AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಟೋ ಕಳ್ಳಾಟಕ್ಕೆ ಟ್ರಾಫಿಕ್ ಪೊಲೀಸ್ ಬ್ರೇಕ್, ಮೂರೇ ತಿಂಗಳಲ್ಲಿ ಸುಮಾರು 3 ಸಾವಿರ ಕೇಸ್ ದಾಖಲು!

ಬೆಂಗಳೂರಿನಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುವ ಮತ್ತು ಬಾಡಿಗೆಗೆ ಬರಲು ನಿರಾಕರಿಸುವ ಆಟೋ ಚಾಲಕರ ವಿರುದ್ಧ ಸಂಚಾರಿ ಪೊಲೀಸರು ಸಮರ ಸಾರಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇಂತಹ ಚಾಲಕರ ವಿರುದ್ಧ 2,988 ಪ್ರಕರಣಗಳನ್ನು ದಾಖಲಿಸುವ ಮೂಲಕ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಬೆಂಗಳೂರು: ಆಟೋ ಕಳ್ಳಾಟಕ್ಕೆ ಟ್ರಾಫಿಕ್ ಪೊಲೀಸ್ ಬ್ರೇಕ್, ಮೂರೇ ತಿಂಗಳಲ್ಲಿ ಸುಮಾರು 3 ಸಾವಿರ ಕೇಸ್ ದಾಖಲು!
ಸಾಂದರ್ಭಿಕ ಚಿತ್ರImage Credit source: tv9
ಕಿರಣ್​ ಸೂರ್ಯ
| Edited By: |

Updated on: May 14, 2026 | 7:32 AM

Share

ಬೆಂಗಳೂರು, ಮೇ 14: ಬೆಂಗಳೂರಿನಲ್ಲಿ (Bengaluru) ಪ್ರಯಾಣಿಕರ ಸುಲಿಗೆಗೆ ಇಳಿಯುವ ಮತ್ತು ಕರೆದ ಕಡೆ ಬರಲು ನಿರಾಕರಿಸುವ ಆಟೋ ಚಾಲಕರಿಗೆ ಬೆಂಗಳೂರು ಸಂಚಾರಿ ಪೊಲೀಸರು ಭರ್ಜರಿ ಬಿಸಿ ಮುಟ್ಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುವ ಮತ್ತು ಸಂಜೆ ಆಗುತ್ತಿದ್ದಂತೆ ಮೀಟರ್ ದರಕ್ಕಿಂತ ಒಂದೂವರೆ ಪಟ್ಟು (One and Half) ಹಣ ಕೇಳುವ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮೂರು ತಿಂಗಳ ಅವಧಿಯಲ್ಲೇ 2,988 ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಖ್ಯಾಂಶಗಳು

  • ಹೆಚ್ಚುವರಿ ಹಣ ವಸೂಲಿ ಮತ್ತು ಬಾಡಿಗೆಗೆ ಬರಲು ನಿರಾಕರಿಸಿದ ಆಟೋ ಚಾಲಕರ ವಿರುದ್ಧ ಕಳೆದ 3 ತಿಂಗಳಲ್ಲಿ ಒಟ್ಟು 2,988 ಪ್ರಕರಣಗಳು ದಾಖಲು.
  • ಹೆಚ್ಚುವರಿ ಬಾಡಿಗೆ ಕೇಳಿದ 1,354 ಮತ್ತು ನಿಗದಿಪಡಿಸಿದ ಸ್ಥಳಕ್ಕೆ ಬರಲು ನಿರಾಕರಿಸಿದ 1,634 ಚಾಲಕರ ವಿರುದ್ಧ ದೂರು ದಾಖಲು.
  • ರಾತ್ರಿ 10 ಗಂಟೆಯ ಬದಲಿಗೆ 8 ಗಂಟೆಗೇ ಒಂದೂವರೆ ಪಟ್ಟು (One and Half) ದರ ಕೇಳುವವರ ವಿರುದ್ಧ ಪೊಲೀಸರ ಕಟ್ಟುನಿಟ್ಟಿನ ಕ್ರಮ.

ಕಾರ್ಯಾಚರಣೆಯ ವಿವರ

ನಗರದ ಅನೇಕ ಭಾಗಗಳಲ್ಲಿ ಆಟೋ ಚಾಲಕರು ಪ್ರಯಾಣಿಕರು ಕರೆದ ಕಡೆ ಬರುವುದಿಲ್ಲ ಹಾಗೂ ಒಂದು ವೇಳೆ ಬಂದರೂ ದುಪ್ಪಟ್ಟು ಹಣ ಕೇಳುತ್ತಾರೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬಂದಿದ್ದವು. ಈ ಬಗ್ಗೆ ಸಾರ್ವಜನಿಕರು ಸಾರಿಗೆ ಇಲಾಖೆ ಮತ್ತು ಸಂಚಾರಿ ಪೊಲೀಸರಿಗೆ ನೀಡಿದ ದೂರಿನ ಆಧಾರದ ಮೇಲೆ ಕಳೆದ ಮೂರು ತಿಂಗಳಿನಿಂದ ನಿರಂತರ ಕಾರ್ಯಾಚರಣೆ ನಡೆಸಲಾಗಿದೆ. ವಿಶೇಷವಾಗಿ ಭಾಷೆ ತಿಳಿಯದ ಹೊರರಾಜ್ಯದ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಹಣ ವಸೂಲಿ ಮಾಡುವ ಚಾಲಕರ ವಿರುದ್ಧ ಪೊಲೀಸರು ದಂಡದ ಬಿಸಿ ಮುಟ್ಟಿಸುತ್ತಿದ್ದಾರೆ.

ಆಟೋ ಚಾಲಕರ ಬಗ್ಗೆ ಪ್ರಯಾಣಿಕರ ಅಸಮಾಧಾನ

ನಿಯಮದ ಪ್ರಕಾರ ರಾತ್ರಿ 10 ಗಂಟೆಯ ನಂತರವಷ್ಟೇ ಒಂದೂವರೆ ಪಟ್ಟು ದರ ತೆಗೆದುಕೊಳ್ಳಲು ಅವಕಾಶವಿದೆ. ಆದರೆ, ಅನೇಕ ಚಾಲಕರು ರಾತ್ರಿ 8 ಗಂಟೆಯಿಂದಲೇ ಈ ದರ ವಸೂಲಿ ಮಾಡುತ್ತಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿದ ಪ್ರಯಾಣಿಕ ರಾಮು, ಚಾಲಕರ ಈ ವರ್ತನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ, ಪ್ರಾಮಾಣಿಕವಾಗಿ ಕೆಲಸ ಮಾಡುವ ಆಟೋ ಚಾಲಕ ಸತೀಶ್ ಅವರು, ‘ಪ್ರಯಾಣಿಕರೇ ನಮ್ಮ ದೇವರು, ನಾವು ದುಪ್ಪಟ್ಟು ಹಣ ಕೇಳಬಾರದು’ ಎಂದು ಸಹೋದ್ಯೋಗಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜಾರಿಯಾಗದ ಆಟೋ ಮೀಟರ್ ಹೊಸ ದರ: ದುಪ್ಪಟ್ಟು ವಸೂಲಿ, ಪ್ರಯಾಣಿಕರು ಆಕ್ರೋಶ

ಕೆಲವೇ ಕೆಲವು ಚಾಲಕರ ಇಂತಹ ದುರ್ವರ್ತನೆಯಿಂದ ಇಡೀ ಆಟೋ ಚಾಲಕರ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಸದ್ಯ ಪೊಲೀಸರು ಅಲರ್ಟ್ ಆಗಿದ್ದು, ಸಾರ್ವಜನಿಕರು ದೂರು ನೀಡಿದ ಕೂಡಲೇ ಸ್ಪಂದಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ