AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆ ನಿಷೇಧಿಸಿ ಬೆಂಗಳೂರು ವಿವಿ ಸುತ್ತೋಲೆ: ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ

ಬೆಂಗಳೂರು ವಿಶ್ವವಿದ್ಯಾಲಯವು ಈಗಾಗಲೇ ಸಮಸ್ಯೆಗಳ ಆಗರವಾಗಿದೆ. ಮೊದಲು ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಪ್ರತಿಭಟನೆ ನಿಷೇಧಿಸಿ ಬೆಂಗಳೂರು ವಿವಿ ಸುತ್ತೋಲೆ: ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ
ಬೆಂಗಳೂರು ವಿಶ್ವವಿದ್ಯಾಲಯ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 02, 2022 | 7:41 PM

Share

ಬೆಂಗಳೂರು: ಪ್ರತಿಭಟನೆಗೆ ಅವಕಾಶವಿಲ್ಲವೆಂದು ವಿಶ್ವವಿದ್ಯಾಲಯದ (Bengaluru University) ಆಡಳಿತ ಮಂಡಳಿ ಹೊರಡಿಸಿರುವ ಸುತ್ತೋಲೆಗೆ ವಿದ್ಯಾರ್ಥಿ ಸಂಘಟನೆಗಳು ಆಕ್ರೋಶದ ಪ್ರತಿಕ್ರಿಯೆ ನೀಡಿವೆ. ವಿವಿ ಆವರಣದಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲವೆಂದು ಸುತ್ತೋಲೆಯು ಸ್ಪಷ್ಟಪಡಿಸಿದೆ. ರಾಜಕೀಯ ಪ್ರೇರಿತ ಸಂಘಟನೆಗಳಿಗೆ ಅವಕಾಶ ಇಲ್ಲ ಎಂದು ನೀಡಿರುವ ಸೂಚನೆಯನ್ನು ತಕ್ಷಣ ಹಿಂಪಡೆಯಬೇಕೆಂದು ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿವೆ. ಬೆಂಗಳೂರು ವಿಶ್ವವಿದ್ಯಾಲಯವು ಈಗಾಗಲೇ ಸಮಸ್ಯೆಗಳ ಆಗರವಾಗಿದೆ. ಮೊದಲು ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡಬೇಕು. ಅದು ಬಿಟ್ಟು ಇವರು ಪ್ರತಿಭಟನೆ ಹತ್ತಿಕ್ಕಲು ಹೊರಟಿದ್ದಾರೆ. ನಮ್ಮ ಪ್ರತಿಭಟನೆಗಳನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಸಮಸ್ಯೆಗಳನ್ನು ಪರಿಹರಿಸದಿದ್ದರೆ ನಾವು ಪ್ರತಿಭಟನೆ ನಡೆಸಿಯೇ ತೀರುತ್ತೇವೆ ಎಂದು ಬೆಂಗಳೂರು ವಿವಿ ಸುತ್ತೋಲೆ ವಿರುದ್ಧ ವಿದ್ಯಾರ್ಥಿ ಸಂಘಟನೆಗಳಾದ ಎಬಿವಿಪಿ, ಎನ್​ಎಸ್​​ಯುಐ, ಎಸ್​ಎಫ್​ಐ ಮತ್ತು ಸಿಎಫ್​ಐ ಸೇರಿದಂತೆ ಹಲವು ವಿದ್ಯಾರ್ಥಿ ಸಂಘಟನೆಗಳು ಕಿಡಿ ಕಾರಿವೆ.

ವಿಶ್ವವಿದ್ಯಾಲಯದಲ್ಲಿ ಕಳೆದ 2 ದಿನಗಳಿಂದ ಗಲಾಟೆ ನಡೆದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ವಿದ್ಯಾರ್ಥಿ ಸಂಘಟನೆಗೆ ವಿವಿ ಎದುರು ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ ಬೆಂಗಳೂರು ವಿಶ್ವಿವಿದ್ಯಾಲಯ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಈ ಬೆಳವಣಿಗೆಗೆ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿ ಸಂಘಟನೆಗಳು, ಪ್ರತಿಭಟನೆಗೆ ಅವಕಾಶ ಮಾಡಿಕೊಡೋದೆ ಅಲ್ಲಿನ ಅವ್ಯವಸ್ಥೆ. ನಾವೇನೂ ಸುಮ್ಮಸುಮ್ಮನೆ ಪ್ರತಿಭಟನೆ ನಡೆಸುವುದಿಲ್ಲ. ಪ್ರತಿಭಟನೆಗೆ ಅವಕಾಶ ಕೊಡದಿದ್ದರೆ ಅಲ್ಲಿನ ಸಮಸ್ಯೆಯನ್ನು ಪ್ರಸ್ತಾಪಿಸಲು, ತಪ್ಪು ಸರಿಪಡಿಸಲು ಅವಕಾಶ ಪಡೆದುಕೊಳ್ಳುವುದು ಹೇಗೆ? ಬೆಂಗಳೂರು ವಿಶ್ವವಿದ್ಯಾಲಯವು ಸಮಸ್ಯೆಗಳ ಆಗರವಾಗಿದೆ ಎಂದು ಹೇಳಿವೆ.

ಸಮಸ್ಯೆಯಾದಾಗ ಮಾತ್ರ ಎಲ್ಲ ವಿದ್ಯಾರ್ಥಿ ಸಂಘಟನೆಗಳು ಹೋರಾಟಕ್ಕೆ ಮುಂದಾಗುತ್ತವೆ. ವಿವಿ ವಿರುದ್ಧ ಸುಮ್ಮನೆ ಹೋರಾಟ ಮಾಡಲು ಯಾರಿಗೂ ಹುಚ್ಚು ಹಿಡಿದಿಲ್ಲ. ಬೆಂಗಳೂರು ವಿವಿಯ ಈ ಸುತ್ತೋಲೆ ಎಡಬಿಡಂಗಿತನದ ಪ್ರತೀಕವಾಗಿದೆ. ಬೆಂಗಳೂರು ವಿವಿ ಸಂಘಟನೆ ಮಾತ್ರ ವಿದ್ಯಾರ್ಥಿಗಳ ಪರ ಹೋರಾಡುತ್ತಾ? ಅಂಕಪಟ್ಟಿ ವಿಚಾರ, ಫಲಿತಾಂಶ ವಿಚಾರವಾಗಿಯೇ ನಾವು ಪ್ರತಿಭಟನೆ ಮಾಡಿದ್ದು. ನಮ್ಮ ಪ್ರತಿಭಟನೆಗಳನ್ನ ಯಾರೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹೇಳಿವೆ.

ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿ ಸಂಘಟನೆಗಳ ನಡುವೆ ಮಾರಾಮಾರಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಬಿವಿಪಿ (ABVP) ಪ್ರತಿಭಟನೆ ನಡೆಸಿದ್ದು, ಧರಣಿ ನಿರತ ಎಬಿವಿಪಿ ಕಾಯರ್ಕರ್ತರ ಮೇಲೆ ಪೊಲೀಸರು(Karnataka Police) ಲಾಠಿಚಾರ್ಜ್​ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಇಂದು (ಜನವರಿ 31) ಎಬಿವಿಪಿ ಪ್ರತಿಭಟನೆ (Protest) ನಡೆಸುತ್ತಿದೆ. ಪರೀಕ್ಷೆ ಮೌಲ್ಯಮಾಪನ, ಫಲಿತಾಂಶಕ್ಕೆ ಸಮಸ್ಯೆಯಾಗಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ.

ವಿವಿ ಮುತ್ತಿಗೆ ಹಾಕಲು ಮುಂದಾಗಿದ್ದ ಅಖಿಲಾ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಹಾಸ್ಟೆಲ್ ಸಮಸ್ಯೆ, ವಿದ್ಯಾರ್ಥಿ ವೇತನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ವಿವಿಗೆ ವಿದ್ಯಾರ್ಥಿಗಳು ಮುಂದಾಗಿದ್ದಾರೆ. ಈ ವೇಳೆ ವಿದ್ಯಾರ್ಥಿ ಸಂಘಟನೆಗಳು ನಡವೆಯೇ ಮಾರಾಮಾರಿಯಾಗಿದೆ.

ಬೇರೆ ಬೇರೆ ವಿಚಾರಗಳಿಗಾಗಿ ಪ್ರತಿಭಟನೆಗೆ ಮುಂದಾಗಿದ್ದ, ಎಬಿವಿಪಿ ಮತ್ತು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದೆ. ರಾಯಚೂರಿನಲ್ಲಿ ಅಂಬೇಡ್ಕರ್ ರವರಿಗೆ ಅವಮಾನ ಹಿನ್ನೆಲೆ ಬೆಂಗಳೂರು ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗಿತ್ತು. ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡವಾಗಿ ಬರುತ್ತಿರುವ ಹಿನ್ನೆಲೆ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದರು. ಹೀಗಾಗಿ ವಿದ್ಯಾರ್ಥಿಗಳ ಮಧ್ಯೆಯೇ ಗಲಾಟೆಯಾಗಿದೆ.

ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದೇ ದೊಡ್ಡ ವಿಚಾರ ವಿಚಾರ ದೇಶಕ್ಕಾಗಿ ನೀವು ಬರೊಲ್ಲ, ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡವಾಗೋದು ಇದೆಲ್ಲ ಮಾಮೂಲಿ. ಇವತ್ತು ನಮ್ಮ ಪ್ರತಿಭಟನೆ ಇದೆ. ನೀವು ನಾಳೆ ಬನ್ನಿ ಎಂದು ಹೇಳಿ ಗಲಾಟೆ. ಈ ವೇಳೆ ಎಬಿವಿಬಿ ವಿದ್ಯಾರ್ಥಿಗಳ ಮೇಲೆ ಬೆಂಗಳೂರು ಸಂಶೋಧನಾ ವಿವಿ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ. ಈ ಹೀಗಾಗಿ ಪರಿಸ್ಥಿತಿ ಹತೋಟಿಗೆ ತರಲು ಸ್ಥಳಕ್ಕೆ ಆಗಮಿಸಿದ ಜ್ಞಾನ ಭಾರತಿ ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ.

ಇದನ್ನೂ ಓದಿ: ರಾಜಕೀಯ ಪ್ರೇರಿತ ವಿದ್ಯಾರ್ಥಿ ಸಂಘಟನೆಗಳಿಗೆ ಬ್ರೇಕ್ ಹಾಕಿದ ಬೆಂಗಳೂರು ವಿಶ್ವವಿದ್ಯಾಲಯ ಇದನ್ನೂ ಓದಿ: ಬೆಂಗಳೂರು ವಿಶ್ವವಿದ್ಯಾಲಯದಿಂದ ಮಹಾ ಯಡವಟ್ಟು! 70 ಅಂಕದ ಪರೀಕ್ಷೆಗೆ 73 ಅಂಕ ನೀಡಿದ ವಿವಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?