AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆಗೆ 39,437 ಕೋಟಿ ಟೆಂಡರ್ ವಿವಾದ: ಉನ್ನತ ಮಟ್ಟದ ಸಮಿತಿಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ವಿಶೇಷ ಮನವಿ

ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆಯ 39,437 ಕೋಟಿ ರೂ. ಟೆಂಡರ್ ಸಂಬಂಧ ಪರಿಶೀಲಿಸುತ್ತಿರುವ ಉನ್ನತ ಮಟ್ಟದ ಸಮಿತಿಯು ಯಾವುದೇ ಒತ್ತಡಕ್ಕೆ ಮಣಿಯದೆ, ಸಾರ್ವಜನಿಕ ಹಿತಾಸಕ್ತಿ ಕಾಯ್ದು ನಿರ್ಭೀತ ವರದಿ ನೀಡಬೇಕೆಂದು ವಿಪಕ್ಷ ನಾಯಕ ಆರ್. ಅಶೋಕ್ ಮನವಿ ಮಾಡಿದ್ದಾರೆ. ರಾಜ್ಯದ ಹಣಕಾಸು ಇಲಾಖೆಯೇ ಈ ಟೆಂಡ‌ರ್​​ ಕುರಿತು ಗಂಭೀರ ಆಕ್ಷೇಪಣೆಗಳನ್ನು ದಾಖಲಿಸಿದೆ ಎಂಬುದನ್ನೂ ಅವರು ಉಲ್ಲೇಖಿಸಿದ್ದಾರೆ.

ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆಗೆ 39,437 ಕೋಟಿ ಟೆಂಡರ್ ವಿವಾದ: ಉನ್ನತ ಮಟ್ಟದ ಸಮಿತಿಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ವಿಶೇಷ ಮನವಿ
ಉನ್ನತ ಮಟ್ಟದ ಸಮಿತಿಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ವಿಶೇಷ ಮನವಿImage Credit source: PTI
ಪ್ರಸನ್ನ ಹೆಗಡೆ
|

Updated on: Jun 14, 2026 | 7:19 AM

Share

ಬೆಂಗಳೂರು, ಜೂನ್ 14: ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ 39,437 ಕೋಟಿ ಟೆಂಡರ್ ಕುರಿತು ಪರಿಶೀಲನೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ವಿಶೇಷ ಮನವಿಯನ್ನು ಮಾಡಿದ್ದಾರೆ. ಯಾವುದೇ ರಾಜಕೀಯ, ಆಡಳಿತಾತ್ಮಕ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ, ಆತ್ಮಸಾಕ್ಷಿ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ವರದಿ ಸಲ್ಲಿಸಿ ಎಂದು ಆಗ್ರಹಿಸಿರುವ ಅವರು, ಇದು ಕೇವಲ ಒಂದು ಟೆಂಡರ್ ವಿಚಾರವಲ್ಲ. ಬೆಂಗಳೂರಿನ ಭವಿಷ್ಯ, ತೆರಿಗೆದಾರರ ಹಣ ಮತ್ತು ಸಾರ್ವಜನಿಕ ವಿಶ್ವಾಸದ ಪ್ರಶ್ನೆಯಾಗಿದೆ ಎಂದು ತಿಳಿಸಿದ್ದಾರೆ.

ಅಶೋಕ್​​ ಮನವಿಯಲ್ಲಿ ಏನಿದೆ?

ಬೆಂಗಳೂರಿಗೆ ಸಂಬಂಧಿಸಿದ ಅತ್ಯಂತ ಮಹತ್ವದ ವಿಷಯವನ್ನು ಪರಿಶೀಲಿಸಲು ರಾಜ್ಯ ಸರ್ಕಾರ ನಿಮ್ಮನ್ನು ಉನ್ನತ ಮಟ್ಟದ ಸಮಿತಿಗೆ ನೇಮಿಸಿದೆ. ನೀವು ಕೇವಲ ಈ ಸಮಿತಿಯ ಸದಸ್ಯರಲ್ಲ. ನೀವು ಈ ನಗರದ ನಾಗರಿಕರು, ತೆರಿಗೆ ಪಾವತಿಸುವವರು, ಬೆಂಗಳೂರಿನ ಪ್ರಗತಿಯ ಪಾಲುದಾರರು ಮತ್ತು ಹಕ್ಕುದಾರರು. ನಿಮ್ಮ ಕುಟುಂಬಗಳು ಮತ್ತು ಮಕ್ಕಳ ಭವಿಷ್ಯವೂ ಇದೇ ನಗರದ ಭವಿಷ್ಯದೊಂದಿಗೆ ಬೆಸೆದುಕೊಂಡಿದೆ. ಹೀಗಾಗಿ, ನಿಮ್ಮ ಮುಂದೆ ಇರುವ ಪ್ರಶ್ನೆ ಕೇವಲ ಒಂದು ಟೆಂಡರ್ ಕಡತದ ಪ್ರಶ್ನೆಯಲ್ಲ. ಮುಂದಿನ ಮೂರು ದಶಕಗಳ ಕಾಲ ಬೆಂಗಳೂರಿನ ಜನರ ಹಣ, ನಗರದ ಆಡಳಿತ ಮತ್ತು ಸಾರ್ವಜನಿಕ ಸಂಪನ್ಮೂಲಗಳ ಭವಿಷ್ಯವನ್ನು ನಿರ್ಧರಿಸುವ ಪ್ರಶ್ನೆಯಾಗಿದೆ.

ಇದನ್ನೂ ಓದಿ: ಬೆಂಗಳೂರು ಕಸದಲ್ಲಿ 36 ಸಾವಿರ ಕೋಟಿ ರೂ. ಲೂಟಿ ಆರೋಪ; ಬಿಜೆಪಿಗೆ ಡಿಕೆಶಿ ಓಪನ್ ಚಾಲೆಂಜ್

ರಾಜ್ಯದ ಹಣಕಾಸು ಇಲಾಖೆಯೇ ಈ ಟೆಂಡ‌ರ್​​ ಕುರಿತು ಗಂಭೀರ ಆಕ್ಷೇಪಣೆಗಳನ್ನು ದಾಖಲಿಸಿದೆ. ಈಗಾಗಲೇ ಬೆಂಗಳೂರು ನಗರದ ಜನರು ಆಸ್ತಿ ತೆರಿಗೆ, ವಿವಿಧ ಸೆಸ್‌ಗಳು, ಬಳಕೆದಾರರ ಶುಲ್ಕಗಳು ಹಾಗೂ ಇತರೆ ತೆರಿಗೆಗಳ ಭಾರವನ್ನು ಹೊರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕ ಹಣದ ಸಾವಿರಾರು ಕೋಟಿ ರೂಪಾಯಿಗಳ ಬಳಕೆಯ ಬಗ್ಗೆ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವೂ ಅತ್ಯಂತ ಜವಾಬ್ದಾರಿಯುತವಾಗಿರಬೇಕು. ನಿಮ್ಮ ಸಮಿತಿಯ ವರದಿ ಕೇವಲ ಸರ್ಕಾರಕ್ಕೆ ಸಲ್ಲಿಸುವ ಒಂದು ದಾಖಲೆಯಾಗಿರುವುದಿಲ್ಲ; ಅದು ಮುಂದಿನ ಪೀಳಿಗೆಗಳ ಮೇಲೂ ಪರಿಣಾಮ ಬೀರುವ ನಿರ್ಧಾರದ ಅಡಿಪಾಯವಾಗಲಿದೆ. ಆದ್ದರಿಂದ ಯಾವುದೇ ರಾಜಕೀಯ, ಆಡಳಿತಾತ್ಮಕ ಅಥವಾ ಇತರ ಒತ್ತಡಗಳಿಗೆ ಮಣಿಯದೆ, ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ, ಸಾರ್ವಜನಿಕ ಹಿತಾಸಕ್ತಿಯನ್ನು ಮಾತ್ರ ಮಾನದಂಡವನ್ನಾಗಿಸಿಕೊಂಡು ಸಂಪೂರ್ಣ ಪಾರದರ್ಶಕ, ಪ್ರಾಮಾಣಿಕ ಹಾಗೂ ನಿರ್ಭೀತ ವರದಿಯನ್ನು ಸಲ್ಲಿಸುವಂತೆ ವಿನಂತಸೋದಾಗಿ ಮನವಿಯಲ್ಲಿ ಅಶೋಕ್​​ ಉಲ್ಲೇಖಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!