Crime News: ಗೋವಾದಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಾಟ, ಸಿಸಿಬಿ ಪೊಲೀಸರ ಬಲೆಗೆ ಬಿದ್ದ ವಿದೇಶಿ ಪ್ರಜೆ

ಗೋವಾದಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಿಸುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿದರೆ, ಪುಣೆಯಿಂದ ಕಡಿಮೆ ಬೆಲೆಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಗೋವಿಂದರಾಜ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

Crime News: ಗೋವಾದಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಾಟ, ಸಿಸಿಬಿ ಪೊಲೀಸರ ಬಲೆಗೆ ಬಿದ್ದ ವಿದೇಶಿ ಪ್ರಜೆ
ಸಿಸಿಬಿ ಪೊಲೀಸರು ವಶಕ್ಕೆ ಪಡೆದ ಡ್ರಗ್ಸ್ ಮತ್ತು ಆರೋಪಿ ಚಿಕೆ ಆ್ಯಂಥೋನಿ
Follow us
TV9 Web
| Updated By: Rakesh Nayak Manchi

Updated on:Dec 23, 2022 | 10:59 AM

ಬೆಂಗಳೂರು: ಗೋವಾದಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಿಸುತ್ತಿದ್ದ (Drugs smuggling from Goa to Bengaluru) ವಿದೇಶಿ ಪ್ರಜೆಯ ಸಹಿತ 25 ಲಕ್ಷ ಮೌಲ್ಯದ 250 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಸಿಸಿಬಿ ಪೊಲೀಸರು (CCB Police) ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕೆ ಆ್ಯಂಥೋನಿ ಬಂಧಿತ ಆರೋಪಿಯಾಗಿದ್ದಾನೆ. ಕಳೆದ 4 ವರ್ಷದ ಹಿಂದೆ ಭಾರತಕ್ಕೆ ಬಂದಿದ್ದ ಆರೋಪಿ ಆ್ಯಂಥೋನಿ, ಕಡಿಮೆ ಸಮಯದಲ್ಲಿ ಹೆಚ್ಚು ಹಣ ಗಳಿಸಲು ಆಫ್ರೀಕಾ ಮಂದಿ ಜೊತೆ ನಂಟು ಬೆಳೆಸಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಬ್ಯುಸಿನೆಸ್ ವಿಸಾದಲ್ಲಿ ಬಂದ ಆ್ಯಂಥೋನಿ, ಹೆಚ್ಚಿನ ಹಣ ಸಂಪಾದಿಸಲು ಗೋವಾದಲ್ಲಿರುವ ಆಫ್ರಿಕನ್​ಗಳಿಂದ ಡ್ರಗ್ ತರಿಸಿಕೊಳ್ಳುತ್ತಿದ್ದನು. ಬಳಿಕ ಬೆಂಗಳೂರಿನ ಹಲವು ಪಾರ್ಟಿಗಳಿಗೆ ಮಾರಾಟ ಮಾಡಿ ಕಾನೂನು ಬಾಹಿರವಾಗಿ ಹಣ ಸಂಪಾದಿಸುತ್ತಿದ್ದನು. ಈ ಹಿಂದೆ ಕೆಜಿಹಳ್ಳಿಯ ಎನ್​ಡಿಪಿಎಸ್ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದ ಆರೋಪಿ, ಸದ್ಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಂಧಿತನಾಗಿದ್ದಾನೆ. ಆರೋಪಿ ವಿರುದ್ಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಮಾರುತ್ತಿದ್ದ ಇಬ್ಬರು ಅರೆಸ್ಟ್

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ನಗರದ ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜ್ ಕುಮಾರ್, ಸಂಪತ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ. ಮಹಾರಾಷ್ಟ್ರದ ಪುಣೆಯಿಂದ ಕಡಿಮೆ ಬೆಲೆಗೆ ಗಾಂಜಾ (Ganja) ತರುತ್ತಿದ್ದ ಆರೋಪಿಗಳು ಕಡಿಮೆ ಬೆಲೆಗೆ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು. ವಿಚಾರ ತಿಳಿದ ಪೊಲೀಸರು ಕಾರ್ಯಾಚರಣೆಗೆ ಇಳಿದು ಇಬ್ಬರು ಆರೋಪಿಗಳ ಸಹಿತ 1.50 ಲಕ್ಷ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಅಪಘಾತದಲ್ಲಿ ಇಬ್ಬರು ಖೋ ಖೋ ಕ್ರೀಡಾಪಟುಗಳ ಸಾವು

ಯಾದಗಿರಿ: ಟಂಟಂ ವಾಹನಕ್ಕೆ ಟ್ರ್ಯಾಕ್ಟರ್​​​ ಡಿಕ್ಕಿ (Accident) ಹೊಡೆದು ಇಬ್ಬರು ದುರ್ಮರಣ ಹೊಂದಿದ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಸಿದ್ದಾಪುರ ಬಳಿ ನಡೆದಿದೆ. ದೇವರಗೋನಾಲ್ ನಿವಾಸಿ ವೆಂಕಟೇಶ (21) ಮತ್ತು ನಾರಾಯಣ (20) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ವೆಂಕಟೇಶ ಮತ್ತು ನಾರಾಯಣ ಅವರು ನಿನ್ನೆ ರಾತ್ರಿ ಸುರಪುರದಿಂದ ತಮ್ಮ ಗ್ರಾಮಕ್ಕೆ ತರಳುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಗಾಯಗೊಂಡ ಐವರನ್ನು ಕಲಬುರಗಿ ಜಿಲ್ಲಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುರ್ಘಟನೆಯಲ್ಲಿ ಮೃತಮಟ್ಟ ಇಬ್ಬರು ಯುವಕರು ಖೋ ಖೋ ಕ್ರೀಡಾಪಟುಗಳಾಗಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:59 am, Fri, 23 December 22