ಬೆಂಗಳೂರು: ಟ್ಯಾಕ್ಸಿಗಳಿಗೆ ಒಂದು ನಗರ ಒಂದು ದರ ಜಾರಿ, ಈಗೆಷ್ಟಿದೆ ಬಾಡಿಗೆ? ಇಲ್ಲಿದೆ ವಿವರ

ಒಂದು ನಗರ ಒಂದು ದರ ಜಾರಿಗೆ ಖಾಸಗಿ ವಾಹನಗಳ ಮಾಲೀಕರ ಒಕ್ಕೂಟ ಮಾಡಿರುವ ಮನವಿಯನ್ನು ಪುರಸ್ಕರಿಸಿರುವ ಸಾರಿಗೆ ಇಲಾಖೆ, ಒಂದೇ ರೀತಿಯ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಕರ್ನಾಟಕದ ಇತರ ನಗರಗಳಲ್ಲಿ ಮತ್ತು ಬೆಂಗಳೂರಿನಲ್ಲಿ ಟ್ಯಾಕ್ಸಿ ದರ ಒಂದೇ ಆಗಿರಲಿದೆ. ಆದೇಶ ಜಾರಿಯ ನಂತರ ಯಾವ ವಿಧದ ಟ್ಯಾಕ್ಸಿಗೆ ಎಷ್ಟು ದರ ನಿಗದಿಯಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು: ಟ್ಯಾಕ್ಸಿಗಳಿಗೆ ಒಂದು ನಗರ ಒಂದು ದರ ಜಾರಿ, ಈಗೆಷ್ಟಿದೆ ಬಾಡಿಗೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Sep 03, 2024 | 9:51 AM

ಬೆಂಗಳೂರು, ಸೆಪ್ಟೆಂಬರ್ 3: ಬೆಂಗಳೂರಿನಲ್ಲಿ ಟ್ಯಾಕ್ಸಿ ಸೇವೆಗಳಿಗೆ ‘ಒಂದು ನಗರ ಒಂದು ದರ’ ಜಾರಿ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇದರ ಪ್ರಕಾರ, ಕರ್ನಾಟಕದಾದ್ಯಂತ ಟ್ಯಾಕ್ಸಿಗಳಿಗೆ ನಿಗದಿಯಾಗಿರುವ ದರವೇ ಬೆಂಗಳೂರಿಗೂ ಅನ್ವಯವಾಗಲಿದೆ. ಒಂದು ನಗರ ಒಂದು ದರ ನೀತಿಗಾಗಿ ಖಾಸಗಿ ವಾಹನಗಳ ಮಾಲೀಕರ ಒಕ್ಕೂಟ ಮನವಿ ಸಲ್ಲಿಸಿತ್ತು. ಇದನ್ನು ಪರಿಗಣಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಸದ್ಯ ರಾಜ್ಯದ ಇತರ ಕಡೆಗಳಲ್ಲಿ ಕಾರ್ಯಾಚರಿಸವ ಟ್ಯಾಕ್ಸಿಗಳಿಗೆ ಹೊರಡಿಸಿದ್ದ ಆದೇಶವೇ ಬೆಂಗಳೂರಿಗೂ ಜಾರಿಯಾಗಿದೆ.

ಯಾವ ಟ್ಯಾಕ್ಸಿಗೆ ಎಷ್ಟು ದರ?

  • 10 ಲಕ್ಷ ರೂ. ಒಳಗಿನ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ ದರ 100 ರೂ. ನಿಗದಿಪಡಿಸಲಾಗಿದೆ. ನಂತರದ ಪ್ರತಿ ಕಿಮೀಗೆ 24 ರೂಪಾಯಿ ನಿಗದಿ ಮಾಡಲಾಗಿದೆ.
  • 10ರಿಂದ 15 ಲಕ್ಷ ರೂ. ಮೌಲ್ಯದ ವಾಹನಗಳಿಗೆ 4 ಕಿಮೀವರೆಗೆ 115 ರೂ. ಬಾಡಿಗೆ ನಿಗದಿಯಾಗಿದೆ. ನಂತರದ ಪ್ರತಿ ಕಿಲೋ ಮೀಟರ್​​ಗೆ 28 ರೂಪಾಯಿ ದರ ನಿಗದಿಪಡಿಸಲಾಗಿದೆ.
  • 15 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ವಾಹನಕ್ಕೆ 4 ಕಿಮೀ ವರೆಗೆ 130 ರೂ. ನಿಗದಿಪಡಿಸಲಾಗಿದೆ. ನಂತರದ ಪ್ರತಿ ಕಿಲೋ ಮೀಟರ್​​ಗೆ 32 ರೂಪಾಯಿ ಇದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಸೀಜ್ ಆದ ಇ ಸಿಗರೇಟ್ ಬೆಂಗಳೂರು ಸಿಟಿಯಲ್ಲಿ ಮಾರಾಟ

ವೇಟಿಂಗ್ ಚಾರ್ಜ್​​ ಎಷ್ಟು?

ಕಾಯುವಿಕೆ ಅಥವಾ ವೇಟಿಂಗ್​ಗೆ ಮೊದ‌ಲ 5 ನಿಮಿಷ ಉಚಿತವಾಗಿದೆ. ಬಳಿಕ ಪ್ರತಿ ನಿಮಿಷಕ್ಕೆ‌ 1 ರೂ. ನಿಗದಿಪಡಿಸಲಾಗಿದೆ. ಟ್ಯಾಕ್ಸಿಗಳು ಸಮಯದ ಆಧಾರದಲ್ಲಿ ದರ ಪಡೆಯುವಂತಿಲ್ಲ. ಕಿಲೋ ಮೀಟರ್​ ಆಧಾರದಲ್ಲೇ ಶುಲ್ಕ ಪಡೆಯಬೇಕೆಂದು ಇಲಾಖೆ ಆದೇಶದಲ್ಲಿ ತಿಳಿಸಿದೆ. ಶುಲ್ಕಗಳ ಹೊರತಾಗಿ ಬೇರೆ ಯಾವುದೇ ದರ ಪಡೆಯಬಾರದು ಎಂದೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:36 am, Tue, 3 September 24

ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ