ಬೆಂಗಳೂರು: ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಿಸದಂತೆ ನೀಡಿದ್ದ ತಡೆಯಾಜ್ಞೆ ತೆರವು; ಮಂಗಳವಾರವೇ ಫಲಿತಾಂಶ

MLC Election Results: ನಾಳೆ ವಿಧಾನಪರಿಷತ್ ಚುನಾವಣೆ ಮತ ಎಣಿಕೆ ಹಿನ್ನೆಲೆ ಮತ ಎಣಿಕೆ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರು ನಗರ ಪರಿಷತ್​ ಕ್ಷೇತ್ರದ ಮತ ಎಣಿಕೆ ಹಿನ್ನೆಲೆ ಬೆಂಗಳೂರಿನ ಮಹಾರಾಣಿ ಕಾಲೇಜು ಸುತ್ತ 144 ಸೆಕ್ಷನ್​​ ಜಾರಿಗೊಳಿಸಲಾಗಿದೆ.

ಬೆಂಗಳೂರು: ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಿಸದಂತೆ ನೀಡಿದ್ದ ತಡೆಯಾಜ್ಞೆ ತೆರವು; ಮಂಗಳವಾರವೇ ಫಲಿತಾಂಶ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Dec 13, 2021 | 11:04 PM

ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ಬೆಂಗಳೂರು ನಗರದಲ್ಲಿ ನಡೆದ ಚುನಾವಣೆ ಫಲಿತಾಂಶ ಮಂಗಳವಾರವೇ (ಡಿಸೆಂಬರ್ 14) ಪ್ರಕಟವಾಗಲಿದೆ. ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಿಸದಂತೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಲಾಗಿದೆ. ನಿಗದಿತ ದಿನವೇ ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ಆದೇಶ ನೀಡಿದೆ. ಫಲಿತಾಂಶ ಪ್ರಕಟಿಸದಂತೆ ಏಕಸದಸ್ಯ ಪೀಠ ತಡೆ ನೀಡಿತ್ತು. ಯೂಸುಫ್ ರಿಟ್ ಅರ್ಜಿ ವಿಚಾರಣೆ ನಡೆಸಿ ಆದೇಶಿಸಿತ್ತು. ಈ ಬಗ್ಗೆ ಚುನಾವಣಾ ಆಯೋಗದಿಂದ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು.

15 ಸದಸ್ಯರ ಮತವನ್ನು ಪ್ರತ್ಯೇಕವಾಗಿರಿಸುವುದು ಸೂಕ್ತವಲ್ಲ. ಫಲಿತಾಂಶ ಪ್ರಕಟಿಸದಂತೆ ಮಧ್ಯಂತರ ಆದೇಶ ನೀಡಲಾಗಿದೆ. ಇದರಿಂದ ಉಳಿದ ಕ್ಷೇತ್ರಗಳ ಚುನಾವಣೆ ಮೇಲೂ ಪರಿಣಾಮ ಆಗುತ್ತದೆ. ಹೀಗಾಗಿ ಏಕಸದಸ್ಯ ಪೀಠದ ತಡೆ ತೆರವುಗೊಳಿಸಬೇಕು ಎಂದು ಆಯೋಗದ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿದ್ದರು. ವಾದ ಪುರಸ್ಕರಿಸಿದ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿದೆ.

ನಾಳೆ ವಿಧಾನಪರಿಷತ್ ಚುನಾವಣೆ ಮತ ಎಣಿಕೆ ಹಿನ್ನೆಲೆ ಮತ ಎಣಿಕೆ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರು ನಗರ ಪರಿಷತ್​ ಕ್ಷೇತ್ರದ ಮತ ಎಣಿಕೆ ಹಿನ್ನೆಲೆ ಬೆಂಗಳೂರಿನ ಮಹಾರಾಣಿ ಕಾಲೇಜು ಸುತ್ತ 144 ಸೆಕ್ಷನ್​​ ಜಾರಿಗೊಳಿಸಲಾಗಿದೆ. ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿದೆ. ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್ ಪಂತ್ ಈ ಬಗ್ಗೆ​ ಆದೇಶ ಹೊರಡಿಸಿದ್ದಾರೆ.

ಪರಿಷತ್ ಚುನಾವಣೆಯ ಫಲಿತಾಂಶ ಡಿಸೆಂಬರ್ 10ರಂದು ಕರ್ನಾಟಕದ 25 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮಂಗಳವಾರ (ಡಿಸೆಂಬರ್ 14) ನಡೆಯಲಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು 15 ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಿವೆ. ಜೆಡಿಎಸ್ 6 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜೆಡಿಎಸ್ ತನ್ನ ಅಭ್ಯರ್ಥಿ ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡಿದೆ.

ಜೆಡಿಎಸ್ ಸ್ಪರ್ಧಿಸಿರುವ ಆರೂ ಕ್ಷೇತ್ರಗಳಲ್ಲಿ ತಾವು ಗೆಲುವು ಸಾಧಿಸಲಿದ್ದೇವೆ ಎಂಬ ನಂಬಿಕೆ ವ್ಯಕ್ತಪಡಿಸಿದೆ. ಬಿಜೆಪಿ ಹಾಗೂ ಕಾಂಗ್ರೆಸ್ 15 ಕ್ಕೂ ಹೆಚ್ಚು ಸ್ಥಾನಗಳಲ್ಲಿ ತಮ್ಮ ಗೆಲುವು ಖಚಿತ ಎಂಬ ವಿಶ್ವಾಸದಲ್ಲಿದೆ. ಬಿಜೆಪಿ ಪಕ್ಷ ಪರಿಷತ್ ಚುನಾವಣೆಯಲ್ಲಿ 15 ಸ್ಥಾನಗಳನ್ನು ಗೆದ್ದು ಪರಿಷತ್​ನಲ್ಲಿ ಸಂಪೂರ್ಣ ಬಹುಮತ ಪಡೆಯುವ ಉತ್ಸಾಹದಲ್ಲಿದೆ.

ಇದನ್ನೂ ಓದಿ: ಬೊಮ್ಮಾಯಿ ಮತ್ತು ಯಡಿಯೂರಪ್ಪ ಜೊತೆಯಾಗಿ ಹೋದರು ದೇವಸ್ಥಾನಕ್ಕೆ, ಪರಿಷತ್ ಚುನಾವಣೆ ಫಲಿತಾಂಶದ ಆತಂಕವೇ?

ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ: ಕರ್ನಾಟಕದಲ್ಲಿ ಶಾಂತಿಯುತ ಮತದಾನ

Published On - 9:41 pm, Mon, 13 December 21