ಬೆಂಗಳೂರು ವಿವಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಐವರು ಉಪನ್ಯಾಸಕರ ವಿರುದ್ಧ ಎಫ್​ಐಆರ್

ಬೆಂಗಳೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಐವರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಲ್ಲದೆ ಓರ್ವ ಕಣ್ಣು ಕಾಣದ ವಿದ್ಯಾರ್ಥಿಗೆ ಇಂಟರ್ನಲ್ ಮಾರ್ಕ್ಸ್ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಕೂಡ ಕೇಳಿಬಂದಿದೆ.

ಬೆಂಗಳೂರು ವಿವಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಐವರು ಉಪನ್ಯಾಸಕರ ವಿರುದ್ಧ ಎಫ್​ಐಆರ್
ಪ್ರಾತಿನಿಧಿಕ ಚಿತ್ರ

Updated on: Sep 20, 2025 | 12:57 PM

ಬೆಂಗಳೂರು, ಸೆಪ್ಟೆಂಬರ್​ 20: ಬೆಂಗಳೂರು ವಿಶ್ವವಿದ್ಯಾಲಯದ (Bengaluru University) ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಠಾಣೆಯಲ್ಲಿ ಎಫ್​ಐಆರ್ (FIR) ದಾಖಲಾಗಿದೆ.  ಅತಿಥಿ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಹಾಗೂ ಶಿವರಾಮ್ ವಿರುದ್ಧ ಎಫ್​ಐಆರ್​​ ದಾಖಲಿಸಲಾಗಿದೆ.​

ವಿದ್ಯಾರ್ಥಿಯನ್ನ ಎತ್ತಿಕೊಂಡು ಡ್ಯಾನ್ಸ್

ಎಫ್​​ಐಆರ್​​ ದಾಖಲು ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ. ಅತಿಥಿ ಉಪನ್ಯಾಸಕ ರಾಮಾಂಜನೇಯ ಮದ್ಯ ಸೇವಿಸಿ ಬೆಂಗಳೂರು ವಿವಿ ಆವರಣದಲ್ಲಿ ಶರ್ಟ್ ಬಿಚ್ಚಿ ಡ್ಯಾನ್ಸ್​ ಮಾಡಿದ್ದಾರೆ. ಅಷ್ಟೇ ಅಲ್ಲದೆ ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ವಿದ್ಯಾರ್ಥಿಯನ್ನ ಎತ್ತಿಕೊಂಡು ಡ್ಯಾನ್ಸ್ ಮಾಡಿರುವುದು ಮತ್ತು ಕಾರಿನಲ್ಲಿ ಕುಳಿತು ಮದ್ಯ ಸೇವಿಸಿರುವ ವಿಡಿಯೋಗಳು ವೈರಲ್ ಆಗಿವೆ.

ಇಂಟರ್ನಲ್ ಮಾರ್ಕ್ಸ್ ನೀಡಲು ಹಣಕ್ಕೆ ಬೇಡಿಕೆ

ಸೋಶಿಯಾಲಜಿ ವಿಭಾಗದ ಉಪನ್ಯಾಸಕ ರಾಮಾಂಜನೇಯ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿಬಂದಿವೆ. ಇಂಟರ್ನಲ್ ಮಾರ್ಕ್ಸ್ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದೆ. ಕಣ್ಣು ಕಾಣದ ನೇತ್ರಾನಂದ ಎಂಬ ಅಂಧ ವಿದ್ಯಾರ್ಥಿಗೆ ಇಂಟರ್ನಲ್ ನೀಡಲು ಸಾವಿರಾರು ರೂ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಮಾಡಲಾಗಿದೆ.

ಅಪ್ರಾಪ್ತೆ ಬಾಲಕಿ ಅತ್ಯಾಚಾರಕ್ಕೆ ಯತ್ನಸಿದ್ದ ಯುವಕನಿಗೆ ಶಿಕ್ಷೆ ಪ್ರಕಟ

ಅಪ್ರಾಪ್ತೆ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಯುವಕನಿಗೆ ಮೂರು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಜೆ.ಕೃಷ್ಣ ಅವರಿಂದ ಶಿಕ್ಷೆ ಪ್ರಕಟಿಸಲಾಗಿದೆ. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಹಾಗೂ ಬಾಲಕಿ ತಾಯಿಗೆ ಹಲ್ಲೆ ಮಾಡಿರುವುದು ದೃಢಪಟ್ಟಿದೆ.

ಇದನ್ನೂ ಓದಿ: ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದ ಪದ್ಮನಾಭ (23) ಎಂಬಾತ ಶಿಕ್ಷೆಗೊಳಗಾದ ಅಪರಾಧಿ. ಈತ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಕೊಟ್ಟು ಬಳಿಕ ಇದನ್ನು ಪ್ರಶ್ನಿಸಿದ ಬಾಲಕಿಯ ತಾಯಿ ಮೇಲೆ ಹಲ್ಲೆ ಮಾಡಿದ್ದು, ಸಾಕ್ಷಾಧಾರಗಳು ಸಾಬೀತು ಹಿನ್ನಲೆ ಶಿಕ್ಷೆ ವಿಧಿಸಲಾಗಿದೆ.

ವರದಿ: Vikas Tv9 Crime

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.