ನಾಳೆಯಿಂದ ಸಾರಿಗೆ ನೌಕರರು ಬೃಹತ್ ಧರಣಿ ಸತ್ಯಾಗ್ರಹ, ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

| Updated By: Rakesh Nayak Manchi

Updated on: Jan 23, 2023 | 2:49 PM

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಆಗೊಮ್ಮೆ ಈಗೊಮ್ಮೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತಲೇ ಇದ್ದಾರೆ. ಇದೀಗ ಮತ್ತೊಮ್ಮೆ ಬಿಸಿ ಮುಟ್ಟಿಸಲು ನೌಕರರು ಮುಂದಾಗಿದ್ದಾರೆ.

ನಾಳೆಯಿಂದ ಸಾರಿಗೆ ನೌಕರರು ಬೃಹತ್ ಧರಣಿ ಸತ್ಯಾಗ್ರಹ, ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ
ಕರ್ನಾಟಕ ಸಾರಿಗೆ ನೌಕರರ ಪ್ರತಿಭಟನೆ
Follow us on

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಳಂಬ ಧೋರಣೆ ಖಂಡಿಸಿ ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರು ಸಿಡಿದೆದ್ದಿದ್ದು, ನಾಳೆಯಿಂದ (ಜನವರಿ 24) ಧರಣಿ ಸತ್ಯಾಗ್ರಹ (Karnataka KSRTC And BMTC Employess Protest) ನಡೆಸಲು ನಿರ್ಧರಿಸಿದ್ದಾರೆ. ನಗರದಲ್ಲಿರುವ ನಾಲ್ಕೂ ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ನಡೆಯಲಿದ್ದು, ಫ್ರೀಡಂ ಪಾರ್ಕ್​​ನಲ್ಲಿ ಬಿಎಂಟಿಸಿ ನೌಕರರಿಂದ ಧರಣಿ ಸತ್ಯಾಗ್ರಹ ನಡೆಯಲಿದೆ. ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ 2021ರ ಏಪ್ರಿಲ್ ತಿಂಗಳಲ್ಲಿ 15 ದಿನಗಳ ಕಾಲ ಬೃಹತ್ ಪ್ರತಿಭಟನೆ ನಡೆಸಿದ್ದರು. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಸಾರಿಕೆ ನೌಕರರು ಹೋರಾಟಕ್ಕೆ ಇಳಿದಿರುವುದು ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

ಜನವರಿ 24 ರಂದು ಸಾರಿಗೆ ನೌಕರರಿಂದ ಸರ್ಕಾರದ ಗಮನ ಸೆಳೆಯಲು ಬೃಹತ್ ಧರಣಿ ಸತ್ಯಾಗ್ರಹ ಕೈಗೊಳ್ಳಲಾಗುತ್ತಿದ್ದು, ನಾಲ್ಕು ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ಹಾಗೂ ಬಿಎಂಟಿಸಿ ನೌಕರರಿಂದ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ. ಹೆಚ್ಚಿನ ನೌಕರರು ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗಲಿರುವ ಹಿನ್ನಲೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಸರ್ಕಾರಕ್ಕೆ ಶಾಕ್ ನೀಡಲು ಮುಂದಾಗಿದ್ದ ಸಾರಿಗೆ ನೌಕರರಿಗೆ ಮಾಸ್ಟರ್ ಸ್ಟ್ರೋಕ್, ಮುಂದಿನ 6 ತಿಂಗಳು ಮುಷ್ಕರ ನಡೆಸದಂತೆ ಆದೇಶ

ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021ರ ಏಪ್ರಿಲ್​ನಲ್ಲಿ 15 ದಿನಗಳ ಕಾಲ ಮುಷ್ಕರ ನಡೆಸಲಾಗಿತ್ತು. ಆದರೆ ಈ ಹೋರಾಟ ನಡೆದು ಒಂದೂವರೆ ವರ್ಷ ಕಳೆದರೂ ಸರ್ಕಾರ ಮಾತ್ರ ಬೇಡಿಕೆಗಳನ್ನು ಬೇಡಿಕೆಯಾಗಿಯೇ ಉಳಿಸಿಕೊಂಡಿದೆ. ಹೀಗಾಗಿ ಮತ್ತೆ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲು ನಿರ್ಧಾರ ಮಾಡಲಾಗಿದೆ. ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತಸುಬ್ಬರಾವ್ ನೇತೃತ್ವದಲ್ಲಿ ಈ ಧರಣಿ ಸತ್ಯಾಗ್ರಹ ನಡೆಯಲಿದೆ.

ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು ಆರು ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಮಾಡುತ್ತಿಲ್ಲ. ನಿಯಮಬದ್ಧವಾಗಿ 2020 ಮಾರ್ಚ್​ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು. ನಿಗಮಗಳ ನಿರ್ಧಾರಕ್ಕೆ ಕೆಎಸ್ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1ಲಕ್ಷ 30 ಸಾವಿರ ನೌಕರರು ಅಸಮಾಧಾನ ಹೊರಹಾಕಿದ್ದು, ಇದೀಗ ಮತ್ತೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.

ಕರ್ನಾಟಕ ಸಾರಿಗೆ ನೌಕರರ ಬೇಡಿಕೆಗಳೇನು?

  1. ಸಾರಿಗೆ ನೌಕರರಿಗೆ ಶೇ 25 ರಷ್ಟು ವೇತನ ಹೆಚ್ಚಳ ಆಗಬೇಕು
  2. ನೌಕರರ ಹಾಲಿ ಇರುವ ಬಾಟ, ಭತ್ಯೆಗಳು 5 ಪಟ್ಟು ಹೆಚ್ಚಿಸವೇಕು
  3. ವೈದ್ಯಕೀಯ ಸೌಲಭ್ಯ ನೀಡಬೇಕು
  4. ಎಲ್ಲಾ ನೌಕರರಿಗೆ ಪ್ರತಿ ತಿಂಗಳು ಹೊರರೋಗಿ ಚಿಕಿತ್ಸೆ ವೆಚ್ಚಕ್ಕಾಗಿ 2 ಸಾವಿರ ನೀಡಬೇಕು
  5. ಕಳೆದ ಬಾರಿ ಮುಷ್ಕರ ವೇಳೆ ವಜಾಗೊಂಡ ನೌಕರರ ಮರುನೇಮಕ ಮಾಡಬೇಕು
  6. ಹೆಚ್ಚುವರಿ ಕೆಲಸದ ಅವಧಿಗೆ ಟೈಮ್ ಭತ್ಯೆ ನೀಡಬೇಕು
  7. ನೌಕರರಿಗೆ ಪಾಳಿ ವ್ಯವಸ್ಥೆ ಜಾರಿಯಾಗಬೇಕು
  8. ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಕ ನಿಲ್ಲಿಸಬೇಕು
  9. ಎಲ್ಲಾ ನೌಕರರಿಗೆ ಗ್ರಾಚ್ಯೂಟಿ ನೀಡಬೇಕು
  10. ಕೂಡಲೇ ಖಾಲಿ ಹುದ್ದೆಗಳನ್ನ ಭರ್ತಿ ಮಾಡಬೇಕು

ಸಾರಿಗೆ ನೌಕರರು ಮುಂದಿನ 6 ತಿಂಗಳ ಕಾಲ ಮುಷ್ಕರ ನಡೆಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಕರ್ನಾಟಕ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಡಿಸೆಂಬರ್ 29ರಂದು ಆದೇಶ ಹೊರಡಿಸಿತ್ತು. ಇದರೊಂದಿಗೆ ಸರ್ಕಾರಕ್ಕೆ ಶಾಕ್ ನೀಡಲು ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್​ಆರ್​​ಟಿಸಿ ಮಾಸ್ಟರ್ ಸ್ಟ್ರೋಕ್ ಕೊಟ್ಟಿತ್ತು. 2023ರ ಜ.1ರಿಂದ 2023ರ ಜೂ.30ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಿದ್ದು,. ಈ ಸಂಬಂಧ ಸರ್ಕಾರದ ಅಧಿಸೂಚನೆ ಪ್ರತಿಯನ್ನ ಎಲ್ಲ ಘಟಕ, ಕಾರ್ಯಗಾರ, ಕಚೇರಿ ಬಸ್ ನಿಲ್ದಾಣಗಳ ಸೂಚನ ಫಲಕಗಳಲ್ಲಿ ತಪ್ಪದೆ ಪ್ರಕಟಿಸುವಂತೆ ಸೂಚನೆ ನೀಡಿದೆ. ಅಲ್ಲದೇ ಕಾರ್ಮಿಕ ಸಂಘಟನೆಗಳಿಗೂ ಪ್ರತಿ ತಲುಪಿಸುವಂತೆ ಸರ್ಕಾರ ಸೂಚಿಸಲಾಗಿತ್ತು. ಆದೇಶ ಮೀರಿ ಇದೀಗ ಸಾರಿಗೆ ನೌಕರರ ರೋಗಿಗೆ ಇಳಿಯಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Mon, 23 January 23