AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಊಬರ್ ಆ್ಯಪ್‌ನಲ್ಲೇ ಕಾಣಿಸಲಿದೆ ‘ನಮ್ಮ ಬಿಎಂಟಿಸಿ’ ಬಸ್ ಲೈವ್ ಟ್ರ್ಯಾಕಿಂಗ್

ಬೆಂಗಳೂರು ಸಾರಿಗೆ ಇಲಾಖೆ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಓಲಾ, ಊಬರ್ ಬಳಕೆದಾರರು ಈಗ 'ನಮ್ಮ ಬಿಎಂಟಿಸಿ ಆ್ಯಪ್ 2.0' ಮೂಲಕ ಬಿಎಂಟಿಸಿ ಬಸ್‌ಗಳನ್ನು ಲೈವ್ ಟ್ರ್ಯಾಕ್ ಮಾಡಬಹುದು. ಮೆಟ್ರೋ ಪ್ರಯಾಣಿಕರಿಗೆ ಲಾಸ್ಟ್ ಮೈಲ್ ಸಂಪರ್ಕಕ್ಕೆ 200 ಮಿನಿ ಎಸಿ ಎಲೆಕ್ಟ್ರಿಕ್ ಬಸ್‌ಗಳನ್ನು ನಿಯೋಜಿಸಲಾಗುವುದು. ಐಟಿ-ಬಿಟಿ ಕಂಪನಿಗಳಿಗೆ ಹೆಚ್ಚುವರಿ ಎಸಿ ಬಸ್‌ ಸೇವೆ ಲಭ್ಯವಾಗಲಿದ್ದು, ಬೆಂಗಳೂರಿನ ಸಂಚಾರ ಸುಧಾರಣೆಗೆ ಇಲಾಖೆ ಒತ್ತು ನೀಡಿದೆ.

ಓಲಾ, ಊಬರ್ ಆ್ಯಪ್‌ನಲ್ಲೇ ಕಾಣಿಸಲಿದೆ 'ನಮ್ಮ ಬಿಎಂಟಿಸಿ' ಬಸ್ ಲೈವ್ ಟ್ರ್ಯಾಕಿಂಗ್
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on:Sep 10, 2026 | 7:44 AM

Share

ಬೆಂಗಳೂರು, ಸೆ.10: ರಾಜಧಾನಿ ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಸಾರಿಗೆ ಇಲಾಖೆ ಚಾಲನೆ ನೀಡಿದೆ. ಇನ್ಮುಂದೆ ಓಲಾ (Ola), ಊಬರ್ (Uber) ಹಾಗೂ ಇತರ ಖಾಸಗಿ ಆ್ಯಪ್ ಆಧಾರಿತ ಟ್ಯಾಕ್ಸಿ ಬಳಸುವ ಪ್ರಯಾಣಿಕರು ‘ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0’ ಮೂಲಕ ಬಿಎಂಟಿಸಿ ಬಸ್‌ಗಳ ಲೈವ್ ಟ್ರ್ಯಾಕಿಂಗ್ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಸಾರಿಗೆ ಇಲಾಖೆ, ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಖಾಸಗಿ ಆ್ಯಪ್ ಆಧಾರಿತ ಟ್ಯಾಕ್ಸಿಗಳಿಗೂ ಬಿಎಂಟಿಸಿಯ ಲೈವ್ ಟ್ರ್ಯಾಕಿಂಗ್ ಆ್ಯಪ್ ವಿಸ್ತರಿಸುವಂತೆ ನಿರ್ದೇಶನ ನೀಡಿದ್ದಾರೆ. ಇದರಿಂದ ಕ್ಯಾಬ್‌ಗಳಿಂದ ಇಳಿಯುವ ಪ್ರಯಾಣಿಕರು ತಮ್ಮ ಗಮ್ಯಸ್ಥಾನ ತಲುಪಲು ಲಭ್ಯವಿರುವ ಬಿಎಂಟಿಸಿ ಬಸ್‌ಗಳ ಮಾಹಿತಿಯನ್ನು ಸುಲಭವಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಮೆಟ್ರೋ ನಿಲ್ದಾಣಗಳಿಗೆ 200 ಮಿನಿ ಎಸಿ ಎಲೆಕ್ಟ್ರಿಕ್ ಬಸ್‌ಗಳು

ಮೆಟ್ರೋ ಪ್ರಯಾಣಿಕರಿಗೆ ಲಾಸ್ಟ್ ಮೈಲ್ ಕನೆಕ್ಟಿವಿಟಿ ಕಲ್ಪಿಸಲು ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ 200 ಮಿನಿ ಏರ್-ಕಂಡೀಷನ್ಡ್ ಎಲೆಕ್ಟ್ರಿಕ್ ಬಸ್‌ಗಳನ್ನು ನಿಯೋಜಿಸುವಂತೆ ಸಚಿವರು ಬಿಎಂಟಿಸಿಗೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ ಈ ಯೋಜನೆಯಡಿ ಬಿಎಂಟಿಸಿ ಖರೀದಿಸುತ್ತಿರುವ ಒಟ್ಟು 4,500 ಎಲೆಕ್ಟ್ರಿಕ್ ಬಸ್‌ಗಳ ಪೈಕಿ ಈ 200 ಮಿನಿ ಎಸಿ ಬಸ್‌ಗಳು ಭಾಗವಾಗಿರಲಿವೆ.ಈ ಮಿನಿ ಬಸ್‌ಗಳು ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ 5 ಕಿ.ಮೀ ವ್ಯಾಪ್ತಿಯಲ್ಲಿ ವಸತಿ ಬಡಾವಣೆಗಳು ಹಾಗೂ ಪ್ರಮುಖ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲಿವೆ.

ಇದನ್ನೂ ಓದಿ: ಕ್ರೆಡಿಟ್ ಕಾರ್ಡ್ ಕಳೆದುಹೋಗಿ, ಬೇರೆ ಯಾರೋ ಅದನ್ನು ಬಳಸಿದರೆ, ನೀವೇ ಬಿಲ್ ಕಟ್ಟಬೇಕಾ? ಇಲ್ಲಿದೆ ಉತ್ತರ

ಐಟಿ-ಬಿಟಿ ಕಂಪನಿಗಳಿಗೆ ಹೆಚ್ವುವರ ಎಸಿ ಬಸ್ ಸೇವೆ

ಬೆಂಗಳೂರಿನ ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳ ಅನುಕೂಲಕ್ಕಾಗಿ ಬಿಎಂಟಿಸಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಹವಾನಿಯಂತ್ರಿತ ಬಸ್‌ಗಳನ್ನು ಒದಗಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಕಂಪನಿಗಳೊಂದಿಗೆ ತಕ್ಷಣವೇ ಮಾತುಕತೆ ನಡೆಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:09 am, Thu, 10 September 26

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ