ಬೆಂಗಳೂರಿನ ಸಾದಹಳ್ಳಿ ಜಂಕ್ಷನ್​ನಿಂದ ಹೆಬ್ಬಾಳ ಫ್ಲೈಓವರ್​ ವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಬೆಂಗಳೂರಿನ ಹೆಬ್ಬಾಳ ರಸ್ತೆ ಜಂಕ್ಷನ್‌ನಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯ ಸಮಸ್ಯೆನ್ನು ತಡೆಗಟ್ಟುವ ಸಲುವಾಗಿ ಟ್ರಾಫಿಕ್ ಪೊಲೀಸ್ ಹೊಸದೊಂದು ನಿಯಮ ಜಾರಿಗೆ ತಂದಿದೆ.

ಬೆಂಗಳೂರಿನ ಸಾದಹಳ್ಳಿ ಜಂಕ್ಷನ್​ನಿಂದ ಹೆಬ್ಬಾಳ ಫ್ಲೈಓವರ್​ ವರೆಗೆ ಭಾರೀ  ವಾಹನಗಳ ಸಂಚಾರ ನಿಷೇಧ
ಸಾದಹಳ್ಳಿ ಜಂಕ್ಷನ್​ನಿಂದ ಹೆಬ್ಬಾಳ ಫ್ಲೈಓವರ್​ ವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 21, 2022 | 3:14 PM

ಬೆಂಗಳೂರು: ಬೆಂಗಳೂರಿನಿಂದ ಇತರ ಪ್ರದೇಶಗಳಲ್ಲಿ ತೆರಳಲು ಸಂಪರ್ಕ ಕೊಂಡಿಯಾಗಿರುವ ಹೆಬ್ಬಾಳ ರಸ್ತೆ ಜಂಕ್ಷನ್‌ನಲ್ಲಿ (Hebbal junction) ಸಂಚಾರ ದಟ್ಟಣೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸ್ (bengaluru traffic police) ಮಹತ್ವದ ನಿಯಮವೊಂದನ್ನು ಜಾರಿಗೆ ತಂದಿದೆ. ವಿಮಾನ ನಿಲ್ದಾಣ ಮತ್ತು ನಗರದ ನಡುವಿನ ಪ್ರಯಾಣವನ್ನು ಸುಲಭಗೊಳಿಸಲು ಸಾದಹಳ್ಳಿ ಜಂಕ್ಷನ್​ನಿಂದ ಹೆಬ್ಬಾಳ ಫ್ಲೈಓವರ್ (hebbal flyover) ವರೆಗೆ ಪೀಕ್ ಅವರ್​ನಲ್ಲಿ ಭಾರೀ (ಸರಕು ಸಾರಿಗೆ) ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಬೆಂಗಳೂರು ಟ್ರಾಫಿಕ್ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಅವರು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ಈ ಆದೇಶದ ಪ್ರಕಾರ ಪ್ರತಿದಿನ ಬೆಳಗ್ಗೆ 8.30 ರಿಂದ ಬೆಳಗ್ಗೆ 10.30ರ ವರೆಗೆ (ಎರಡು ಗಂಟೆ) ಭಾರೀ (ಸರಕು ಸಾರಿಗೆ) ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ನಿಯಮ 18/11/2022ರಿಂದ ಒಂದು ತಿಂಗಳ ವರೆಗೆ ಜಾರಿಯಲ್ಲಿರುತ್ತದೆ.

ಬೆಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-7ನಲ್ಲಿ ಪ್ರತಿದಿನ ಲಕ್ಷಾಂತರ ಸರಕು ಸಾರಿಗೆ ವಾನಗಳು ಸಂಚರಿಸುತ್ತಿದ್ದು, ಇದರಿಂದಾಗಿ ದೈನಂದಿನ ಪೀಕ್ ಅವರ್​ನಲ್ಲಿ ಸಂಚಾರದಲ್ಲಿ ವ್ಯತ್ಯಯವಾಗುತ್ತಿದೆ. ಇದನ್ನು ಗಮನಿಸಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಸಂಚಾರ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಆದೇಶದಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಈಶಾನ್ಯ ಪ್ರದೇಶವಾದ ಹೆಬ್ಬಾಳ, ಯಲಹಂಕ, ಚಿಕ್ಕಜಾಲ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಕೈಗಾರಿಕೆಗಳು, ವಾಣಿಜ್ಯೋದ್ಯಮಗಳು ತಲೆ ಎತ್ತಿವೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಜನಸಂಖ್ಯೆಯೂ ಸಹ ಹೆಚ್ಚುತ್ತಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿದಿನ ಸಾವಿರಾರು ಬಂದು ಆಗಮಿಸಿ ರಸ್ತೆಯ ಮೂಲಕವೇ ನಗರವನ್ನು ತಲುಪುವುದು ಅನಿವಾರ್ಯವಾಗಿರುತ್ತಿದೆ. ಅಲ್ಲದೇ ಬೆಂಗಳೂರು ನಗರಕ್ಕೆ ಗಣ್ಯ ಮತ್ತು ಅತಿಗಣ್ಯ ವ್ಯಕ್ತಿಗಳು ಭೇಟಿ ನೀಡುವುದು ಸಾಮಾನ್ಯವಾಗಿದೆ. ಇದರಿಂದ ಗಣ್ಯರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪೊಲೀಸರಿಗೆ ಕಷ್ಟಕರವಾಗಿದೆ. ವಾಹನ ಸವಾರರು ಈ ಭಾಗದಲ್ಲಿ ಓಡಾಡಲು ನಿತ್ಯ ಹೈರಾಣಾಗುತ್ತಿದ್ದಾರೆ. ಈ ಸಂಬಂಧ ಬೆಂಗಳುರು ನಗರ ಟ್ರಾಫಿಕ್ ಪೊಲೀಸ್ ಈ ಕ್ರಮಕೈಗೊಂಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ