Bangalore Traffic Guidelines: ಹೊಸ ವರ್ಷ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ

| Updated By: ರಮೇಶ್ ಬಿ. ಜವಳಗೇರಾ

Updated on: Dec 29, 2022 | 6:54 PM

Bengaluru New Year Celebration ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ಬಾರಿ ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ಜನ ಸಜ್ಜಾಗಿದ್ದಾರೆ. ಇದರಿಂದ ಪೊಲೀಸರು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಇನ್ನು ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ಹಾಗೂ ಪಾರ್ಕಿಂಗ್​ ನಿಷೇಧಿಸಲಾಗಿದೆ. ಹಾಗಾದ್ರೆ, ಯಾವೆಲ್ಲ ರಸ್ತೆಗಳಲ್ಲಿ ನಿರ್ಬಂಧಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

Bangalore Traffic Guidelines: ಹೊಸ ವರ್ಷ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ
ಬೆಂಗಳೂರು ಸಿಟಿ ಪೊಲೀಸ್
Follow us on

ಬೆಂಗಳೂರು: ಹೊಸ ವರ್ಷವನ್ನು (New Year) ಬರಮಾಡಿಕೊಳ್ಳಲು ಜನ ಕಾತುರದಿಂದ ಕಾಯುತ್ತಿದ್ದಾರೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಜನವರಿ 1ರ ಹಿಂದಿನ ದಿನದ ಸಂಜೆಯಿಂದ ಮಧ್ಯರಾತ್ರಿ ವರೆಗೆ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ರಸ್ತೆಗಳು ಗಿಜಿಗುಡುತ್ತಿರುತ್ತವೆ. ಈ ಹಿನ್ನೆಲೆಯಲ್ಲಿ ಮುಂಜಾತ್ರಾ ಕ್ರಮವಾಗಿ ಪೊಲೀಸರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ಹಾಗೂ ಪಾರ್ಕಿಂಗ್ (Parking) ನಿಷೇಧಿಸಿ ಸುತ್ತೋಲೆ ಹೊರಡಿಸಿದ್ದಾರೆ. ಹಾಗಾದ್ರೆ, ಯಾವೆಲ್ಲ ರಸ್ತೆಗಳಲ್ಲಿ ವಾಹನ ಸಂಚಾರ (Bengaluru Traffic) ಹಾಗೂ ಪಾರ್ಕಿಂಗ್ ನಿಷೇಧಿಸಲಾಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪ್ರತಿ ವರ್ಷ ಜನ ಬೆಂಗಳೂರಿನ ಎಂ ಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೈಂಟ್ ಮಾರ್ಕ್ಸ್ ರೋಡ್, ಚರ್ಚ್ ಸ್ಟ್ರೀಟ್ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ  ಸೇರುವುದು ಸಾಮಾನ್ಯ. ಸಾರ್ವಜನಿಕರ ಭದ್ರತೆ ಹಿತದೃಷ್ಟಿಯಿಂದ ಈ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಪೊಲೀಸರು ಎಲ್ಲಾ ಖಾಸಗಿ ವಾಹನಗಳನ್ನು 31ನೇ ರಾತ್ರಿ 8 ಗಂಟೆಯಿಂದ 2023 ರ ಜನವರಿ 1 ರ ಮಧ್ಯರಾತ್ರಿ 1 ಗಂಟೆಯವರೆಗೆ ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಪೊಲೀಸ್ ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಖಾಸಗಿ ವಾಹನಗಳನ್ನು ಈ ರಸ್ತೆಗಳಲ್ಲಿ ನಿಷೇಧಿಸಲಾಗಿದೆ.

ಯಾವೆಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ?

1. ಎಂ ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಮೇಯೋ ಹಾಲ್ ನ ಹತ್ತಿರ ರೆಸಿಡೆನ್ಸಿ ರಸ್ತೆಯವರೆಗೆ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ .

2. ಬ್ರಿಗೇಡ್ ರಸ್ತೆಯ ಕಾವೇರಿ ಎಂಪೋರಿಯಂ ಜಂಕ್ಷನ್ ನಿಂದ ಒಪೆರಾ ಜಂಕ್ಷನ್ ವರೆಗೆ

3. ಮ್ಯೂಸಿಯಂ ರಸ್ತೆಯವರೆಗೆ ಬ್ರಿಗೇಡ್ ರಸ್ತೆಯಲ್ಲಿ ಚರ್ಚ್ ಸ್ಟ್ರೀಟ್,

4. ಮ್ಯೂಸಿಯಂ ರಸ್ತೆಯಿಂದ MG ರೋಡ್​ನಿಂದ ಹಳೆ ಮದ್ರಾಸ್ ಬ್ಯಾಂಕ್ ರಸ್ತೆ.

5. ರೆಸ್ಟ್ ಹೌಸ್ ರಸ್ತೆಯ ಮ್ಯೂಸಿಯಂ ರೋಡ್​ನಿಂದ ಬ್ರಿಗೇಡ್ ರಸ್ತೆ

6. ರೆಸಿಡೆನ್ಸಿ ಕ್ರಾಸ್​ನಿಂದ ಎಂ ಜಿ ರಸ್ತೆಯವರೆಗೆ (ಶಂಕರ್​ನಾಗ ಥೇಟರ್ ಸಂಕ್ಷನ್).

ಈ ರಸ್ತೆಗಳಲ್ಲಿ ಪಾಕಿಂಗ್ ನಿಷೇಧ

ಈ ಕೆಳಗೆ ತಿಳಿಸಿರುವ ರಸ್ತೆಗಳಲ್ಲಿ ಪೊಲೀಸ್ ಮತ್ತು ಅಗತ್ಯ ಸೇವೆ ವಾಹನಗಳನ್ನು ಹೊರತುಪಡಿಸಿ ಬೇರೆಲ್ಲಾ ವಾಹನಗಳ ನಿಲುಗಡೆಗೆ ಸಹ ಡಿಸೆಂಬರ್ 31ರ ಮಧ್ಯಾಹ್ನ 2 ಗಂಟೆಯಿಂದ ಜನವರಿ 1ರ ಬೆಳಗಿನ ಜಾವ 3 ಗಂಟೆಯವರೆಗೆ ನಿಷೇಧಿಸಲಾಗಿದೆ.

1 ಎಂ ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ಸರ್ಕಲ್ ವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

2 ಆರ್ಟ್ ಅಂಡ್ ಕ್ರಾಫ್ಟ್ ಜಂಕ್ಷನ್ ನಿಂದ ಒಪೆರಾ ಜಂಕ್ಷನ್ ವರೆಗೆ ಬ್ರಿಗೇಡ್ ರಸ್ತೆಯಲ್ಲಿ

3 ಚರ್ಚ್ ಸ್ಟ್ರೀಟ್​ನ ಬ್ರಿಗೇಡ್ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರೋಡ್ ವರೆಗೆ

4 ಮ್ಯೂಸಿಯಂ ರಸ್ತೆಯವರೆಗೆ ರೆಸ್ಟ್ ಹೌಸ್ ರಸ್ತೆ

5 ಹಳೆ ಮದ್ರಾಸ್ ರಸ್ತೆಯವರೆಗೆ ಮ್ಯೂಸಿಯಂ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ನಿರ್ಬಂಧ ಹೇರಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ