ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಇಂದಿನಿಂದ ಮೇ 21ರವರೆಗೆ ಪ್ರತಿದಿನ 3 ಗಂಟೆ ಬಂದ್: ಪರ್ಯಾಯ ಮಾರ್ಗಗಳು ಹೀಗಿವೆ
Bengaluru traffic updates: ಬೆಂಗಳೂರಿನ ಹೆಬ್ಬಾಳ ಫ್ಲೈಓವರ್‌ನಲ್ಲಿ ಬಿಡಿಎ ಕಾಮಗಾರಿಯಿಂದಾಗಿ ಮೇ 17ರಿಂದ 21ರವರೆಗೆ ಪ್ರತಿದಿನ ಮಧ್ಯರಾತ್ರಿ 12ರಿಂದ 3ರವರೆಗೆ ಫ್ಲೈಓವರ್ ಬಂದ್ ಆಗಲಿದೆ. ಈ ಸಮಯದಲ್ಲಿ ಎಸ್ಟೀಮ್ ಮಾಲ್ನಿಂದ ಬಾಪ್ಟಿಸ್ಟ್ ಆಸ್ಪತ್ರೆವರೆಗಿನ ಮಾರ್ಗವನ್ನು ಬಂದ್ ಇರಲಿದೆ. ಹಾಗಾಗಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳು ಹೀಗಿವೆ.

ಬೆಂಗಳೂರು, ಮೇ 17: ಬಿಡಿಎ ಕಾಮಗಾರಿ (BDA works) ಹಿನ್ನೆಲೆ ಇಂದಿನಿಂದ ಮೇ 21ರವರೆಗೆ ಪ್ರತಿದಿನ ಮಧ್ಯರಾತ್ರಿ 12 ಗಂಟೆಯಿಂದ 3 ಗಂಟೆವರೆಗೆ ಹೆಬ್ಬಾಳ ಫ್ಲೈಓವರ್ (Hebbal Flyover) ಬಂದ್ ಇರಲಿದೆ. ಎಸ್ಟೀಮ್ ಮಾಲ್ನಿಂದ ಬಾಪ್ಟಿಸ್ಟ್ ಆಸ್ಪತ್ರೆವರೆಗಿನ ಮಾರ್ಗ ಬಂದ್ ಇರಲಿದ್ದು ಈ ವೇಳೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರ ಪೊಲೀಸ್ ಪ್ರಕಟಣೆ ಹೊರಡಿಸಿದ್ದಾರೆ. ಪರ್ಯಾಯ ಮಾರ್ಗಗಳು ಈ ಹೀಗಿವೆ.
ಬೆಂಗಳೂರು ಸಂಚಾರ ಪೊಲೀಸ್ ಪ್ರಕಟಣೆಯಲ್ಲಿ ಏನಿದೆ?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆ.ಆರ್. ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಅಸ್ತಿತ್ವದಲ್ಲಿರುವ ಹೆಬ್ಬಾಳ ಮೇಲೇತುವೆಗೆ ಹೆಚ್ಚುವರಿ ಕ್ಯಾಂಪ್ಗಳನ್ನು ನಿರ್ಮಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ಕಾಮಗಾರಿಯ ಭಾಗವಾಗಿ, ರೈಲ್ವೆ ಹಳಿಗಳ ಮೇಲೆ 33.5 ಮೀ ಉದ್ದದ 07 ಉಕ್ಕಿನ ಗರ್ಡ‌್ರಗಳನ್ನು ಅಳವಡಿಸುವ ಕಾಮಗಾರಿಯನ್ನು ಇಂದಿನಿಂದ ಮೇ 21ರವರೆಗೆ ನಡೆಯಲಿದೆ.
ಬೆಂಗಳೂರು ಸಂಚಾರ ಪೊಲೀಸ್ ಟ್ವೀಟ್
“ಸಂಚಾರ ಸಲಹೆ “/Traffic Advisory” pic.twitter.com/HE7newgAnh
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) May 16, 2025
ಈ ವೇಳೆ ಪ್ರತಿದಿನ 3 ಗಂಟೆಗಳ ಕಾಲ ಅಂದರೆ ರಾತ್ರಿ 12 ರಿಂದ ಬೆಳಗಿನ ಜಾವ 03 ಗಂಟೆ ವರೆಗೆ ಕಾಮಗಾರಿನ್ನು ಕೈಗೊಳ್ಳಲಾಗಿದೆ. ಹಾಗಾಗಿ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಕಾಮಗಾರಿ ನಡೆಯುವ ಸಮಯದಲ್ಲಿ ಈ ಕೆಳಕಂಡ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ತಿಳಿಸಿದೆ.
ಸಂಚಾರ ನಿರ್ಬಂಧ:
ಹೆಬ್ಬಾಳ ಮೇಲೇತುವೆಯಲ್ಲಿ ಎಸ್ಟೀಮ್ ಮಾಲ್ನಿಂದ ಮೇಖ್ರಿ ವೃತ್ತದ ಕಡೆಗೆ ರಾತ್ರಿ 12 ರಿಂದ ಬೆಳಿಗ್ಗೆ 3 ಗಂಟೆ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ನಿಷೇಧಿಸಲಾಗಿದೆ.
ಪರ್ಯಾಯ ಮಾರ್ಗ:
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇಖ್ರಿ ವೃತ್ತದ ಕಡೆಗೆ ಚಲಿಸುವ ವಾಹನಗಳು ಎಸ್ಟೀಮ್ ಮಾಲ್‌ನಲ್ಲಿರುವ ಸರ್ವಿಸ್ ರಸ್ತೆಯನ್ನು ಪ್ರವೇಶಿಸಿ ಹೆಬ್ಬಾಳ ವೃತ್ತದಲ್ಲಿ ಹೊರ ವರ್ತುಲಕ್ಕೆ ಬಲ ತಿರುವು ಪಡೆದು ತುಮಕೂರು ಮಾರ್ಗವಾಗಿ ಚಲಿಸಿ, ಕುವೆಂಪು ವೃತ್ತದಲ್ಲಿ ಎಡ ತಿರುವು ಪಡೆದು ನ್ಯೂ ಬಿಇಎಲ್ ರಸ್ತೆ ಮೂಲಕ ಮೇಖ್ರಿ ವೃತ್ತವನ್ನು ತಲುಪಬಹುದಾಗಿದೆ ಎಂದು ತಿಳಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:44 am, Sat, 17 May 25








