AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು, ದುರಂತದಲ್ಲಿ ಗರ್ಭಿಣಿ ಜಸ್ಟ್​​ ಮಿಸ್​​!

ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದಾರೆ. ಸದ್ಯ ಈ ದುರಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇತ್ತ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್​ನಲ್ಲಿ ಆಟೋ ಮತ್ತು ಕಾರಿಗೆ ಕ್ಯಾಂಟರ್​ ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು, ದುರಂತದಲ್ಲಿ ಗರ್ಭಿಣಿ ಜಸ್ಟ್​​ ಮಿಸ್​​!
ಕ್ಯಾಂಟರ್ ಅಪಘಾತ
ಗಂಗಾಧರ​ ಬ. ಸಾಬೋಜಿ
|

Updated on:Sep 13, 2025 | 12:23 PM

Share

ಬೆಂಗಳೂರು, ಸೆಪ್ಟೆಂಬರ್​​ 13: ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ (Ganesh idol impression) ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದಾರೆ. ಈ ದುರಂತ ಬೆನ್ನಲ್ಲೆ ಇತ್ತ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಆಟೋ ಮತ್ತು ಕಾರಿಗೆ ಕ್ಯಾಂಟರ್​​ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕಾಮಾಕ್ಷಿ ಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಬ್ರೇಕ್ ಫೇಲ್ಯೂರ್ ಶಂಕೆ

ಆಟೋದಲ್ಲಿದ್ದ ಡಿ.ಯೇಸು, ಜೆನಿಫರ್ ಮೃತರು. ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬ್ರೇಕ್ ಫೇಲ್ಯೂರ್ ಆಗಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಕ್ಯಾಂಟರ್​​​ ಡಿಕ್ಕಿಯಾದ ರಭಸಕ್ಕೆ ಆಟೋ ಎರಡು ತುಂಡಾಗಿದೆ. ಘಟನಾ ಸ್ಥಳಕ್ಕೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ದುರಂತದಲ್ಲಿ ಇಡೀ ಕುಟುಂಬ ಪಾರು

ದುರಂತದಲ್ಲಿ ಅದೃಷ್ಟವಶಾತ್ ಗರ್ಭಿಣಿ ಹಾಗೂ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ. ಗರ್ಭಿಣಿ ಪತ್ನಿ ಮತ್ತು 3 ವರ್ಷದ ಮಗುವನ್ನು ವಿಜಯ್ ಎಂಬುವವರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ.

ಕಾರು ಚಾಲಕ ವಿಜಯ್ ಹೇಳಿದ್ದಿಷ್ಟು

ಅಪಘಾತದಲ್ಲಿ ಜಖಂಗೊಂಡ ರಿಟ್ಜ್ ಕಾರು ಚಾಲಕ ವಿಜಯ್ ಪ್ರತಿಕ್ರಿಯಿಸಿದ್ದು, ನನ್ನ ಪತ್ನಿ ಗರ್ಭಿಣಿ, ಬ್ಲಡ್ ಚೆಕಪ್​​ಗಾಗಿ ಆಸ್ಪತ್ರೆಗೆ ಹೊರಟಿದ್ದೆ. ಪೂಜಾ ಕಲ್ಯಾಣ ಮಂಟಪ ರಸ್ತೆಯಿಂದ ಲಾರಿ ವೇಗವಾಗಿ ಬಂತು. ಕಣ್ಣು ಮುಂದೆಯೇ ಆಟೋಗೆ ಡಿಕ್ಕಿ ಹೊಡೆದಿದೆ. ನಂತರ ನನ್ನ ಕಾರಿಗೆ ಡಿಕ್ಕಿ ಹೊಡೆದಿದೆ. ನಾನು ಕೂಡಲೇ ಲೆಫ್ಟ್ ಸೈಡ್​ಗೆ ತೆಗೆದುಕೊಂಡು ಪಾರಾದೆ. ದೇವರ ದಯೆ ಏನು ಆಗಿಲ್ಲ ಎಂದು ಹೇಳಿದ್ದಾರೆ.

ಕಂಟ್ರೋಲ್ ತಪ್ಪಿ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ: ಡಿಸಿಪಿ ಅನೂಪ್ ಶೆಟ್ಟಿ

ಡಿಸಿಪಿ ಅನೂಪ್ ಶೆಟ್ಟಿ ಮಾತನಾಡಿದ್ದು, 7.45 ರ ಸಮಯದಲ್ಲಿ ಘಟನೆ ನಡೆದಿದೆ. ಇಂಡಸ್ಟ್ರಿಯಲ್ ಏರಿಯಾದಿಂದ ಲಾರಿ ಬಂದಿದೆ. ಆಟೋ, ಕಾರಿಗೆ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದರು.

ಇದನ್ನೂ ಓದಿ: ಹಾಸನ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ? ಸ್ಫೋಟಕ ಮಾಹಿತಿ ಬಹಿರಂಗ

ಮೇಲ್ನೋಟಕ್ಕೆ ಡೌನ್ ಬರಬೇಕಾದರೆ ಕಂಟ್ರೋಲ್ ತಪ್ಪಿರುವ ಸಾಧ್ಯತೆ ಇದೆ. ಲಾರಿ ಡ್ರೈವರ್ ಓಡಿ ಹೋಗಿದ್ದಾನೆ. ಗೂಡ್ಸ್ ಏನಿತ್ತು ಎಂದು ಪರಿಶೀಲನೆ ಮಾಡಬೇಕಿದೆ ಎಂದಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:22 pm, Sat, 13 September 25

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ