ಬೆಂಗಳೂರು: ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಲು ಇಳಿದಿದ್ದ ಬಾಲಕರಿಬ್ಬರು ನೀರುಪಾಲು
ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಲು ಇಳಿದಿದ್ದ ಬಾಲಕರಿಬ್ಬರು ನೀರುಪಾಲಾಗಿರುವ ಘಟನೆ ಇಂದು ಮಧ್ಯಾಹ್ನ 3 ಘಂಟೆ ಸುಮಾರಿಗೆ ಅನ್ನಪೂರ್ಣೇಶ್ವರಿ ಲೇಔಟ್‌ನ MNC ಅಕಾಡೆಮಿಯಲ್ಲಿ ನಡೆದಿದೆ.
ಬೆಂಗಳೂರು: ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಲು ಇಳಿದಿದ್ದ ಬಾಲಕರಿಬ್ಬರು ನೀರುಪಾಲಾಗಿರುವ ಘಟನೆ ಇಂದು ಮಧ್ಯಾಹ್ನ 3 ಘಂಟೆ ಸುಮಾರಿಗೆ ಅನ್ನಪೂರ್ಣೇಶ್ವರಿ ಲೇಔಟ್‌ನ MNC ಅಕಾಡೆಮಿಯಲ್ಲಿ ನಡೆದಿದೆ. MNC ಅಕಾಡೆಮಿಯಲ್ಲಿ ಈಜು ತರಬೇತಿ ನೀಡುತ್ತಿದ್ದು, ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಮಾರು 10-11 ವರ್ಷ ವಯಸ್ಸಿನ ಇಬ್ಬರು ಬಾಲಕರು 100 ರೂಪಾಯಿ ಕೊಟ್ಟು ಈಜಲು ಹೋಗಿದ್ದರು. ಇ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆರಿಗೆಯಾದ ಕೆಲವೇ ಗಂಟೆಯಲ್ಲಿ ಮಗು ಸಾವು, ಆಸ್ಪತ್ರೆ ವಿರುದ್ದ ಕುಟುಂಬಸ್ಥರ ಆಕ್ರೋಶ
ಶಿವಮೊಗ್ಗ: ನಗರದ ಸುಬ್ಬಯ್ಯ ಆಸ್ಪತ್ರೆಯಲ್ಲಿ ಹೆರಿಗೆಯಾದ ಕೆಲವೇ ಗಂಟೆಯಲ್ಲಿ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಪೂಜಿನಗರ ನಿವಾಸಿ ನಾಗರಾಜ್, ಭಾಗ್ಯ ದಂಪತಿಯ ಮಗು ಇದಾಗಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ. ಸುಬ್ಬಯ್ಯ ಆಸ್ಪತ್ರೆ ವೈದ್ಯರ ವಿರುದ್ಧ ಕುಟುಂಬಸ್ಥರು ಆಸ್ಪತ್ರೆಯ ಐಸಿಯು ಕೊಠಡಿ ಬಾಗಿಲಿನ ಗ್ಲಾಸ್ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಆಸ್ಪತ್ರೆಯಲ್ಲಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಬಿಗುವಿನ ವಾತವರಣ ನಿರ್ಮಾಣವಾಗಿದೆ. 2 ಗಂಟೆಯಿಂದ ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ ನಡೆಸುತ್ತಿದ್ದು ಈವರೆಗೂ ವೈದ್ಯರು ಸ್ಪಂದಿಸಿಲ್ಲ. ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದ್ದು, ಹೆರಿಗೆ ಮಾಡಿಸಿದ ವೈದ್ಯರ ವಿರುದ್ದ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರ ಪಟ್ಟು ಹೀಡಿದಿದ್ದಾರೆ. ಸಧ್ಯ ಆಸ್ಪತ್ರೆಗೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ