೆಯಡಿ ಬಾರದ ಕಾರಣ ಕಠಿಣ ಕ್ರಮ ಕೈಗೊಳ್ಳಲು ಸವಾಲಾಗಿದೆ. ಸಾರ್ವಜನಿಕರ ಆತಂಕ ಹಾಗೂ ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ.

ಬೆಂಗಳೂರಿನಲ್ಲಿ ಮಿನಿ ಎಲೆಕ್ಟ್ರಿಕ್ ಬೈಕ್‌ಗಳ ಹಾವಳಿ: ಸಂಚಾರ ನಿಯಮ ಗಾಳಿಗೆ ತೂರಿ ಪಾದಾಚಾರಿಗಳ ಜೀವದ ಜೊತೆ ಚೆಲ್ಲಾಟ!
ಸಾಂದರ್ಭಿಕ ಚಿತ್ರ
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on:Oct 19, 2026 | 1:37 PM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಸಂಚಾರ ನಿಯಮ ಗಾಳಿಗೆ ತೂರಿ ಓಡಾಡುತ್ತಿರುವ ಮಿನಿ ಎಲೆಕ್ಟ್ರಿಕ್ ಬೈಕ್‌ಗಳು.
  • ಕೇವಲ 250 ವ್ಯಾಟ್ಸ್ ಸಾಮರ್ಥ್ಯದಿಂದಾಗಿ ನಿಯಮ ಉಲ್ಲಂಘಿಸಿದರೂ ಸಿಗುತ್ತಿಲ್ಲ ಸೂಕ್ತ ದಂಡ.
  • ಅಪಾಯಕಾರಿ ಸವಾರಿಯಿಂದ ಪಾದಾಚಾರಿಗಳ ಜೀವಕ್ಕೆ ಹೆಚ್ಚಿದ ಕುತ್ತು, ಕಾನೂನು ಬದಲಾವಣೆಗೆ ಆಗ್ರಹ.

ಬೆಂಗಳೂರು, ಅಕ್ಟೋಬರ್ 19: ಪರಿಸರ ಸ್ನೇಹಿ ಎನ್ನುವ ಕಾರಣಕ್ಕೆ ಬೆಂಗಳೂರಿನಲ್ಲಿ ಇತ್ತೀಚೆಗೆ ಮಿನಿ ಎಲೆಕ್ಟ್ರಿಕ್ ಬೈಕ್‌ಗಳ ಬಳಕೆ ಹೆಚ್ಚಾಗುತ್ತಿದೆ. ನಗರದಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಇದು ಬೆಂಬಲ ನೀಡುತ್ತಿದ್ದರೂ, ಮತ್ತೊಂದೆಡೆ ಈ ವಾಹನಗಳ ಸವಾರರು ಸಂಚಾರ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಓಡಾಡುತ್ತಿರುವುದು ಸಾರ್ವಜನಿಕರಲ್ಲಿ ತೀವ್ರ ಕಳವಳ ಮೂಡಿಸಿದೆ. ಸಿಗ್ನಲ್ ಜಂಪ್, ಫುಟ್‌ಪಾತ್ ಮೇಲೆ ಸವಾರಿ, ನೋ-ಎಂಟ್ರಿಯಲ್ಲಿ ಪ್ರವೇಶ ಹಾಗೂ ಹೆಲ್ಮೆಟ್ ಇಲ್ಲದೆ ವಾಹನ ಚಾಲನೆ ಮಾಡುವ ಪ್ರಕರಣಗಳು ಮಿನಿ ಎಲೆಕ್ಟ್ರಿಕ್ ಬೈಕ್ ಸವಾರರಲ್ಲಿ ಹೆಚ್ಚಾಗುತ್ತಿವೆ. ನಗರದಾದ್ಯಂತ ಪಾದಾಚಾರಿಗಳ ಜೀವಕ್ಕೆ ಕುತ್ತು ತರುತ್ತಿದ್ದರೂ ಇವರ ವಿರುದ್ಧ ಯಾವುದೇ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ.

ಕಾನೂನಿನ ನ್ಯೂನತೆಯೇ ಸವಾರರಿಗೆ ವರ!

ಇದಕ್ಕೆ ಪ್ರಮುಖ ಕಾರಣ ಮೋಟಾರು ವಾಹನ ಕಾಯ್ದೆಯಲ್ಲಿರುವ ಕೆಲ ತಾಂತ್ರಿಕ ನ್ಯೂನತೆಗಳು. 250 ವ್ಯಾಟ್ಸ್‌ಗಿಂತ ಕಡಿಮೆ ಸಾಮರ್ಥ್ಯ ಹೊಂದಿರುವ ಹಾಗೂ ಗಂಟೆಗೆ 25 ಕಿ.ಮೀ ಗಿಂತ ಕಡಿಮೆ ವೇಗದ ಮಿನಿ ಎಲೆಕ್ಟ್ರಿಕ್ ವಾಹನಗಳು ಮೋಟಾರು ವಾಹನ ಕಾಯ್ದೆಯಡಿ ಬರುವುದಿಲ್ಲ. ಪರಿಣಾಮವಾಗಿ, ನಿಯಮ ಉಲ್ಲಂಘಿಸುವ ಇಂತಹ ಸವಾರರ ಮೇಲೆ ಟ್ರಾಫಿಕ್ ಪೊಲೀಸರು ದಂಡ ಅಥವಾ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಅವರು, “ಸದ್ಯಕ್ಕೆ ಮೋಟಾರು ವಾಹನ ಕಾಯ್ದೆಯಡಿ ಇಂತಹ ವಾಹನಗಳ ಮೇಲೆ ಕೇಸ್ ಹಾಕಲು ಅವಕಾಶವಿಲ್ಲದ ಕಾರಣ, ನಾವು ಸವಾರರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನಷ್ಟೇ ಮಾಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

LIVE TV

ಪಾದಾಚಾರಿಗಳಿಗೆ ಹಾನಿಯಾದರೆ ಹೊಣೆ ಯಾರು?

ಆದರೆ ಸಾಮಾನ್ಯ ಬೈಕ್‌ಗಳಷ್ಟೇ ವೇಗವಾಗಿ ಚಲಿಸುವ ಈ ಮಿನಿ ಇ-ಬೈಕ್‌ಗಳಿಂದ ರಸ್ತೆ ಅಪಘಾತಗಳು ಮತ್ತು ಪಾದಾಚಾರಿಗಳಿಗೆ ಹಾನಿಯಾದರೆ ಹೊಣೆ ಯಾರು ಎನ್ನುವುದು ವಾಹನ ಸವಾರ ರಾಯಪ್ಪ ಸೇರಿದಂತೆ ಹಲವು ಸಾರ್ವಜನಿಕರ ಪ್ರಶ್ನೆಯಾಗಿದೆ. ಇನ್ನಾದರೂ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ವಾಹನಗಳಿಗೆ ಸೂಕ್ತ ಸಂಚಾರ ನಿಯಮ ಮತ್ತು ಕಠಿಣ ಕಾನೂನು ರೂಪಿಸಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:38 am, Mon, 19 October 26

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
ಗಾನವಿ ಮಾಡಿದ ಡ್ರಾಮಾ ಬಯಲು ಮಾಡಿದ ಸುದೀಪ್: ವಿಡಿಯೋ ನೋಡಿ
ಗಾನವಿ ಮಾಡಿದ ಡ್ರಾಮಾ ಬಯಲು ಮಾಡಿದ ಸುದೀಪ್: ವಿಡಿಯೋ ನೋಡಿ
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ
ಕೈಕೊಟ್ಟ ಮಳೆ: ಉಡುಪಿಯಲ್ಲಿ ರೈತರು, ಮೀನುಗಾರರಿಗೆ ಸಂಕಷ್ಟ!
ಕೈಕೊಟ್ಟ ಮಳೆ: ಉಡುಪಿಯಲ್ಲಿ ರೈತರು, ಮೀನುಗಾರರಿಗೆ ಸಂಕಷ್ಟ!
ಲೆಟರ್ ವಿಷಯದಲ್ಲಿ ಗಾನವಿಗೆ ಕ್ಲಾಸ್? ಸೂಚನೆ ಕೊಟ್ಟ ಸುದೀಪ್
ಲೆಟರ್ ವಿಷಯದಲ್ಲಿ ಗಾನವಿಗೆ ಕ್ಲಾಸ್? ಸೂಚನೆ ಕೊಟ್ಟ ಸುದೀಪ್
ಸ್ಟಿಂಗ್ ಕೇಸ್: ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸ್ಫೋಟಕ ಹೇಳಿಕೆ
ಸ್ಟಿಂಗ್ ಕೇಸ್: ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸ್ಫೋಟಕ ಹೇಳಿಕೆ
ದೇವಿರಮ್ಮ ಜಾತ್ರೆಯಲ್ಲಿ ನಟಿ ಅಮೂಲ್ಯ; ಬೆಟ್ಟ ಏರಿ ದೇವರದರ್ಶನ ಪಡೆದ ನಟಿ
ದೇವಿರಮ್ಮ ಜಾತ್ರೆಯಲ್ಲಿ ನಟಿ ಅಮೂಲ್ಯ; ಬೆಟ್ಟ ಏರಿ ದೇವರದರ್ಶನ ಪಡೆದ ನಟಿ
ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ !
ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ !
ಅತ್ತಿಬೆಲೆ ಪಟಾಕಿ ಮಾರುಕಟ್ಟೆಯಲ್ಲಿ ಈ ಬಾರಿ ಮಾರಾಟ ಶೇ 30 ರಷ್ಟು ಕುಸಿತ!
ಅತ್ತಿಬೆಲೆ ಪಟಾಕಿ ಮಾರುಕಟ್ಟೆಯಲ್ಲಿ ಈ ಬಾರಿ ಮಾರಾಟ ಶೇ 30 ರಷ್ಟು ಕುಸಿತ!