Bengaluru Traffic Police: ಬೆಂಗಳೂರಿನಲ್ಲಿ ಹೆಚ್ಚಿದ ಶಾಲಾ ಮಕ್ಕಳ ಬೈಕ್ ಸಂಚಾರ: ಒಂದೇ ದಿನ 1800 ಮಕ್ಕಳ ಪೋಷಕರಿಗೆ ದಂಡ

ಬೆಂಗಳೂರಿನಲ್ಲಿ ಶಾಲೆ, ಕಾಲೇಜು ಮಕ್ಕಳು ಬೈಕ್​ ರೈಡ್ ಮಾಡುವ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದ್ದು, ಇದರಿಂದ ಅಪಘಾತ ಪ್ರಕರಣಗಳೂ ಹೆಚ್ಚುತ್ತಿವೆ. ಇದೀಗ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಶಾಲಾ ಆಡಳಿತ ಮಂಡಳಿ, ಮಕ್ಕಳ ಪೋಷಕರಿಗೆ ಕಠಿಣ ಎಚ್ಚರಿಕೆಯನ್ನೂ ನೀಡಿದ್ದು, ಮುಂದೆ ಹೀಗಾದಲ್ಲಿ ಪೋಷಕರ ವಿರುದ್ಧ ಎಫ್​ಐಆರ್ ದಾಖಲಿಸುವುದಾಗಿ ಹೇಳಿದ್ದಾರೆ.

Bengaluru Traffic Police: ಬೆಂಗಳೂರಿನಲ್ಲಿ ಹೆಚ್ಚಿದ ಶಾಲಾ ಮಕ್ಕಳ ಬೈಕ್ ಸಂಚಾರ: ಒಂದೇ ದಿನ 1800 ಮಕ್ಕಳ ಪೋಷಕರಿಗೆ ದಂಡ
ಸಾಂದರ್ಭಿಕ ಚಿತ್ರ
Follow us
Jagadisha B
| Updated By: Ganapathi Sharma

Updated on: Feb 02, 2024 | 8:55 AM

ಬೆಂಗಳೂರು, ಫೆಬ್ರವರಿ 2: ಬೆಂಗಳೂರಿನಲ್ಲಿ (Bengaluru) ಸಂಚಾರ ನಿಯಮಗಳ ಉಲ್ಲಂಘನೆ (Traffic Rules Violation) ಪ್ರಕರಣಗಳು ಹೆಚ್ಚುತ್ತಿರುವುದರ ಮಧ್ಯೆಯೇ 18 ವರ್ಷ ವಯಸ್ಸಾಗದ, ಚಾಲನಾ ಪರವಾನಗಿ ಹೊಂದಿಲ್ಲದ ಶಾಲೆ, ಕಾಲೇಜು ವಿದ್ಯಾರ್ಥಿಗಳು ಬೈಕ್ ರೈಡ್ ಮಾಡುವ ಪ್ರಕರಣಗಳೂ ಹೆಚ್ಚಾಗಿವೆ. ಡಿಎಲ್ ಇಲ್ಲದೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಬೈಕ್ ರೈಡ್ ಮಾಡಿದ ವಿಚಾರವಾಗಿ ಒಂದೇ ದಿನದಲ್ಲಿ ನಗರದಲ್ಲಿ 1800 ಮಕ್ಕಳ ಪೋಷಕರಿಗೆ ಸಂಚಾರ ಪೊಲೀಸರು (Bengaluru Traffic police) ದಂಡ ವಿಧಿಸಿದ್ದಾರೆ. ಈ ವಿದ್ಯಾರ್ಥಿಗಳು ಡಿಎಲ್ ಇಲ್ಲದೆಯೇ ಬೈಕ್ ರೈಡ್ ಮಾಡಿಕೊಂಡು ಶಾಲೆ, ಕಾಲೇಜಿಗೆ ತೆರಳಿದ್ದರು.

ಸಂಚಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಶಾಲಾ ಕಾಲೇಜುಗಳ ಬಳಿಯೇ ಹೋಗಿ ವಿದ್ಯಾರ್ಥಿಗಳು ತಂದ ವಾಹನಗಳನ್ನು ತಡೆದು ಡಿಎಲ್ ಹಾಗೂ ವಯಸ್ಸು ತಪಾಸಣೆ ಮಾಡಿದ್ದಾರೆ. ನಗರದ ಒಟ್ಟು 150ಕ್ಕೂ ಹೆಚ್ಚು ಶಾಲೆಗಳಲ್ಲಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸುಮಾರು 1500ಕ್ಕೂ ಹಚ್ಚು ವಿದ್ಯಾರ್ಥಿಗಳು ನಿಯಮ ಉಲ್ಲಂಘನೆ ಮಾಡಿರೋದು ಪತ್ತೆಯಾಗಿದೆ. ಬಳಿಕ ಅವರ ಪೋಷಕರನ್ನು ಕರೆಸಿ ದಂಡ ವಿಧಿಸಿ ವಾಹನಗಳನ್ನು ಮಕ್ಕಳ ಕೈಗೆ ಕೊಡದಂತೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ನಿಯಮ ಉಲ್ಲಂಘಿಸಿದರೆ ಎಫ್​ಐಆರ್ ದಾಖಲಿಸುವ​ ಎಚ್ಚರಿಕೆ

ಪೋಷಕರನ್ನು ಕರೆಸಿ ದಂಡ ವಿಧಿಸಿದ ಪೊಲೀಸರು, ಪುನಃ ಇದೇ ರೀತಿ ಮಾಡಿದರೆ ಎಫ್​ಐಆರ್ ದಾಖಲಿಸುವುದಾಗಿ ಪೋಷಕರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಅಲ್ಲದೆ, ಶಾಲೆಗಳಿಂದ ಸುತ್ತೋಲೆ ಕೂಡ ಹೊರಡಿಸಲು ಸೂಚನೆ ನೀಡಿದ್ದಾರೆ. ಡಿಎಲ್ ಇಲ್ಲದ ಹಾಗೂ 18 ವರ್ಷ ತುಂಬದ ವಿದ್ಯಾರ್ಥಿಗಳು ಬೈಕ್ ತರದಂತೆ ಸುತ್ತೋಲೆ ಹೊರಡಿಸಬೇಕು ಎಂದು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದ್ದಾರೆ. ಇದಕ್ಕೆ ಸಮ್ಮತಿಸಿರುವ ಆಡಳಿತ ಮಂಡಳಿಯವರು ಕೆಲವೇ ದಿನಗಳಲ್ಲಿ ಸುತ್ತೋಲೆ ಹೊರಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಐಎಸ್​ಐಎಸ್​ ಸಂಘಟನೆಗೆ ಬೆಂಬಲ ನೀಡ್ತಿದ್ದ ಉಗ್ರನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಶಾಲಾ ಮಕ್ಕಳು ಬೈಕ್ ರೈಡ್ ಮಾಡಿಕೊಂಡು ತೆರಳುತ್ತಿರವುದು ಅಪಘಾತಗಳಿಗೂ ಕಾರಣವಾಗುತ್ತಿದೆ. ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೂ ಕಾರಣವಾಗುತ್ತಿದೆ. ಹೀಗಾಗಿ ಸಂಚಾರ ಪೊಲೀಸರು ಈ ನಿರ್ಧಾರಕ್ಕೆ ಬಂದಿದ್ದಾರೆ.

ಸಂಚಾರ ನಿಯಮ ಹೇಳುವುದೇನು?

ಸಂಚಾರ ನಿಯಮಗಳ ಪ್ರಕಾರ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಲಾಯಿಸುವಂತಿಲ್ಲ. ಅವರಿಗೆ ಚಾಲನಾ ಪರವಾನಗಿಯೂ ನೀಡಲಾಗುವುದಿಲ್ಲ. ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು ಗಂಭೀರ ಅಪರಾಧವಾಗಿದೆ. ಸಾಮಾನ್ಯವಾಗಿ ಇಂಥ ಕೃತ್ಯಕ್ಕೆ ದ್ವಿಚಕ್ರ ವಾಹನಗಳಿಗೆ 1,000 ರೂ. ದಂಡ, ಲಘು ವಾಹನಗಳಿಗೆ 2,00 ರೂ. ದಂಡ ಹಾಗೂ ಭಾರಿ ವಾಹನಗಳ ಚಾಲನೆಗೆ 5,000 ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಜತೆಗೆ ಜೈಲು ಶಿಕ್ಷೆ ಹಾಗೂ ಇತರ ಕಠಿಣ ಕ್ರಮ ಜರುಗಿಸಲೂ ಅವಕಾಶವಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಾಲನೆ ಮಾಡಿದರೆ ಅವರ ಪೋಷಕರ ಮೇಲೆ ಕೇಸ್ ದಾಖಲಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು