ಬೆಂಗಳೂರು ವೋಟರ್ ಐಡಿ ಅಕ್ರಮ : ಕಾಂಗ್ರೆಸ್ ವಾರ್ಡ್ ಅಧ್ಯಕ್ಷರ ಹೆಸರು ಡಿಲೀಟ್​, ಪಟ್ಟಿಯಲ್ಲಿ ಸತ್ತವರು ಜೀವಂತ

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದ್ದು, ಆರ್​​.ಆರ್​​.ನಗರದ ಪ್ರತಿ ವಾರ್ಡ್​​ನಲ್ಲಿ 30 ರಿಂದ 40 ಜನರ ಹೆಸರು ಡಿಲೀಟ್ ಮಾಡಿ ಎಡವಟ್ಟು ಮಾಡಿದ್ದಾರೆ.

ಬೆಂಗಳೂರು ವೋಟರ್ ಐಡಿ ಅಕ್ರಮ : ಕಾಂಗ್ರೆಸ್ ವಾರ್ಡ್ ಅಧ್ಯಕ್ಷರ ಹೆಸರು ಡಿಲೀಟ್​, ಪಟ್ಟಿಯಲ್ಲಿ ಸತ್ತವರು ಜೀವಂತ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 18, 2022 | 7:34 PM

ಬೆಂಗಳೂರು: ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ (Voter ID Sacm) ನಡೆದಿರುವ ಆರೋಪ ಕೇಳಿಬಂದಿದ್ದು, ಆರ್​​.ಆರ್​​.ನಗರದ ಪ್ರತಿ ವಾರ್ಡ್​​ನಲ್ಲಿ 30 ರಿಂದ 40 ಜನರ ಹೆಸರು ಡಿಲೀಟ್ ಮಾಡಿ ಎಡವಟ್ಟು ಮಾಡಿದ್ದಾರೆ ಎಂದು ಆರ್​.ಆರ್.ನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕುಸುಮ ಹನುಮಂತರಾಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮತದಾರರ ಪಟ್ಟಿಯಿಂದ ಕಾಂಗ್ರೆಸ್ (Congress) ವಾರ್ಡ್ ಅಧ್ಯಕ್ಷರ ಹೆಸರನ್ನೇ ಡಿಲೀಟ್ ಮಾಡಲಾಗಿದೆ. ಮತದಾರರ ಪಟ್ಟಿಯಲ್ಲಿ 2017ರಲ್ಲಿ ಮೃತಪಟ್ಟವರ ಹೆಸರು ಇದ್ದು, ಬದುಕಿದ್ದವರ ಹೆಸರು ತೆಗೆಯಲಾಗಿದೆ ಎಂದರು.

ಬಿಬಿಎಂಪಿ ವರದಿಯಲ್ಲಿ ಸ್ಪೋಟಕ ಮಾಹಿತಿ ಬಯಲು, ನಾಲ್ವರು ಪೊಲೀಸ್ ವಶಕ್ಕೆ

 ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿ ದೂರು ಆಧರಿಸಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಬಿಎಂಪಿ ಸಲ್ಲಿಸಿದ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಇನ್ನು ಚಿಲುಮೆ ಸಂಸ್ಥೆಗೆ ಐಡಿ ಕಾರ್ಡ್​ ನೀಡಿದ್ದ ಆರ್​ಒ ಸಸ್ಪೆಂಡ್ ಆಗಿದ್ದಾರೆ.

ಬಿಬಿಎಂಪಿ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣೆಗೆ ಆಯೋಗ ಈ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿಗೆ ಹೇಳಿತ್ತು. ಅದರಂತೆ ಇದೀಗ ಬಿಬಿಎಂಪಿ ಚುನಾವಣೆ ಆಯೋಗಕ್ಕೆ ವರದಿ ನೀಡಿದ್ದು, ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಚಿಲುಮೆ ಸಂಸ್ಥೆಗೆ ವೋಟರ್​ ಐಡಿ, ಆಧಾರ್​ ಲಿಂಕ್​ ಮಾಡುವ ಹೊಣೆ ನೀಡಲಾಗಿತ್ತು. ಉಚಿತವಾಗಿ ಜೋಡಣೆ ಮಾಡುವುದಾಗಿ ‘ಚಿಲುಮೆ’ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಚಿಲುಮೆ ಸಂಸ್ಥೆಗೆ ವೋಟರ್ ಐಡಿ ಹಾಗೂ ಆಧಾರ್ ಲಿಂಕ್ ಮಾಡುವ ಜವಾಬ್ದಾರಿ ನೀಡಲಾಗಿತ್ತು ಎಂದು ಚುನಾವಣೆ ಆಯೋಗಕ್ಕೆ ಬಿಬಿಎಂಪಿ ನೀಡಿದ ವರದಿಯಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ.

ಮಹದೇವಪುರ ವಲಯದ ಆರ್​ಒ ಸಸ್ಪೆಂಡ್​​

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಬಿಎಂಪಿ, ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದೆ. ಅಲ್ಲದೇ ಇದೀಗ ಮಹದೇವಪುರ ವಲಯದ ಆರ್​ಒ ಚಂದ್ರಶೇಖರ್ ಅವರನ್ನು​ ಸಸ್ಪೆಂಡ್ ಮಾಡಲಾಗಿದೆ.​​ ಚಿಲುಮೆ ಸಂಸ್ಥೆಗೆ ಐಡಿ ಕಾರ್ಡ್​ ನೀಡಿದ್ದ ಆರೋಪ ಮೇರೆಗೆ ಆರ್​ಒ ಚಂದ್ರಶೇಖರ್ ಅವರನ್ನು ಅಮಾನತು ಮಾಡಲಾಗಿದೆ.

ನಾಲ್ವರನ್ನು ವಶಕ್ಕೆ ಪಡೆದ ಪೊಲೀಸ್ರು

ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿರುದ್ಧ ಹಲಸೂರುಗೇಟ್‌ ಮತ್ತು ಕಾಡುಗೋಡಿ ಪೊಲೀಸ್‌ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. BBMP ದೂರು ನೀಡಿದ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ ಪೊಲೀಸರು, ಈಗ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿಲುಮೆ ಸಂಸ್ಥೆಯ ಸಿಬ್ಬಂದಿಗಳಾದ ರೇಣುಕಾಪ್ರಸಾದ್, ಧರ್ಮೇಶ್​, ಸುಧಾಕರ್​ ಮತ್ತು ರಕ್ಷಿತ್ ಎನ್ನುವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 7:31 pm, Fri, 18 November 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್