AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ‘ಎಸ್‌ಐಆರ್’ ವೋಟರ್ ಲಿಸ್ಟ್ ಅಕ್ರಮ ಸಮರ: ಜಯನಗರ ಸೇರಿ 3 ಠಾಣೆಗಳಲ್ಲಿ FIR

ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಫಾರ್ಮ್-7 ದುರುಪಯೋಗ ಆರೋಪದ ಮೇಲೆ ರಾಜಕೀಯ ರಂಪಾಟ ತೀವ್ರಗೊಂಡಿದೆ. ಕಾಂಗ್ರೆಸ್ ದೂರಿನ ಅನ್ವಯ ಮೂರು ಎಫ್‌ಐಆರ್‌ಗಳು ದಾಖಲಾಗಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಆರೋಪಗಳಿವೆ. ಕಾಂಗ್ರೆಸ್ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿದೆ ಎಂದರೆ, ಬಿಜೆಪಿ ನಕಲಿ ಮತದಾರರನ್ನು ತೆಗೆಯುವ ಅಗತ್ಯವಿದೆ ಎಂದು ವಾದಿಸುತ್ತಿದೆ. ಈ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ರಾಜಕೀಯ ಸಮರ ತಾರಕಕ್ಕೇರಿದೆ.

ಬೆಂಗಳೂರಿನಲ್ಲಿ 'ಎಸ್‌ಐಆರ್' ವೋಟರ್ ಲಿಸ್ಟ್ ಅಕ್ರಮ ಸಮರ: ಜಯನಗರ ಸೇರಿ 3 ಠಾಣೆಗಳಲ್ಲಿ FIR
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 06, 2026 | 3:21 PM

Share

ಬೆಂಗಳೂರು, ಅ.6: ರಾಜ್ಯ ರಾಜಧಾನಿಯಲ್ಲಿ ಎಸ್​​ಐಆರ್ ಪ್ರಕ್ರಿಯೆಯ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ರಾಜಕೀಯ ರಂಪಾಟ ತೀವ್ರಗೊಂಡಿದೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು ಫಾರ್ಮ್-7 (Form-7) ಅನ್ನು ಅಕ್ರಮವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ನೀಡಿರುವ ದೂರಿನಡಿ ನಗರದ ವೈಯಾಲಿಕಾವಲ್, ಯಶವಂತಪುರ ಹಾಗೂ ಜಯನಗರ ಪೊಲೀಸ್ ಠಾಣೆಗಳಲ್ಲಿ ಇದುವರೆಗೆ ಮೂರು ಪ್ರತ್ಯೇಕ ಎಫ್‌ಐಆರ್ (FIR) ಗಳು ದಾಖಲಾಗಿವೆ. ನಿರ್ದಿಷ್ಟ ಸಮುದಾಯ ಒಂದನ್ನು ಟಾರ್ಗೆಟ್ ಮಾಡಿ ಅಕ್ರಮವಾಗಿ ಫಾರ್ಮ್-7 ಸಲ್ಲಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದರೆ, ಮತ್ತೊಂದೆಡೆ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಯನಗರ ಠಾಣೆಯಲ್ಲಿ ಸೌಮ್ಯಾ ರೆಡ್ಡಿ ದೂರು:

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಜಯನಗರ ಕ್ಷೇತ್ರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನನ್ವಯ ಜಯನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರಾದ ಯೋಗೇಶ್ ಹಾಗೂ ರಾಮಕೃಷ್ಣ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜಯನಗರ ಕ್ಷೇತ್ರದಲ್ಲಿ ಬರೋಬ್ಬರಿ 5,698 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿ ಫಾರ್ಮ್-7 ಸಲ್ಲಿಸಲಾಗಿದೆ ಎಂದು ಆರೋಪಿಸಲಾಗಿದೆ. ರಮೇಶ್ ಮತ್ತು ರೂಪಾ ಎಂಬುವರ ಹೆಸರು ಬಳಸಿ ಈ ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಆದರೆ ಈ ಬಗ್ಗೆ ಸ್ವತಃ ರಮೇಶ್ ಮತ್ತು ರೂಪಾಗೆ ಯಾವುದೇ ಮಾಹಿತಿಯೇ ಇರಲಿಲ್ಲ. ಹೀಗಾಗಿ ಮತದಾರರ ಹೆಸರು ಡಿಲೀಟ್ ಮಾಡಲು ಹುನ್ನಾರ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಮಹಜರು ನಡೆಸಿ, ದಾಖಲೆಗಳ ಪರಿಶೀಲನೆ ಆರಂಭಿಸಿದ್ದು, ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಸಜ್ಜಾಗಿದ್ದಾರೆ. ಅಗತ್ಯಬಿದ್ದರೆ ಚುನಾವಣಾ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ; ಸಮಸ್ಯೆ ಬಗೆಹರಿಸದಿದ್ದರೆ ಅಧಿಕಾರಿಗಳಿಗೆ ತಕ್ಕ ಬುದ್ಧಿ ಕಲಿಸುವುದಾಗಿ ಶಾಸಕರ ಎಚ್ಚರಿಕೆ

“ಮಾಜಿ ಶಾಸಕಿಗೆ ಕಾಮನ್ ಸೆನ್ಸ್ ಇರಬೇಕು”: ಬಿಜೆಪಿ ಶಾಸಕ ರಾಮಮೂರ್ತಿ ಖಾರವಾದ ಪ್ರತಿಕ್ರಿಯೆ

ಕಾಂಗ್ರೆಸ್ ನೀಡಿರುವ ದೂರು ಹಾಗೂ ಎಫ್‌ಐಆರ್ ವಿರುದ್ಧ ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಮಾಜಿ ಶಾಸಕಿಗೆ ಕೊಂಚವಾದರೂ ಕಾಮನ್ ಸೆನ್ಸ್ ಇರಬೇಕು. ಮತದಾರರ ಪಟ್ಟಿಯಲ್ಲಿ ಸಮಸ್ಯೆಯಿದ್ದರೆ ಚುನಾವಣಾ ಆಯೋಗದ ಕಚೇರಿಗೆ ಹೋಗಿ ದೂರು ನೀಡಬೇಕು, ಅದನ್ನು ಬಿಟ್ಟು ಪೊಲೀಸ್ ಸ್ಟೇಷನ್‌ಗೆ ಏಕೆ ದೂರು ಕೊಡಬೇಕು? ಟಿವಿಯಲ್ಲಿ ಶೋ ಮಾಡಲು ಮತ್ತು ಬ್ಲಾಕ್ ಮೇಲ್ ಮಾಡಲು ಈ ರೀತಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. “ಜಯನಗರದ ಪ್ರತಿ ಬೂತ್‌ನಲ್ಲೂ ಮೃತಪಟ್ಟವರ ಹೆಸರುಗಳು ಪಟ್ಟಿಯಲ್ಲಿವೆ. ಡಬಲ್ ಎಂಟ್ರಿ (Double Entry) ಇರುವುದನ್ನು ಸರಿಮಾಡಿ ಎಂದು ನಾವು ಕೇಳಿದ್ದೇವೆ. ಜಯನಗರ ಒಂದರಲ್ಲೇ ಸುಮಾರು 12 ಸಾವಿರ ನಕಲಿ ವೋಟ್‌ಗಳನ್ನು ತೆಗೆಯಬೇಕಿದೆ. ನಕಲಿ ವೋಟ್ ತೆಗೆಯಿರಿ ಎಂದು ಕೇಳಿದರೆ ತಪ್ಪೇನು? ಅಸಲಿ ಫ್ರಾಡ್ ಮಾಡುತ್ತಿರುವುದೇ ಕಾಂಗ್ರೆಸ್‌ನವರು. ಸಚಿವ ರಾಮಲಿಂಗಾರೆಡ್ಡಿಯವರು ಮಾಜಿ ಶಾಸಕರಿಗೆ ಬುದ್ಧಿ ಹೇಳಲಿ” ಎಂದು ಕಿಡಿಕಾರಿದರು. ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಕಾನೂನುಬಾಹಿರವಾಗಿದ್ದು, ಅದನ್ನು ರದ್ದುಗೊಳಿಸುವಂತೆ ಕಾಯ್ದೆ ಮತ್ತು ಬೀದಿಯಲ್ಲಿದ್ದು ಹೋರಾಟ ಮಾಡುವುದಾಗಿ ಶಾಸಕ ರಾಮಮೂರ್ತಿ ಎಚ್ಚರಿಸಿದ್ದಾರೆ.

ವರದಿ: ಪ್ರದೀಪ್​​​ ಚಿಕ್ಕಾಟಿ,  ಹರೀಶ್ 

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ