Bengaluru Tumkur Metro: ಬೆಂಗಳೂರು ಟು ತುಮಕೂರು ಮೆಟ್ರೋ ಕಾರ್ಯ ಚುರುಕು ಮಾಡಿದ BMRCL, ಅಪ್ಡೇಟ್ಸ್ ಇಲ್ಲಿದೆ

| Updated By: ಆಯೇಷಾ ಬಾನು

Updated on: Apr 01, 2024 | 8:32 AM

ಬೆಂಗಳೂರು ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಜನರ ಬೇಡಿಕೆ ಸಹ ಹೆಚ್ಚಾಗುತ್ತಿದೆ. ಇನ್ನು ರಾಜಧಾನಿಗೆ ಹೊಂದಿಕೊಂಡಿರುವ ಜಿಲ್ಲೆಗಳಿಗೂ ಕನೆಕ್ಟಿವಿಟಿ ಬೇಕೆಂಬ ಕೂಗು ಹೆಚ್ಚಾಗಿರುವ ಬೆನ್ನಲ್ಲೇ ಕಲ್ಪತರು ನಾಡು ತುಮಕೂರಿಗೆ ಮೆಟ್ರೋ ವಿಸ್ತರಣೆ ಯೋಜನೆಗೆ BMRCL ವೇಗ ನೀಡಿದೆ. ಹಾಗಾದರೆ ಹೇಗೆ ಮೂಡಿ ಬರಲಿದೆ ತುಮಕೂರು ವರೆಗಿನ ಮೆಟ್ರೋ ಎಂಬ ವಿವರ ಇಲ್ಲಿದೆ.

Bengaluru Tumkur Metro: ಬೆಂಗಳೂರು ಟು ತುಮಕೂರು ಮೆಟ್ರೋ ಕಾರ್ಯ ಚುರುಕು ಮಾಡಿದ BMRCL, ಅಪ್ಡೇಟ್ಸ್ ಇಲ್ಲಿದೆ
ಬೆಂಗಳೂರು ಟು ತುಮಕೂರು ಮೆಟ್ರೋ ಕಾಮಗಾರಿ
Follow us on

ಬೆಂಗಳೂರು, ಏಪ್ರಿಲ್.01: ಬೆಂಗಳೂರು-ತುಮಕೂರು ನಮ್ಮ ಮೆಟ್ರೋ  (Bengaluru Tumkur Metro)ಯೋಜನೆ ಕನಸು ನನಸಾಗುವ ಸಾಧ್ಯತೆ ಹೆಚ್ಚಾಗಿದೆ. ಎರಡು ನಗರಗಳ ನಡುವಿನ ಮೆಟ್ರೋ ಯೋಜನೆ ಬಗ್ಗೆ ಹೊಸ ಅಪ್ಡೇಟ್ ಸಿಕ್ಕಿದ್ದು, 52.41 ಕಿ.ಮೀ. ಮಾರ್ಗದಲ್ಲಿ, 19 ಎತ್ತರದ ನಿಲ್ದಾಣಗಳ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಮಾದಾವರ (BIEC) ನಿಲ್ದಾಣದಿಂದ ಪ್ರಾರಂಭವಾಗುವ ಮೆಟ್ರೋ ಮಾರ್ಗವು ತುಮಕೂರು ಬಸ್ ನಿಲ್ದಾಣದವರೆಗೆ ವಿಸ್ತರಿಸುವ ಗುರಿ ಹೊಂದಿದೆ. ಬಹು ನಿರೀಕ್ಷಿತ ಈ ಯೋಜನೆಯು ತುಮಕೂರು ಬೆಂಗಳೂರು ನಡುವಿನ ಸಾರಿಗೆ ಸೌಲಭ್ಯವನ್ನು ಮತ್ತಷ್ಟು ಸುಲಭವಾಗಿಸಲಿದೆ. ಈ ಸಂಬಂಧ BMRCL ಗೆ ಹಲವು ಗುತ್ತಿಗೆದಾರ ಕಂಪನಿಗಳಿಂದ ಕಾರ್ಯ ಸಾಧ್ಯತಾ ವರದಿ ಸಲ್ಲಿಕೆ ಮಾಡಿದೆ ಎಂದು ಮೆಟ್ರೋ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್ ಚೌವ್ಹಾಣ್ ತಿಳಿಸಿದ್ದಾರೆ.

ತುಮಕೂರು ಮೆಟ್ರೋ ಯೋಜನೆಯು ಆರ್ಥಿಕ ಅಭಿವೃದ್ಧಿ ಮತ್ತು ನಿವಾಸಿಗಳ ಜೀವನದ ಗುಣಮಟ್ಟವನ್ನು ಹೆಚ್ಚಿಸುವ ಭರವಸೆಯನ್ನು ಹೊಂದಿದೆ. ಸಮರ್ಥ ಮೆಟ್ರೋ ವ್ಯವಸ್ಥೆಯು ತುಮಕೂರು-ಬೆಂಗಳೂರು ನಡುವೆ ಹೂಡಿಕೆಯನ್ನು ಆಕರ್ಷಿಸಲು, ನಗರದ ವಿವಿಧ ಭಾಗಗಳಿಗೆ ಸಾರಿಗೆ ವ್ಯವಸ್ಥೆ ಸುಧಾರಿಸಲು ಮತ್ತು ಮಾಲಿನ್ಯದ ಮಟ್ಟವನ್ನು ಕಡಿಮೆ ಮಾಡುವ ಗುರಿ ಹೊಂದಿದೆ. ಹೀಗಾಗಿ ತುಮಕೂರು ರಸ್ತೆಯ ಅಸಂಖ್ಯಾತ ಮಂದಿ ಪ್ರಯಾಣಿಕರು ವಿಸ್ತರಿತ ಮೆಟ್ರೋ ಮಾರ್ಗಕ್ಕಾಗಿ ಬಹುನಿರೀಕ್ಷೆಯಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: ಮುಂಬೈ ಹೋಟೆಲ್ ದಾಳಿ ಉಗ್ರರ ಬಂಧನಕ್ಕೆ ಪ್ರಮುಖ ಪಾತ್ರ ವಹಿಸಿದ್ದ ಸದಾನಂದ್​ ವಸಂತ್ ಎನ್​​ಐಎ ಡಿಜಿಯಾಗಿ ಅಧಿಕಾರ ಸ್ವೀಕಾರ

ಒಟ್ನಲ್ಲಿ ಈ ತಿಂಗಳಾಂತ್ಯಕ್ಕೆ ವಿಸ್ತರಿತ ತುಮಕೂರು ಮಾರ್ಗಕ್ಕೆ ಹಲವು ಕಂಪನಿಗಳು ಕಾರ್ಯಸಾಧ್ಯತಾ ವರದಿ ಸಲ್ಲಿಕೆ ಮಾಡಿವೆ. ಈ ವರದಿಯ ಆಧಾರದ ಮೇಲೆ ಬಿಎಂಆರ್‌ಸಿಎಲ್‌ ಅಗತ್ಯ ಬದಲಾವಣೆಗಳನ್ನ ಮಾಡಿಕೊಳ್ಳಲಿದ್ದು, ವರದಿಯನ್ನು ಸರ್ಕಾರದ ಮುಂದಿಡಲಿದೆ. ಬಳಿಕ ಸಮಗ್ರ ವರದಿ ಯೋಜನೆಗೂ ಶೀಘ್ರದಲ್ಲೇ ಮೆಟ್ರೋ ಟೆಂಡರ್ ಆಹ್ವಾನ ಮಾಡಲಿದೆ. ಹೀಗಾಗಿ ಸರ್ಕಾರ ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡಲಿದ್ಯ ಎಂದು ಕಾದು ನೋಡಬೇಕಿದೆ.

ಲಕ್ಕಸಂದ್ರ ಮೆಟ್ರೋ ಕಾಮಗಾರಿ: ಏಪ್ರಿಲ್​ನಿಂದ ಒಂದು ವರ್ಷ ಈ ರಸ್ತೆ ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್

ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ಕಾಮಗಾರಿ ಹಿನ್ನೆಲೆ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗವನ್ನು ಮತ್ತು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರವನ್ನು ಒಂದು ವರ್ಷ ಬಂದ್ ಮಾಡಲಾಗುತ್ತಿದೆ. ವಾಹನ ಸವರಾರರ ಅನುಕೂಲಕ್ಕಾಗಿ ಬಿಎಂಆರ್​ಸಿಎಲ್ ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ