ಬೆಂಗಳೂರು, (ನವೆಂಬರ್ 27): ಬೆಂಗಳೂರಿನಲ್ಲಿ ಇಂದು ಸಾಲು ಸಾಲು ಪ್ರತಿಭಟನೆ(Protest) ಹಾಗೂ ಹೋರಾಟಗಳು ನಡೆಯಲಿವೆ. ಸಂಯುಕ್ತ ಹೋರಾಟ ಸಮಿತಿ ಸೇರಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಹಾಗೂ ರಾಜಭವನ ಚಲೋ ನಡೆಯಲಿವೆ. ಹೀಗಾಗಿ ನಗರದ ವಿವಿಧ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗುವುದು ಖಚಿತ, ಹೀಗಾಗಿ ವಾಹನ ಸವಾರರು ಈ ಕೆಳಗೆ ತಿಳಿಸಿರುವ ಮಾರ್ಗಗಳನ್ನು ಹೊರತುಪಡಿಸಿ ಬೇರೆ ಮಾರ್ಗದಲ್ಲಿ ಸಂಚರಿಸುವುದು ಒಳಿತು.
ಬೆಂಗಳೂರಿನಲ್ಲಿ ರಸ್ತೆಗಿಳಿಯುವ ಮುನ್ನ ಇವತ್ತು ವಾಹನ ಸವಾರರೇ ಹುಷಾರ್ ಆಗಿ ಇರಬೇಕಿದೆ.ಇದಕ್ಕೆ ಕಾರಣವೇ ಪ್ರತಿಭಟನೆ. ಸಂಯುಕ್ತ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಇವತ್ತು ರಸ್ತೆಗೆ ಇಳಿಯುತ್ತಿವೆ. ಫ್ರೀಡಂಪಾರ್ಕ್‌ನಿಂದ ಹೋರಾಟ ಆರಂಭಿಸಿ ರಾಜಭವನ ಚಲೋ ಹಮ್ಮಿಕೊಂಡಿವೆ. ಇದರಿಂದ ಬೆಂಗಳೂರಿನಲ್ಲಿ ಟ್ರಾಫಿಕ್‌ಜಾಮ್‌ನ ಆತಂಕ ಇದ್ದು, ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕೋಡೆ ಸರ್ಕಲ್‌ನಿಂದ ಕೆಆರ್ ಸರ್ಕಲ್‌ಗೆ ಹೋಗುವ ರಸ್ತೆಯಲ್ಲಿ ವಾಹನ ಓಡಾಟಕ್ಕೆ ಬ್ರೇಕ್ ಬೀಳಲಿದ್ದು, ಪರ್ಯಾಯ ಮಾರ್ಗ ಬಳಸುವಂತೆ ಸಾರಿಗೆ ಪೊಲೀಸರು ಮನವಿ ಮಾಡಿದ್ದಾರೆ. ಜತೆಗೆ ಕೋಡೆ ಜಂಕ್ಷನ್, ಮಹಾರಾಣಿ ಜಂಕ್ಷನ್, ಪ್ಯಾಲೆಸ್ ರಸ್ತೆ, ಕೆ.ಜಿ.ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಇದೆ.
ಇದನ್ನೂ ಓದಿ: ಬೆಂಗಳೂರು ಕಂಬಳಕ್ಕೆ ತೆರೆ, ಫೈನಲ್ನಲ್ಲಿ ಚಿನ್ನ ಬೇಟೆಯಾಡಿದ ಕೋಣಗಳ ವಿವರ ಇಲ್ಲಿದೆ
ಹಾಗೇ ಕೋಡೆ ಜಂಕ್ಷನ್, ಮಹಾರಾಣಿ ಜಂಕ್ಷನ್, ವೈ.ರಾಮಚಂದ್ರ ರಸ್ತೆ, ಕಾಳಿದಾಸ, ಪ್ಯಾಲೆಸ್ ರಸ್ತೆ, ಕೆ.ಜಿ.ರಸ್ತೆಯಲ್ಲಿ ಪಾರ್ಕಿಂಗ್ ನಿರ್ಬಂಧಿಸಲಾಗಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ