AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್ ನಿಭಾಯಿಸಲು ‘ಕೋಬ್ರಾ ಬೀಟ್’! ಏನಿದು ಹೊಸ ವ್ಯವಸ್ಥೆ?

ಟ್ರಾಫಿಕ್ ಸಮಸ್ಯೆ ನಿರ್ವಹಣೆಗಾಗಿ ಬೆಂಗಳೂರು ಸಂಚಾರ ಪೊಲೀಸರು ‘ಕೋಬ್ರಾ ಬೀಟ್’ ಎಂಬ ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ. ಇದು ಸಂಚಾರ ದಟ್ಟಣೆಯನ್ನು ನಿರ್ವಹಿಸಲು ಮತ್ತು ತಕ್ಷಣದ ಪರಿಹಾರಗಳನ್ನು ಒದಗಿಸಲು ಸಹಾಯ ಮಾಡುತ್ತದೆ. ‘ಕೋಬ್ರಾ ಬೀಟ್’ ಹೇಗೆ ಕೆಲಸ ಮಾಡಲಿದೆ? ಟ್ರಾಫಿಕ ಸಮಸ್ಯೆಯನ್ನು ಹೇಗೆ ಬಗೆಹರಿಸುತ್ತದೆ? ವಿವರಗಳು ಇಲ್ಲಿವೆ.

ಬೆಂಗಳೂರು ಟ್ರಾಫಿಕ್ ನಿಭಾಯಿಸಲು ‘ಕೋಬ್ರಾ ಬೀಟ್’! ಏನಿದು ಹೊಸ ವ್ಯವಸ್ಥೆ?
ಬೆಂಗಳೂರು ಸಂಚಾರ ಪೊಲೀಸ್ (ಸಾಂದರ್ಭಿಕ ಚಿತ್ರ)Image Credit source: Bengaluru Traffic Police
ಗಣಪತಿ ಶರ್ಮಾ
|

Updated on: Nov 07, 2025 | 8:22 AM

Share

ಬೆಂಗಳೂರು, ನವೆಂಬರ್ 7: ಬೆಂಗಳೂರಿನ (Bengaluru) ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು (Traffic Jam) ನಿರ್ವಹಿಸುವುದಕ್ಕಾಗಿ ‘ಕೋಬ್ರಾ ಬೀಟ್ (Cobra Beat)’ ಎಂಬ ಹೊಸ ವ್ಯವಸ್ಥೆಯನ್ನು ಬೆಂಗಳೂರು ಸಂಚಾರ ಪೊಲೀಸರು ಜಾರಿಗೆ ತಂದಿದ್ದಾರೆ ಎಂದು ವರದಿಯಾಗಿದೆ. ‘ಕೋಬ್ರಾ ಬೀಟ್’ ಸಂಚಾರ ದಟ್ಟಣೆಯ ಸೂಕ್ಷ್ಮ ಕಾರಣಗಳನ್ನು ಗುರುತಿಸಿ ಅಲ್ಲಲ್ಲೇ ಪರಿಹಾರ ಒದಗಿಸಲಿದೆ. ಸಂಚಾರ ದಟ್ಟಣೆ ಸಂದರ್ಭದಲ್ಲಿ ಪ್ರತಿ ಸಂಚಾರ ಪೊಲೀಸ್ ಠಾಣೆಯಿಂದಲೂ ಕ್ಷಿಪ್ರ ಪ್ರತಿಕ್ರಿಯೆ ನೀಡುವಂತೆ ವ್ಯವಸ್ಥೆಯನ್ನು ರೂಪಿಸಲಾಗಿದೆ.

ಹೇಗೆ ಕೆಲಸ ಮಾಡುತ್ತೆ ಕೋಬ್ರಾ ಬೀಟ್?

‘ಕೋಬ್ರಾ ಬೀಟ್’ ಸಿಬ್ಬಂದಿ ಗರಿಷ್ಠ ಮಟ್ಟದಲ್ಲಿ ಎರಡು ನಿಯೋಜಿತ ಮಾರ್ಗಗಳಲ್ಲಿ ನಿಯಮಿತವಾಗಿ ಗಸ್ತು ತಿರುಗುತ್ತಾರೆ. ಪುನರಾವರ್ತಿತ ಸಂಚಾರ ದಟ್ಟಣೆಯ ಪಾಯಿಂಟ್‌ಗಳು, ಪಾರ್ಕಿಂಗ್ ಉಲ್ಲಂಘನೆಗಳು ಮತ್ತು ಅಡಚಣೆಗಳನ್ನು ಗುರುತಿಸುತ್ತಾರೆ. ಜತೆಗೆ ತಕ್ಷಣವೇ ಸ್ಪಂದಿಸಿ ಸಮಸ್ಯೆ ಪರಿಹರಿಸಲಿದ್ದಾರೆ. ಮೂಲಸೌಕರ್ಯ ಹೊರತುಪಡಿಸಿದ ಸಂಚಾರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯತಂತ್ರದ ಭಾಗವಾಗಿ ಬೆಂಗಳೂರು ಸಂಚಾರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ‘ದಿ ಹಿಂದೂ’ ವರದಿ ಉಲ್ಲೇಖಿಸಿದೆ.

ಇತ್ತೀಚೆಗಷ್ಟೇ, ಸಂಚಾರ ದಟ್ಟಣೆಗೆ ಕಾರಣವಾಗುವ 103 ಕಳಪೆ ಬಸ್ ನಿಲ್ದಾಣಗಳನ್ನು ಗುರುತಿಸಿದ್ದ ಅಧಿಕಾರಿಗಳು ಅವುಗಳ ಸ್ಥಳಾಂತರಕ್ಕೆ ಕ್ರಮ ಕೈಗೊಂಡಿದ್ದಾರೆ. ಕಾಯುವ ಸಮಯವನ್ನು ಕಡಿಮೆ ಮಾಡಲು ಮತ್ತು ಸಂಚಾರ ಸುಗಮಗೊಳಿಸಲು ಹಲವಾರು ಜಂಕ್ಷನ್‌ಗಳಲ್ಲಿ ಸಿಗ್ನಲ್ ಸಿಂಕ್ರೊನೈಸೇಶನ್ ವ್ಯವಸ್ಥೆ ಪರಿಚಯಿಸಲಾಗಿದೆ ಎಂದು ವರದಿ ತಿಳಿಸಿದೆ.

ಪ್ರತಿ ಸಂಚಾರ ಠಾಣೆಯಲ್ಲೂ ಮೂರರಿಂದ ನಾಲ್ಕು ‘ಕೋಬ್ರಾ’

ಪ್ರತಿಯೊಂದು ಸಂಚಾರ ಠಾಣೆಯು ಅದರ ವ್ಯಾಪ್ತಿಯನ್ನು ಅವಲಂಬಿಸಿ ಮೂರರಿಂದ ನಾಲ್ಕು ಕೋಬ್ರಾಗಳನ್ನು ಹೊಂದಿರುತ್ತದೆ. ಆಗಾಗ ಸಂಚಾರ ದಟ್ಟಣೆ ಮತ್ತು ನಿಧಾನಗತಿಯ ಸಂಚಾರ ವರದಿಯಾಗುವ ಕಮರ್ಷಿಯಲ್ ಸ್ಟ್ರೀಟ್‌ನಂತಹ ಪ್ರದೇಶಗಳಲ್ಲಿ ಈ ‘ಕೋಬ್ರಾ’ ಸಿಬ್ಬಂದಿ ಗಸ್ತು ಕಾರ್ಯಾಚಣೆ ನಡೆಸಲಿದ್ದಾರೆ. ಅಕ್ರಮ ಪಾರ್ಕಿಂಗ್, ರಾಂಗ್ ಸೈಡ್ ಚಾಲನೆಯಂಥ ಪ್ರಕರಣಗಳನ್ನು ಅಲ್ಲಲ್ಲೇ ನಿಭಾಯಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆರ್​ಟಿಒ ಭರ್ಜರಿ ಕಾರ್ಯಾಚರಣೆ, 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಸೀಜ್: 1 ಕೋಟಿ ರೂ. ದಂಡ ವಸೂಲಿ

ಸಣ್ಣ ಪುಟ್ಟ ತಪ್ಪುಗಳು ಕೂಡ ದೊಡ್ಡ ಟ್ರಾಫಿಕ್ ಜಾಮ್ ಆಗಿ ಬದಲಾಗಬಹುದು. ತಪ್ಪಾಗಿ ನಿಲ್ಲಿಸಿದ ಒಂದೇ ಒಂದು ವಾಹನವು 10 ಸೆಕೆಂಡುಗಳ ವಿಳಂಬಕ್ಕೆ ಕಾರಣವಾಗಬಹುದು. ಇದೇ ರೀತಿ ಹಲವು ಮಂದಿ ಮಾಡಿದಾಗ ತಾಸುಗಟ್ಟಲೆ ಟ್ರಾಫಿಕ್ ಜಾಮ್ ಕೂಡ ಉಂಟಾಗಬಹುದು ಎಂದು ಡಿಸಿಪಿ (ದಕ್ಷಿಣ) ಗೋಪಾಲ್ ಎಂ ಬ್ಯಾಕೋಡ್ ಹೇಳಿದ್ದಾರೆ. ‘ಕೋಬ್ರಾ’ ಸಿಬ್ಬಂದಿ ವಾಹನಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಿದ್ದಾರೆ. ದಂಡ ವಿಧಿಸುವುದು ಮತ್ತು ಸ್ಥಳದಲ್ಲೇ ಅಡೆತಡೆಗಳನ್ನು ತೆರವುಗೊಳಿಸುವ ಮೂಲಕ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!