ಬೆಂಗಳೂರು: ಬೆಂಗಳೂರಿನಿಂದ ಇತರ ಪ್ರದೇಶಗಳಲ್ಲಿ ತೆರಳಲು ಸಂಪರ್ಕ ಕೊಂಡಿಯಾಗಿರುವ ಹೆಬ್ಬಾಳ ರಸ್ತೆ ಜಂಕ್ಷನ್‌ನಲ್ಲಿ (Hebbal junction) ಸಂಚಾರ ದಟ್ಟಣೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸ್ (bengaluru traffic police) ಮಹತ್ವದ ನಿಯಮವೊಂದನ್ನು ಜಾರಿಗೆ ತಂದಿದೆ. ವಿಮಾನ ನಿಲ್ದಾಣ ಮತ್ತು ನಗರದ ನಡುವಿನ ಪ್ರಯಾಣವನ್ನು ಸುಲಭಗೊಳಿಸಲು ಸಾದಹಳ್ಳಿ ಜಂಕ್ಷನ್ನಿಂದ ಹೆಬ್ಬಾಳ ಫ್ಲೈಓವರ್ (hebbal flyover) ವರೆಗೆ ಪೀಕ್ ಅವರ್ನಲ್ಲಿ ಭಾರೀ (ಸರಕು ಸಾರಿಗೆ) ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಬೆಂಗಳೂರು ಟ್ರಾಫಿಕ್ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಅವರು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ಈ ಆದೇಶದ ಪ್ರಕಾರ ಪ್ರತಿದಿನ ಬೆಳಗ್ಗೆ 8.30 ರಿಂದ ಬೆಳಗ್ಗೆ 10.30ರ ವರೆಗೆ (ಎರಡು ಗಂಟೆ) ಭಾರೀ (ಸರಕು ಸಾರಿಗೆ) ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ನಿಯಮ 18/11/2022ರಿಂದ ಒಂದು ತಿಂಗಳ ವರೆಗೆ ಜಾರಿಯಲ್ಲಿರುತ್ತದೆ.
ಬೆಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-7ನಲ್ಲಿ ಪ್ರತಿದಿನ ಲಕ್ಷಾಂತರ ಸರಕು ಸಾರಿಗೆ ವಾನಗಳು ಸಂಚರಿಸುತ್ತಿದ್ದು, ಇದರಿಂದಾಗಿ ದೈನಂದಿನ ಪೀಕ್ ಅವರ್ನಲ್ಲಿ ಸಂಚಾರದಲ್ಲಿ ವ್ಯತ್ಯಯವಾಗುತ್ತಿದೆ. ಇದನ್ನು ಗಮನಿಸಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಸಂಚಾರ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಆದೇಶದಲ್ಲಿ ತಿಳಿಸಿದ್ದಾರೆ.
“All types of goods vehicles are prohibited between 8.30 am to 10.30 am towards Hebbal from 18.11.2022 @blrcitytraffic @BlrCityPolice pic.twitter.com/trNOkx0CQB
— HEBBALA TRAFFIC PS (@hebbaltrafficps) November 18, 2022
ಬೆಂಗಳೂರು ಈಶಾನ್ಯ ಪ್ರದೇಶವಾದ ಹೆಬ್ಬಾಳ, ಯಲಹಂಕ, ಚಿಕ್ಕಜಾಲ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಕೈಗಾರಿಕೆಗಳು, ವಾಣಿಜ್ಯೋದ್ಯಮಗಳು ತಲೆ ಎತ್ತಿವೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಜನಸಂಖ್ಯೆಯೂ ಸಹ ಹೆಚ್ಚುತ್ತಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿದಿನ ಸಾವಿರಾರು ಬಂದು ಆಗಮಿಸಿ ರಸ್ತೆಯ ಮೂಲಕವೇ ನಗರವನ್ನು ತಲುಪುವುದು ಅನಿವಾರ್ಯವಾಗಿರುತ್ತಿದೆ. ಅಲ್ಲದೇ ಬೆಂಗಳೂರು ನಗರಕ್ಕೆ ಗಣ್ಯ ಮತ್ತು ಅತಿಗಣ್ಯ ವ್ಯಕ್ತಿಗಳು ಭೇಟಿ ನೀಡುವುದು ಸಾಮಾನ್ಯವಾಗಿದೆ. ಇದರಿಂದ ಗಣ್ಯರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪೊಲೀಸರಿಗೆ ಕಷ್ಟಕರವಾಗಿದೆ. ವಾಹನ ಸವಾರರು ಈ ಭಾಗದಲ್ಲಿ ಓಡಾಡಲು ನಿತ್ಯ ಹೈರಾಣಾಗುತ್ತಿದ್ದಾರೆ. ಈ ಸಂಬಂಧ ಬೆಂಗಳುರು ನಗರ ಟ್ರಾಫಿಕ್ ಪೊಲೀಸ್ ಈ ಕ್ರಮಕೈಗೊಂಡಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ