ಬೆಂಗಳೂರು ವೋಟರ್ ಲಿಸ್ಟ್ ಹಗರಣ: ಮತದಾರರ ಪಟ್ಟಿಯಲ್ಲಿ ಡಿಲೀಟ್​ ಆದ ಹೆಸರು ಸೇರ್ಪಡೆ, ತಿದ್ದುಪಡಿಗೆ ಬಿಬಿಎಂಪಿ ಅಭಿಯಾನ

ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್​​ ಹಿನ್ನೆಲೆ ವೋಟರ್​ ಐಡಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆಗೆ ಅವಕಾಶ ನೀಡಿ ಡಿಸೆಂಬರ್​ 8ರವರೆಗೆ ಬಿಬಿಎಂಪಿ ವಿಶೇಷ ಅಭಿಯಾನ ಕೈಗೊಂಡಿದೆ.

ಬೆಂಗಳೂರು ವೋಟರ್ ಲಿಸ್ಟ್ ಹಗರಣ: ಮತದಾರರ ಪಟ್ಟಿಯಲ್ಲಿ ಡಿಲೀಟ್​ ಆದ ಹೆಸರು ಸೇರ್ಪಡೆ, ತಿದ್ದುಪಡಿಗೆ ಬಿಬಿಎಂಪಿ ಅಭಿಯಾನ
ಬಿಬಿಎಂಪಿ
Follow us
TV9 Web
| Updated By: ಆಯೇಷಾ ಬಾನು

Updated on:Nov 20, 2022 | 12:01 PM

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಲಿಸ್ಟ್ ಹಗರಣಕ್ಕೆ(Bengaluru Voter Data Theft Case) ಸಂಬಂಧಿಸಿ ಈಗಾಗಲೇ ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಾಗಿದ್ದು, ಖಾಕಿ ಚಿಲುಮೆಯ ಜಾತಕ ಜಾಲಾಡುತ್ತಿದೆ. ಪ್ರಕರಣ ಸಂಬಂಧ ಡಿಜಿಟಲ್ ಸಮೀಕ್ಷಾ ಆ್ಯಪ್​​ ಅಭಿವೃದ್ಧಿ ಪಡಿಸಿದ್ದ ಸಂಜೀವ್ ಶೆಟ್ಟಿ ಎಂಬ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ಬೆಂಗಳೂರಿನ ಹಲವು ಕ್ಷೇತ್ರಗಳಲ್ಲಿ ಮತದಾರರು ವೋಟರ್ ಲಿಸ್ಟ್​ನಲ್ಲಿ ತಮ್ಮ ಹೆಸರು ಡಿಲೀಟ್ ಆಗಿದೆ ಅಂತಾ ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ಮಾತ್ರವಲ್ಲ ರಾಜ್ಯದ ಹಲವೆಡೆ ವೋಟರ್ ಹೆಸರು ಡಿಲೀಟ್ ಆಗಿರೋ ಮಾಹಿತಿ ಸಿಕ್ತಿದೆ. ಹೀಗಾಗಿ ಬಿಬಿಎಂಪಿ(BBMP) ವಿಶೇಷ ಅಭಿಯಾನ ಕೈಕೊಂಡಿದೆ.

ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್​​ ಹಿನ್ನೆಲೆ ವೋಟರ್​ ಐಡಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆಗೆ ಅವಕಾಶ ನೀಡಿ ಡಿಸೆಂಬರ್​ 8ರವರೆಗೆ ಬಿಬಿಎಂಪಿ ವಿಶೇಷ ಅಭಿಯಾನ ಕೈಗೊಂಡಿದೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಸಂಬಂಧ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರು ತಮ್ಮ ಹೆಸರನ್ನು ಸೇರ್ಪಡೆಗೊಳಿಸಲು, ಹಾಗೂ ತಿದ್ದುಪಡಿ, ಸ್ಥಳಾಂತರಗೊಂಡಿದ್ದಲ್ಲಿ ನಮೂನೆ 6, 6ಎ,7, 8 ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 20ರಿಂದ ಡಿಸೆಂಬರ್​ 03ರವೆರೆಗೆ ಹಾಗೂ ಡಿಸೆಂಬರ್ 08 ರಂದು ವಿಶೇಷ ಅಭಿಯಾನ ಕೈಗೊಂಡಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ‌‌ ಸುತ್ತೊಲೆ ಹೊರಡಿಸಲಾಗಿದೆ.

ದೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರನ್ನೂ ಸೇರಿಸಿದ್ದೇವೆ

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಕಾಂಗ್ರೆಸ್​ ನಾಯಕರು ನಿರಾಧಾರ ಆರೋಪ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಈ ಸಂಬಂಧ ಚುನಾವಣಾಧಿಕಾರಿಗೆ ನಾವು ದೂರು ನೀಡಿದ್ದೇವೆ. ದೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರನ್ನೂ ಸೇರಿಸಿದ್ದೇವೆ. 2013ರಿಂದಲೂ ನಡೆದ ಅಕ್ರಮ ಬಗ್ಗೆ ತನಿಖೆಗೆ ಮನವಿ ಮಾಡಿದ್ದೇವೆ. ದೊಡ್ಡ ಹಗರಣ ಸಿಕ್ಕಿದೆ ಅಂತಾ ಕಾಂಗ್ರೆಸ್​ನವರು ಅಂದುಕೊಂಡಿದ್ದಾರೆ. ಈ ಪ್ರಕರಣ ಕಾಂಗ್ರೆಸ್​ನವರಿಗೇ ತಿರುಗುಬಾಣ ಆಗುತ್ತೆ. ಚಿಲುಮೆ ಸಂಸ್ಥೆಗೆ ಅನುಮತಿ ಕೊಟ್ಟಿದ್ದೇ ಕಾಂಗ್ರೆಸ್. ಕಾಂಗ್ರೆಸ್ಸಿಗರು ಚಿಲುಮೆ ಸಂಸ್ಥೆಯನ್ನ ಏಜೆನ್ಸಿಯಾಗಿ ಬಳಸಿಕೊಂಡಿದ್ದಾರೆ. ಕಾಂಗ್ರೆಸ್ಸಿಗರು ನಮ್ಮ ಮೇಲೆ ರಾಜಕೀಯ ಪ್ರೇರಿತ ಆರೋಪ ಮಾಡ್ತಿದ್ದಾರೆ. ಕಾಂಗ್ರೆಸ್​ನವರು ಕೂಡ ಚಿಲುಮೆ ಸಂಸ್ಥೆಯಿಂದ ಸರ್ವೆ ಮಾಡಿಸಿದ್ದಾರೆ. 27 ಲಕ್ಷ ಮತದಾರರ ಹೆಸರು ಡಿಲೀಟ್ ಆಗಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್​​ಗಿಂತ ಬಿಜೆಪಿ ಕ್ಷೇತ್ರಗಳಲ್ಲೇ ಹೆಚ್ಚು ಮತದಾರರ ಹೆಸರು ಡಿಲೀಟ್ ಆಗಿದೆ. ಮತದಾರರ ಹೆಸರು ಡಿಲೀಟ್​ ಮಾಡಿರುವುದು ಚುನಾವಣಾ ಆಯೋಗ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಬೊಮ್ಮಾಯಿ ಹೇಳಿಕೆಗೆ ಮಾಜಿ ಡಿಸಿಎಂ ಪರಮೇಶ್ವರ್​ ತಿರುಗೇಟು

ಚಿಲುಮೆ ಸಂಸ್ಥೆಗೆ ಕಾಂಗ್ರೆಸ್​ ಅನುಮತಿ ಕೊಟ್ಟಿದ್ದು ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಮಾಜಿ ಡಿಸಿಎಂ ಪರಮೇಶ್ವರ್​ ತಿರುಗೇಟು ಕೊಟ್ಟಿದ್ದಾರೆ. ಏನೇ ಆರೋಪ ಮಾಡಿದ್ರೂ ಕಾಂಗ್ರೆಸ್ ಮಾಡಿಲ್ವಾ ಎಂದು ಹೇಳ್ತಾರೆ. ಬಿಜೆಪಿಯವರಿಗೆ ಇದೊಂದು ಕಾಯಿಲೆ. ಯಾವಾಗ ಅನುಮತಿ ಕೊಟ್ಟಿದ್ರು, ಯಾವ ನಿಯಮ ಹಾಕಲಾಗಿತ್ತು. ತನಿಖೆ ನಡೆಸಿದರೆ ಎಲ್ಲಾ ಸತ್ಯಾಂಶ ಹೊರಬರಲಿದೆ. ರಾಜ್ಯ ಚುನಾವಣಾ ಆಯೋಗಕ್ಕೂ ನಾವು ದೂರು ನೀಡಿದ್ದೇವ ಎಂದಿದ್ದಾರೆ.

ವೋಟರ್ ಐಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅನುಮತಿ ನೀಡಿದ್ದ ಬಿಬಿಎಂಪಿ

ಇನ್ನು ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯಗಳಿಗೆ ನೀಡಲಾದ ಆಧಾರ್ ಲಿಂಕ್ ರೀತಿ ನೀತಿಗಳ ಬಗೆಗಿನ ಗೈಡ್ ಲೈನ್ಸ್​ ಅನ್ನು ಬಿಬಿಎಂಪಿ ಚಿಲುಮೆ ಸಂಸ್ಥೆಗೆ ನೀಡಿದೆ. ಆಧಾರ್ ಲಿಂಕ್ ಮಾಡುವ ವಿಧಾನದ ಮಾಹಿತಿಯನ್ನು ನೀಡಿದೆ. 20-08-2022 ರಲ್ಲಿ ಚಿಲುಮೆ ಸಂಸ್ಥೆಗೆ ಬಿಬಿಎಂಪಿ ಪತ್ರ ಬರೆದಿದೆ. ಅದರಲ್ಲಿ ಬೆಂಗಳೂರಿನ 28 ವಿಧಾನ ಸಭಾ ಕ್ಷೇತ್ರಗಳಲ್ಲಿ ವೋಟರ್ ಐಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅನುಮತಿ ನೀಡಿ ಆದೇಶ ನೀಡಿದೆ.

ಸಂಸ್ಥೆಗೆ ಚುನಾವಣಾಧಿಕಾರಿಗಳು ಜೊತೆ ಸೇರಿ ಮನೆ ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಹಾಗೂ ಆಧಾರ್ ಲಿಂಕ್ ಜೋಡಣೆ ಕಾರ್ಯಕ್ಕೆ ಚಿಲುಮೆ ಸಂಸ್ಥೆಗೆ ಷರತ್ತು ಬದ್ದ ಅನುಮತಿ ನೀಡಿ ಪಾಲಿಕೆ ಬಿಬಿಎಂಪಿ ಚುನಾವಣಾಧಿಕಾರಿ ಆದೇಶ ನೀಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಬಿಬಿಎಂಪಿ ಮುಖ್ಯ ಚುನಾವಣಾಧಿಕಾರಿ ವಿಧಿಸಿರುವ ಷರತ್ತುಗಳು

  • ಯಾವುದೇ ರಾಜಕೀಯ ಪಕ್ಷಗಳ ಜೊತೆ ಸಂಪರ್ಕ ಇರಬಾರದು
  • ಯಾವುದೇ ರಾಜಕೀಯ ಪಕ್ಷಗಳಿಂದ ದೇಣಿಗೆ ಸ್ವೀಕರಿಸುವಂತಿಲ್ಲ
  • ಸಂಸ್ಥೆ ವಿರುದ್ದ ದೂರು ಬಂದರೆ ಆದೇಶ ಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳುವ ಅಧಿಕಾರ ಎಲ್ಲಾ ಚುನಾವಣಾಧಿಕಾರಿಗಳಿಗೆ ಇರಲಿದೆ
  • ಎಲ್ಲಡೆ ಬಿಎಲ್ ಓ ಗಳು ಹಾಗೂ ನೊಂದಣಿ ಅಧಿಕಾರಿಗಳೊಂದಿಗೆ ಕಾರ್ಯ ನಿರ್ವಹಿಸತಕ್ಕದ್ದು
  • 2022ರ ಜನವರಿ 1 ರಿಂದ ನವೆಂಬರ್ 11 ರ ವರೆಗಿನ ಮತದಾರರ ಪಟ್ಟಿ ಪರಿಷ್ಕರಣೆ, ಬಿಬಿಎಂಪಿ ವ್ಯಾಪ್ತಿಯ ವಿಧಾಮ ಸಭಾ ಕ್ಷೇತ್ರಗಳಲ್ಲಿ ನಡೆದ ಪರಿಷ್ಕರಣೆ ಮಾಹಿತಿ ಪಡೆಯತಕ್ಕದ್ದು

Published On - 11:57 am, Sun, 20 November 22

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್