AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಶಾಖಪಟ್ಟಣ ವಿಶೇಷ ರೈಲು ಅವಧಿ ವಿಸ್ತರಣೆ: ಇನ್ಮುಂದೆ ನಾಯಂಡಹಳ್ಳಿಯಲ್ಲಿ ಈ 4 ರೈಲುಗಳಿಗೆ ಇರುತ್ತೆ ನಿಲುಗಡೆ

ಎಸ್​​ಎಂವಿಟಿ ಬೆಂಗಳೂರು ಹಾಗೂ ವಿಶಾಖಪಟ್ಟಣ ವಿಶೇಷ ರೈಲು ಸಂಚಾರವನ್ನು ಹೋಳಿಹಬ್ಬದ ಕಾರಣ ಮಾರ್ಚ್​​ 30 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಮತ್ತೊಂದೆಡೆ, ಇಂದಿನಿಂದ ಜಾರಿಗೆ ಬರುವಂತೆ ಬೆಂಗಳೂರಿನ ನಾಯಂಡಹಳ್ಳಿ ನಿಲ್ದಾಣದಲ್ಲಿ ಪ್ರಮುಖ ನಾಲ್ಕು ರೈಲುಗಳಿಗೆ ನಿಲುಗಡೆ ಕಲ್ಪಿಸಲಾಗಿದೆ. ಆ ರೈಲುಗಳು ಯಾವುವೆಲ್ಲ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು ವಿಶಾಖಪಟ್ಟಣ ವಿಶೇಷ ರೈಲು ಅವಧಿ ವಿಸ್ತರಣೆ: ಇನ್ಮುಂದೆ ನಾಯಂಡಹಳ್ಳಿಯಲ್ಲಿ ಈ 4 ರೈಲುಗಳಿಗೆ ಇರುತ್ತೆ ನಿಲುಗಡೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 16, 2026 | 7:44 AM

Share

ಬೆಂಗಳೂರು, ಫೆಬ್ರವರಿ 16: ಹೋಳಿ ಹಬ್ಬದ (Holi Festival) ಹಿನ್ನೆಲೆ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಣೆಗೆ ಭಾರತೀಯ ರೈಲ್ವೆ (Indian Railways) ಮಹತ್ವದ ಕ್ರಮ ಕೈಗೊಂಡಿದೆ. ವಿಶಾಖಪಟ್ಟಣ ಮತ್ತು ಎಸ್​ಎಂವಿಟಿ ಬೆಂಗಳೂರು ನಡುವೆ ಸಂಚರಿಸುವ ವಿಶೇಷ ರೈಲು ಸೇವೆಯ ಅವಧಿಯನ್ನು ವಿಸ್ತರಿಸಿದೆ. ರೈಲು ಸಂಖ್ಯೆ 08581 ಬೆಂಗಳೂರು ಕಡೆಗೆ ಬರುವ ವಿಶಾಖಪಟ್ಟಣಂ–ಎಸ್‌ಎಂವಿಟಿ ಬೆಂಗಳೂರು ವಾರಾಂತ್ಯ ಎಕ್ಸ್‌ಪ್ರೆಸ್‌ (ಭಾನುವಾರ ಸಂಚಾರ) ಅನ್ನು ಮಾರ್ಚ್ 29ರವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ ರೈಲು ಸಂಖ್ಯೆ 08582 ಎಸ್‌ಎಂವಿಟಿ ಬೆಂಗಳೂರು–ವಿಶಾಖಪಟ್ಟಣಂ ವಾರಾಂತ್ಯ ಎಕ್ಸ್‌ಪ್ರೆಸ್‌ (ಸೋಮವಾರ ಸಂಚಾರ) ಮಾರ್ಚ್ 30ರವರೆಗೆ ಓಡಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ನಾಲ್ಕು ರೈಲುಗಳಿಗೆ ಇನ್ಮುಂದೆ ನಾಯಂಡಹಳ್ಳಿಯಲ್ಲಿ ನಿಲುಗಡೆ

ಇಂದಿನಿಂದ ಜಾರಿಗೆ ಬರುವಂತೆ ಬೆಂಗಳೂರಿನ ನಾಯಂಡಹಳ್ಳಿ ನಿಲ್ದಾಣದಲ್ಲಿ ನಾಲ್ಕು ರೈಲುಗಳಿಗೆ ಪ್ರಯೋಗಾತ್ಮಕವಾಗಿ ಒಂದು ನಿಮಿಷದ ನಿಲುಗಡೆ ನೀಡಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ನಾಯಂಡಹಳ್ಳಿಯಲ್ಲಿ ನಿಲುಗಡೆ ಇರುವ ರೈಲುಗಳು

  • ರೈಲು ಸಂಖ್ಯೆ 16215 ಮೈಸೂರು-ಕೆಎಸ್‌ಆರ್ ಬೆಂಗಳೂರು ಚಾಮುಂಡಿ ಎಕ್ಸ್‌ಪ್ರೆಸ್ ಬೆಳಿಗ್ಗೆ 8.45ಕ್ಕೆ ಆಗಮಿಸುತ್ತದೆ.
  • ರೈಲು ಸಂಖ್ಯೆ 16216 ಕೆಎಸ್‌ಆರ್ ಬೆಂಗಳೂರು–ಮೈಸೂರು ಚಾಮುಂಡಿ ಎಕ್ಸ್‌ಪ್ರೆಸ್ ಸಂಜೆ 6.39ಕ್ಕೆ ಆಗಮಿಸುತ್ತದೆ.
  • ರೈಲು ಸಂಖ್ಯೆ 17307 ಮೈಸೂರು-ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್ ಮಧ್ಯಾಹ್ನ 3.16ಕ್ಕೆ ಆಗಮಿಸುತ್ತದೆ.
  • ರೈಲು ಸಂಖ್ಯೆ 17308 ಬಾಗಲಕೋಟೆ-ಮೈಸೂರು ಬಸವ ಎಕ್ಸ್‌ಪ್ರೆಸ್ ಬೆಳಿಗ್ಗೆ 8.19ಕ್ಕೆ ಆಗಮಿಸುತ್ತದೆ.
  • ರೈಲು ಸಂಖ್ಯೆ 16235 ಟುಟಿಕೋರಿನ್-ಮೈಸೂರು ಎಕ್ಸ್‌ಪ್ರೆಸ್ ಬೆಳಿಗ್ಗೆ 6.49ಕ್ಕೆ ಆಗಮಿಸುತ್ತದೆ.
  • ರೈಲು ಸಂಖ್ಯೆ 16236 ಮೈಸೂರು-ಟುಟಿಕೋರಿನ್ ಎಕ್ಸ್‌ಪ್ರೆಸ್ ರಾತ್ರಿ 8.14ಕ್ಕೆ ಆಗಮಿಸುತ್ತದೆ.
  • ರೈಲು ಸಂಖ್ಯೆ 16535 ಮೈಸೂರು-ಫಂಡರಾಪುರ ಗೋಲ್ ಗುಂಬಜ್ ಎಕ್ಸ್‌ಪ್ರೆಸ್ ಸಂಜೆ 5.40ಕ್ಕೆ ಆಗಮಿಸುತ್ತದೆ.
  • ರೈಲು ಸಂಖ್ಯೆ 16536 ಫಂಡರಾಪುರ–ಮೈಸೂರು ಗೋಲ್ ಗುಂಬಜ್ ಎಕ್ಸ್‌ಪ್ರೆಸ್ ಬೆಳಿಗ್ಗೆ 7.44ಕ್ಕೆ ಆಗಮಿಸುತ್ತದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿಲುಗಡೆಗಳನ್ನು ಪ್ರಾಯೋಗಿಲಕವಾಗಿ ಆರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರಯಾಣಿಕರ ಪ್ರತಿಕ್ರಿಯೆ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್