AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ರಸ್ತೆ ಬ್ಲಾಕ್; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ; ಸಾರ್ವಜನಿಕರ ಆಕ್ರೋಶ!

ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿ ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ಸಂಚಾರ ಸ್ಥಗಿತಗೊಳಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವಿಐಪಿ ಸಂಸ್ಕೃತಿಯಿಂದ ಸಾಮಾನ್ಯ ಜನರ ಜೀವದ ಜೊತೆ ಚೆಲ್ಲಾಟವಾಡುವ ಘಟನೆ ಇದು. ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ಸಿಲುಕಿ ನರಳಿದರು. ಬೆಂಗಳೂರು ಟ್ರಾಫಿಕ್ ಪೊಲೀಸ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಸೂಕ್ಷ್ಮ ಪ್ರದೇಶಗಳಲ್ಲಿ ವಿಐಪಿ ಸಂಚಾರ ನಿರ್ವಹಣೆ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಬೆಂಗಳೂರಿನಲ್ಲಿ ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ರಸ್ತೆ ಬ್ಲಾಕ್; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ; ಸಾರ್ವಜನಿಕರ ಆಕ್ರೋಶ!
ವಿಐಪಿ ಸಂಸ್ಕೃತಿ , ರಾಜ್ಯಪಾಲರ ಸಂಚಾರ
ಅಕ್ಷಯ್​ ಪಲ್ಲಮಜಲು​​
|

Updated on:May 31, 2026 | 9:56 PM

Share

ಬೆಂಗಳೂರು, ಮೇ.31: ರಾಜಧಾನಿ ಬೆಂಗಳೂರಿನಲ್ಲಿ ವಿಐಪಿ ಸಂಸ್ಕೃತಿ ಮತ್ತು ಅಧಿಕಾರಿಗಳ ಭದ್ರತೆಯ ಹೆಸರಿನಲ್ಲಿ ಸಾಮಾನ್ಯ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುವ ಘಟನೆಗಳು ನಿಲ್ಲುವಂತೆ ಕಾಣುತ್ತಿಲ್ಲ. ಈಗಾಗಲೇ ಅಂಡರ್‌ಪಾಸ್ ನಿರ್ಮಾಣ ಕಾರ್ಯದಿಂದಾಗಿ ಉಸಿರುಗಟ್ಟುತ್ತಿರುವ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road), ಇಂದು ರಾಜ್ಯಪಾಲರ (Governor) ಸಂಚಾರದ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ನರಕಸದೃಶ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಚಾರ ದಟ್ಟಣೆಯ ನಡುವೆ ತನ್ನ ಗರ್ಭಿಣಿ ಪತ್ನಿಯನ್ನು ತುರ್ತಾಗಿ ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ಸಿಲುಕಿಕೊಂಡಿದ್ದು, ಸಾರ್ವಜನಿಕರ ಕಣ್ಣು ತೇವವಾಗುವಂತೆ ಮಾಡಿದೆ. ಅಂಡರ್‌ಪಾಸ್ ಕಾಮಗಾರಿಯಿಂದಾಗಿ ಮೊದಲೇ ಕಿರಿದಾಗಿದ್ದ ರಸ್ತೆಯಲ್ಲಿ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ಏಕಾಏಕಿ ರಸ್ತೆ ನಿರ್ಬಂಧಿಸಿದ್ದರಿಂದ, ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ತಲುಪಿಸಲಾಗದೆ ಆ ವ್ಯಕ್ತಿ ನಡುರಸ್ತೆಯಲ್ಲೇ ತೀವ್ರ ಕಂಗಾಲಾಗಿದ್ದರು.

ಇದನ್ನೂ ಓದಿ: ಬೆಂಗಳೂರು ಜಂಗಲ್ ರಾಜ್‌ ಆಗಿ ಬದಲಾಗುತ್ತಿದೆ?: ಶಾಲೆಯ ಮುಂದೆಯೇ ಲಾಂಗ್ ಬೀಸಿದ ಪುಂಡರು!; ವಿಡಿಯೋ ವೈರಲ್!

ಇಲ್ಲಿದೆ ನೋಡಿ ಸ್ಟೋರಿ:

“ಸಾಮಾನ್ಯ ಸಾರ್ವಜನಿಕರ ಹಾಗೂ ರೋಗಿಗಳ ಅನುಕೂಲ ಮತ್ತು ಜೀವವು ವಿಐಪಿಗಳ ಸೌಕರ್ಯದಷ್ಟೇ ಮುಖ್ಯವಾಗುವುದು ಯಾವಾಗ?” ಎಂದು ಸ್ಥಳೀಯ ನಿವಾಸಿಗಳು ಮತ್ತು ವಾಹನ ಸವಾರರು ಕಟುವಾಗಿ ಪ್ರಶ್ನಿಸಿದ್ದಾರೆ. ಅಂಡರ್‌ಪಾಸ್ ನಿರ್ಮಾಣ ಹಂತದಲ್ಲಿರುವ ಇಂತಹ ಸೂಕ್ಷ್ಮ ರಸ್ತೆಗಳಲ್ಲಿ ಗಣ್ಯರ ಸಂಚಾರಕ್ಕೆ ಗಂಟೆಗಟ್ಟಲೆ ಸಾರ್ವಜನಿಕರನ್ನು ತಡೆಯುವುದು ಎಷ್ಟು ಸರಿ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ನೆಟ್ಟಿಗರು ಬೆಂಗಳೂರು ಟ್ರಾಫಿಕ್ ಪೊಲೀಸ್ (BTP) ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 pm, Sun, 31 May 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ