ಬೆಂಗಳೂರಿನಲ್ಲಿ ಕಲುಷಿತ ನೀರು ಸೇವಿಸಿ 60 ಜನರಿಗೆ ಕೆಮ್ಮು, ನೆಗಡಿ, ಭೇದಿ

ಕಳೆದ 15 ದಿನಗಳಿಂದ ಈ ಭಾಗದ ಜನರು ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಲುಷಿತ ನೀರು ಸೇವಿಸಿ 60 ಜನರಿಗೆ ಕೆಮ್ಮು, ನೆಗಡಿ, ಭೇದಿ
ಜಲ ಮಾಲಿನ್ಯ
Follow us
TV9 Web
| Updated By: guruganesh bhat

Updated on:Sep 13, 2021 | 4:19 PM

ಬೆಂಗಳೂರು: ಕಲುಷಿತ ನೀರು ಸೇವಿಸಿ 60 ಜನರಿಗೆ ಆರೋಗ್ಯ ಸಮಸ್ಯೆ ಕಂಡುಬಂದ ಘಟನೆ ಬೆಂಗಳೂರಿನ ಉತ್ತರಹಳ್ಳಿ ವಾರ್ಡ್‌ನಲ್ಲಿ ವರದಿಯಾಗಿದೆ. ಈಪೈಕಿ ಹಲವರು ಕೆಮ್ಮು, ನೆಗಡಿ, ಭೇದಿಯಿಂದ ನರಳುತ್ತಿದ್ದಾರೆ. ಬೋರ್‌ವೆಲ್‌ಗೆ ಚರಂಡಿ ನೀರು ಮಿಶ್ರಣವಾದ ಕಾರಣ ನೀರು ಕಲುಷಿತಗೊಂಡಿದೆ. ಮತ್ತು ಆ ನೀರನ್ನು ಸೇವಿಸಿದ ಜನರಿಗೆ ಅನಾರೋಗ್ಯ ಉಂಟಾಗಿದೆ ಎಂದು ಹೇಳಲಾಗಿದೆ. ಕಳೆದ 15 ದಿನಗಳಿಂದ ಈ ಭಾಗದ ಜನರು ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಟಿವಿ9 ಪ್ರತಿನಿಧಿ ಸ್ಥಳಕ್ಕೆ ಭೇಟಿ ನೀಡಿ ವಿವರ ಸಂಗ್ರಹಿಸಿದೆ. ತಕ್ಷಣವೇ ಎಚ್ಚೆತ್ತ ಸ್ಥಳೀಯ ಕಾರ್ಪೋರೇಟರ್ ಹಾಗೂ ಶಾಸಕ ಶಾಸಕ ಎಂ ಕೃಷ್ಣಪ್ಪ ಘಟನೆಯ ಕುರಿತು ಪರಿಶೀಲನೆ ನಡೆಸಿದ್ದಾರೆ.

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಗ್ರಾಹಕರಿಗೆ ಶುಭಸುದ್ದಿ; ನವೆಂಬರ್​ ಒಳಗೆ ಠೇವಣಿ ಮೇಲಿನ ವಿಮಾ ಹಣ ಗ್ರಾಹಕರಿಗೆ ಲಭ್ಯ ಆರ್ಥಿಕ ಅವ್ಯವಹಾರ, ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ಬೆಂಗಳೂರಿನ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಗ್ರಾಹಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಬ್ಯಾಂಕ್ ನಲ್ಲಿ ಹಣ ಠೇವಣಿ ಇಟ್ಟಿರುವ ಗ್ರಾಹಕರ ಪೈಕಿ ಅರ್ಹ ಗ್ರಾಹಕರು ನವಂಬರ್ ಅಂತ್ಯದೊಳಗೆ ಠೇವಣಿ ಮೇಲಿನ ವಿಮಾ ಮೊತ್ತ ಸಿಗಲಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಡಿಫಾಸಿಟ್‌ ಇನ್ಸೂರೆನ್ಸ್ ಅಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಷನ್ ಕಾಯಿದೆಯಡಿ 5 ಲಕ್ಷ ರೂಪಾಯಿವರೆಗೂ ಹಣ ಪಡೆಯಲು ಅವಕಾಶ ಸಿಗಲಿದೆ. ಇದೇ ರೀತಿ ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಅಪರೇಟಿವ್ ಬ್ಯಾಂಕ್‌ನ ಅರ್ಹ ಗ್ರಾಹಕರಿಗೂ ತಮ್ಮ ಠೇವಣಿ ಮೇಲಿನ ವಿಮಾ ಹಣ ಸಿಗಲಿದೆ.

ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರದಿಂದ ತತ್ತರಿಸಿದೆ. ಬ್ಯಾಂಕ್‌ನಲ್ಲಿ ಹೆಚ್ಚಿನ ಬಡ್ಡಿ ಹಣದಾಸೆಗೆ ಬಿದ್ದು ಲಕ್ಷಾಂತರ ರೂಪಾಯಿ ಹಣ ಠೇವಣಿ ಇಟ್ಟ ಗ್ರಾಹಕರಿಗೆ ತಮ್ಮ ಹಣವೂ ವಾಪಸ್ ಬರುತ್ತಿಲ್ಲ. 2019ರ ಜನವರಿ 10ರಿಂದ ಬ್ಯಾಂಕ್‌ ನ ಮೇಲೆ ಆರ್‌ಬಿಐ ನಿರ್ಬಂಧ ವಿಧಿಸಿದೆ. ಬ್ಯಾಂಕಿಂಗ್ ರೆಗ್ಯುಲೇಷನ್ ಕಾಯಿದೆ 1949ರ ಸೆಕ್ಷನ್ 35(ಎ) ಅಡಿ ನಿರ್ಬಂಧ ವಿಧಿಸಲಾಗಿದೆ. ಪೂರ್ಣ ಹಣವನ್ನು ಗ್ರಾಹಕರಿಗೆ ನೀಡಬಾರದೆಂದು ಆರ್‌ಬಿಐ ನಿರ್ಬಂಧ ವಿಧಿಸಿದೆ. ಬ್ಯಾಂಕ್ ನಲ್ಲಿ ಹಣ ಠೇವಣಿ ಇಟ್ಟ ಗ್ರಾಹಕರಿಗೆ ತಮ್ಮ ಹಣವನ್ನು ಪೂರ್ಣ ಪ್ರಮಾಣದಲ್ಲಿ ವಾಪಸ್ ಪಡೆಯಲು ಸಾಧ್ಯವಾಗುತ್ತಿಲ್ಲ. ಇದೇ ರೀತಿ ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಅಪರೇಟಿವ್ ಬ್ಯಾಂಕ್ ನ ಗ್ರಾಹಕರ ಸ್ಥಿತಿಯೂ ಇದೆ. ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಅಪರೇಟೀವ್ ಬ್ಯಾಂಕ್ ಗ್ರಾಹಕರಿಗೂ ತಮ್ಮ ಪೂರ್ತಿ ಠೇವಣಿ ಹಣವನ್ನು ವಾಪಸ್ ಪಡೆಯಲು ಸಾಧ್ಯವಾಗುತ್ತಿಲ್ಲ. ಪಿಎಂಸಿ ಬ್ಯಾಂಕ್ ಅನ್ನು ಈ ವರ್ಷದ ಡಿಸೆಂಬರ್ 31ರವರೆಗೆ ಮೋರಾಟೋರಿಯಂನಲ್ಲಿ ಇಡಲಾಗಿದೆ.

ಇದನ್ನೂ ಓದಿ: 

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ 800-ವರ್ಷ ಹಳೆಯ ಕೆಂಗಲ್ ಆಂಜನೇಯ ಗುಡಿಗೆ ಭೇಟಿ ನೀಡಿದ್ದೀರಾ?

ಬೆಂಗಳೂರು: ಒಂದೇ ರಾತ್ರಿ 30ಕ್ಕೂ ಹೆಚ್ಚು ಬೈಕ್​ಗಳ ಬ್ಯಾಟರಿ ಕದ್ದ ಕಳ್ಳರು; ಸಿಸಿಟಿವಿ ಇದ್ದರೂ ಮನೆ ಮುಂದೆ ವಾಹನ ನಿಲ್ಲಿಸುವಾಗ ಎಚ್ಚರ

(Bengaluru Uttarahalli Ward 60 people have health problems by use polluted water)

Published On - 4:16 pm, Mon, 13 September 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ