AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್ ಪೋಲೀಸರು ಇನ್ಮುಂದೆ ಕೂಲ್ ಕೂಲ್! ಬಿಸಿಲ ಬೇಗೆಯ ನಿಯಂತ್ರಣಕ್ಕೆ 20 AC ಹೆಲ್ಮೆಟ್ ವಿತರಣೆ

ಹೆಚ್ಚುತ್ತಿರುವ ಬಿಸಿಲಿನ ಬೇಗೆಯಿಂದ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸರನ್ನು ರಕ್ಷಿಸಲು ಬೆಂಗಳೂರು ಉತ್ತರ ಮಹಾನಗರ ಪಾಲಿಕೆ (BNCC) ಮಹತ್ವದ ಹೆಜ್ಜೆಯಿಟ್ಟಿದೆ. ಪೈಲಟ್ ಯೋಜನೆಯಡಿ ಪ್ರಾಯೋಗಿಕವಾಗಿ 20 ಅತ್ಯಾಧುನಿಕ ಎಸಿ ಹೆಲ್ಮೆಟ್‌ಗಳನ್ನು ಟ್ರಾಫಿಕ್ ಪೊಲೀಸರಿಗೆ ವಿತರಿಸಲಾಗಿದೆ. 'ಹೀಟ್-ಹೆಲ್ತ್ ಪ್ರೊಟೊಕಾಲ್' ಅಡಿಯಲ್ಲಿ ಆಯೋಜಿಸಲಾದ ಈ ಯೋಜನೆಯನ್ನು ಮುಂಬರುವ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ ಹಾಗೂ ಸರ್ಕಾರಿ ಸಿಬ್ಬಂದಿಗೂ ವಿಸ್ತರಿಸುವ ಸಾಧ್ಯತೆಯಿದೆ.

ಬೆಂಗಳೂರು ಟ್ರಾಫಿಕ್ ಪೋಲೀಸರು ಇನ್ಮುಂದೆ ಕೂಲ್ ಕೂಲ್! ಬಿಸಿಲ ಬೇಗೆಯ ನಿಯಂತ್ರಣಕ್ಕೆ 20 AC ಹೆಲ್ಮೆಟ್ ವಿತರಣೆ
ಬಿಸಿಲ ಬೇಗೆಯ ನಿಯಂತ್ರಣಕ್ಕೆ 20 AC ಹೆಲ್ಮೆಟ್ ವಿತರಣೆ Image Credit source: The New Indian Express
ಭಾವನಾ ಹೆಗಡೆ
|

Updated on: Jun 05, 2026 | 11:54 AM

Share

ಬೆಂಗಳೂರು, ಜೂನ್ 05: ಹೆಚ್ಚುತ್ತಿರುವ ತಾಪಮಾನ ಮತ್ತು ಬಿಸಿಲಿನ ಬೇಗೆಯಿಂದ ರಸ್ತೆಗಿಳಿದು ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸರನ್ನು ರಕ್ಷಿಸಲು ಬೆಂಗಳೂರು ಉತ್ತರ ಮಹಾನಗರ ಪಾಲಿಕೆ (BNCC) ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪೈಲಟ್ ಯೋಜನೆಯಡಿಯಲ್ಲಿ ನಗರದ ಸಂಚಾರಿ ಪೊಲೀಸ್ ಸಿಬ್ಬಂದಿಗೆ AC ಹೆಲ್ಮೆಟ್‌ಗಳನ್ನು ವಿತರಿಸಲಾಗಿದೆ.

ಮುಖ್ಯಾಂಶಗಳು

  • ಬೆಂಗಳೂರು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಬಿಎನ್‌ಸಿಸಿಯಿಂದ ಹೈಟೆಕ್ ಎಸಿ ಹೆಲ್ಮೆಟ್‌ಗಳ ವಿತರಣೆ.
  • ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ 20 ಎಸಿ ಹೆಲ್ಮೆಟ್‌ಗಳನ್ನು ನೀಡಿದ ಮಹಾನಗರ ಪಾಲಿಕೆ.
  • ಮುಂಬರುವ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗೂ ಈ ಯೋಜನೆ ವಿಸ್ತರಿಸಲು ಪ್ರಸ್ತಾವನೆ.

ಬಿಸಿಲಿನ ತಾಪದಿಂದ ರಕ್ಷಣೆ ನೀಡಲಿವೆ 20 ಎಸಿ ಹೆಲ್ಮೆಟ್‌ಗಳು

ಹವಾಮಾನ ವೈಪರೀತ್ಯ ಮತ್ತು ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಹೊರಾಂಗಣದಲ್ಲಿ ಮತ್ತು ಸಿಗ್ನಲ್‌ಗಳಲ್ಲಿ ಗಂಟೆಗಟ್ಟಲೆ ನಿಂತು ಕೆಲಸ ಮಾಡುವ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅತ್ಯಂತ ಪ್ರಮುಖವಾಗಿದೆ. ಹೀಗಾಗಿ ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ 20 ಅತ್ಯಾಧುನಿಕ ಎಸಿ ಹೆಲ್ಮೆಟ್‌ಗಳನ್ನು ಸಂಚಾರಿ ಪೊಲೀಸರಿಗೆ ವಿತರಿಸಲಾಗಿದೆ. ‘ಹೀಟ್-ಹೆಲ್ತ್ ಪ್ರೊಟೊಕಾಲ್’ (Heat-Health Protocol) ಅಡಿಯಲ್ಲಿ ಬೆಂಗಳೂರು ಉತ್ತರ ಮಹಾನಗರ ಪಾಲಿಕೆಯು C40 ಸಿಟೀಸ್, ಸೆನ್ಸಿಂಗ್ ಲೋಕಲ್ ಮತ್ತು ಹಸಿರು ದಳ ಸಂಸ್ಥೆಗಳ ಸಹಯೋಗದೊಂದಿಗೆ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಇಂದಿರಾ ಕ್ಯಾಂಟೀನ್, ಸರ್ಕಾರಿ ಕಚೇರಿಗಳಿಗೂ ವಿಸ್ತರಣೆ ಸಾಧ್ಯತೆ

ಈ ಕುರಿತು ಮಾಹಿತಿ ನೀಡಿರುವ ಬಿಎನ್‌ಸಿಸಿ ಕಮಿಷನರ್ ಪೊಮ್ಮಲ ಸುನಿಲ್ ಕುಮಾರ್, ಬಿಸಿಲಿನ ತಾಪದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಈ ಹಿಂದೆಯೇ ಬಿಎನ್‌ಸಿಸಿ ಪೌರಕಾರ್ಮಿಕರು, ಆಶಾ (ASHA) ಕಾರ್ಯಕರ್ತೆಯರು ಮತ್ತು ಒಣ ಕಸ ಸಂಗ್ರಹಣಾ ಕೇಂದ್ರದ ಕಾರ್ಮಿಕರಿಗೆ ಇಂತಹ ಕೂಲಿಂಗ್ ಕಿಟ್‌ಗಳನ್ನು ವಿತರಿಸಲಾಗಿತ್ತು. ಈಗ ಇದನ್ನು ಸಂಚಾರಿ ಪೊಲೀಸರಿಗೂ ವಿಸ್ತರಿಸಲಾಗಿದೆ ಎಂದಿದ್ದಾರೆ. ಮುಂಬರುವ ದಿನಗಳಲ್ಲಿ ಈ ಯೋಜನೆಯನ್ನು ಇಂದಿರಾ ಕ್ಯಾಂಟೀನ್‌ ಸಿಬ್ಬಂದಿ ಹಾಗೂ ಇತರೆ ಸರ್ಕಾರಿ ಕಚೇರಿಗಳಿಗೂ ವಿಸ್ತರಿಸುವ ಪ್ರಸ್ತಾವನೆ ಇದೆ ಎಂದು ಅವರು ತಿಳಿಸಿದ್ದಾರೆ.

ಈ ವಿಶೇಷ ಕಾರ್ಯಕ್ರಮದಲ್ಲಿ ತಾಪಮಾನ ಹೆಚ್ಚಳದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು, ‘ಹೀಟ್ ಸ್ಟ್ರೆಸ್’ (Heat Stress) ಲಕ್ಷಣಗಳು, ತುರ್ತು ಪರಿಸ್ಥಿತಿಯಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸುರಕ್ಷತಾ ನಿಯಮಗಳ ಕುರಿತು ಸಂಚಾರಿ ಪೊಲೀಸರಿಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಸಂಚಾರಿ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ