AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ; 7ನೇ ಮಹಡಿಯಿಂದ ಬಿದ್ದು ಅಪ್ರಾಪ್ತ ಸಾವು!

ಬೆಂಗಳೂರಿನಲ್ಲಿ 15 ವರ್ಷದ ಬಾಲಕನೊಬ್ಬ 7ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳೀಯ ಕಂಪನಿಯು ಅಪ್ರಾಪ್ತರಿಗೆ ಮದ್ಯ ನೀಡಿದ ಕಾರಣ ಈ ದುರಂತ ಸಂಭವಿಸಿದೆ ಎಂದು ಮೃತನ ಪೋಷಕರು ಆರೋಪಿಸಿದ್ದಾರೆ. ಪೊಲೀಸರು ಜೆಜೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಕಂಪನಿ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ; 7ನೇ ಮಹಡಿಯಿಂದ ಬಿದ್ದು ಅಪ್ರಾಪ್ತ ಸಾವು!
15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ!
ಭಾವನಾ ಹೆಗಡೆ
|

Updated on:Feb 03, 2026 | 12:44 PM

Share

ಬೆಂಗಳೂರು, ಫೆಬ್ರುವರಿ 03: ನಗರದ ಸಂಸ್ಥೆಯೊಂದು ಅಪ್ರಾಪ್ತ ಬಾಲಕರಿಗೆ ಮದ್ಯ ಕುಡಿಸಿದ್ದು, ಅಪ್ರಾಪ್ತನೊಬ್ಬ (Minor) ತನ್ನ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ಉರುಳಿ ಬಿದ್ದು ಸಾವನ್ನಪ್ಪಿರುವ​ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಮೃತ ಬಾಲಕನ ಪೋಷಕರು ರಾಜರಾಜೇಶ್ವರಿನಗರ (RR Nagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿಯಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ ಉಲ್ಲೇಖಿಸಿದಂತೆ ಕಳೆದ ತಿಂಗಳು ಈ ಘಟನೆ ನಡೆದಿದ್ದು, ತನಿಖೆ ಮುಂದುವರೆದಿದೆ.

ಜೆಜೆ ಆ್ಯಕ್ಟ್ ಅಡಿ ಪ್ರಕರಣ ದಾಖಲು

ಜನವರಿ 31ರ ರಾತ್ರಿ ಸುಮಾರು 9 ಗಂಟೆ 40 ನಿಮಿಷಕ್ಕೆ ಈ ಘಟನೆ ನಡೆದಿದ್ದು, ಡಾ. ವಿಷ್ಣುವರ್ಧನ್ ರಸ್ತೆಯ ಅಪಾರ್ಟ್‌ಮೆಂಟ್‌ನ ನಿವಾಸಿಯಾಗಿರುವ ಮೃತನ ಪಾಲಕರು ಅದೇ ದಿನ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ನಂತರ ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರು ಹಲವು ಆಯಾಮಗಳನ್ನಿಟ್ಟುಕೊಂಡು ತನಿಖೆ ನಡೆಸಿದ್ದಾರೆ. ಈ ವೇಳೆ ಸತ್ಯಾಂಶ ಹೊರಬಂದಿದ್ದು, 15 ವರ್ಷದ ಬಾಲಕನಿಗೆ ಸಂಸ್ಥೆಯೊಂದು ಸಿರಗೇಟ್ ಮತ್ತು ಮದ್ಯಪಾನ ಮಾಡಿಸಿದೆ ಎಂದು ತಿಳಿದುಬಂದಿದೆ.

ಮೃತ ಬಾಲಕ ಮತ್ತು ಸ್ನೇಹಿತರು ಸ್ಥಳೀಯ ಕಂಪನಿಯಲ್ಲಿದ್ದಾಗ ಈ ಕೃತ್ಯ ನಡೆದಿದ್ದು, ಸಂಸ್ಥೆಯು ಅಪ್ರಾಪ್ತರಿಗೆ ಮದ್ಯ ಕುಡಿಸಿರುವ ಆರೋಪದ ಮೇಲೆ, ಕಂಪನಿಯ ಮಾಲೀಕರು ಹಾಗೂ ಸಿಬ್ಬಂದಿ ವಿರುದ್ಧ ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯಿದೆ (JJ Act) ಮತ್ತು ಕರ್ನಾಟಕ ಮದ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ANI ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಪೋಸ್ಟ್ ಇಲ್ಲಿದೆ.

ಸಾರ್ವಜನಿಕರಿಗೆ ಖಾಕಿ ವಾರ್ನಿಂಗ್

ಪೊಲೀಸರು ಪ್ರಕರಣದ ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತಿದ್ದು, ಸಂಸ್ಥೆಯ ಮೇಲಿನ ಕ್ರಮ ಕೈಗೊಳ್ಳುವುದರ ಜೊತೆಗೆ ಕೃತ್ಯವೆಸಗಿದವರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:26 am, Tue, 3 February 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ