ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಪ್ರಾಣಬಿಟ್ಟ ಯುವಕ: ಜಕ್ಕೂರಿನಲ್ಲಿ ಪೋಷಕರ ವಿರೋಧಕ್ಕೆ ಬಲಿಯಾದ ಪ್ರೇಮ ಕಥೆ

ಬೆಂಗಳೂರಿನ ಅಮೃತಹಳ್ಳಿ ವ್ಯಾಪ್ತಿಯಲ್ಲಿ ಮನಕಲಕುವ ಘಟನೆ ನಡೆದಿದೆ. ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ ರಾಮ್ ಕುಮಾರ್ (25) ಅವರ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ತೀವ್ರವಾಗಿ ಮನನೊಂದ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಮ ವಿವಾಹಕ್ಕೆ ಪೋಷಕರ ವಿರೋಧವೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಪ್ರಾಣಬಿಟ್ಟ ಯುವಕ: ಜಕ್ಕೂರಿನಲ್ಲಿ ಪೋಷಕರ ವಿರೋಧಕ್ಕೆ ಬಲಿಯಾದ ಪ್ರೇಮ ಕಥೆ
ರಾಮ್ ಕುಮಾರ್
Edited By:

Updated on: May 13, 2026 | 7:26 PM

ಬೆಂಗಳೂರು, ಮೇ.13: ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ಪೋಷಕರು ನಿರಾಕರಿಸಿದ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಮೃತ ಯುವಕನನ್ನು ರಾಮ್ ಕುಮಾರ್ (25) ಎಂದು ಗುರುತಿಸಲಾಗಿದೆ. ಜಕ್ಕೂರಿನ ಶ್ರೀರಾಂಪುರದಲ್ಲಿ ವಾಸವಿದ್ದ ರಾಮ್ ಕುಮಾರ್, ಅನ್ಯಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ, ಜಾತಿ ಬೇರೆ ಎಂಬ ಕಾರಣಕ್ಕೆ ಪೋಷಕರು ಇವರ ವಿವಾಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಖಾಸನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಮರುಜೀವ: ಹಣ ಕಳೆದುಕೊಂಡವರಿಂದ ಅರ್ಜಿ ಸ್ವೀಕಾರ

ಇದರಿಂದ ನೊಂದ ರಾಮ್ ಕುಮಾರ್, ಪೋಷಕರು ಕೆಲಸಕ್ಕೆ ಹೋದ ಸಮಯದಲ್ಲಿ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಅಮೃತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us