ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​ ಕೊಟ್ಟ BWSSB: ಮೂರು ತಿಂಗಳ ಅವಧಿಗೆ OTS ಯೋಜನೆ ಜಾರಿ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನಗರದ ನಿವಾಸಿಗಳಿಗೆ ಮೂರು ತಿಂಗಳ ಅವಧಿಗೆ ಒನ್ ಟೈಮ್ ಸೆಟಲ್‌ಮೆಂಟ್ (OTS) ಯೋಜನೆಯನ್ನು ಜಾರಿಗೆ ತಂದಿದೆ. ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಇದು ಸುವರ್ಣಾವಕಾಶ ಎಂದೇ ಹೆಳಲಾಗ್ತಿದೆ. ಏಪ್ರಿಲ್‌ನಿಂದ ಜೂನ್‌ವರೆಗೆ ಈ ಯೋಜನೆ ಲಭ್ಯವಿದ್ದು, ಗ್ರಾಹಕರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​ ಕೊಟ್ಟ BWSSB: ಮೂರು ತಿಂಗಳ ಅವಧಿಗೆ OTS ಯೋಜನೆ ಜಾರಿ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

Updated on: Apr 07, 2026 | 7:30 PM

ಬೆಂಗಳೂರು, ಏಪ್ರಿಲ್​​ 07: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನಗರದ ನಿವಾಸಿಗಳಿಗೆ ಗುಡ್​​ ನ್ಯೂಸ್​​ ನೀಡಿದೆ. ಬಾಕಿ ಇರುವ ನೀರಿನ ಬಿಲ್‌ಗಳನ್ನು ವಸೂಲಿ ಮಾಡುವ ಉದ್ದೇಶದಿಂದ ಮೂರು ತಿಂಗಳ ಅವಧಿಗೆ ಒನ್ ಟೈಮ್ ಸೆಟಲ್‌ಮೆಂಟ್ (OTS) ಯೋಜನೆಯನ್ನು ಜಾರಿಗೆ ತಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಡಳಿಯ ಅಧ್ಯಕ್ಷ ರಾಮ ಪ್ರಸಾತ್ ಮನೋಹರ್ , ಪ್ರಸ್ತುತ ನೀರಿನ ಬಿಲ್‌ಗಳ ಜೊತೆಗೆ OTS ನೋಟಿಸ್‌ಗಳನ್ನು ನೀಡಲಾಗುವುದು. BWSSB ವ್ಯಾಪ್ತಿಯ ಸುಮಾರು 11 ಲಕ್ಷ ನೀರಿನ ಸಂಪರ್ಕಗಳಲ್ಲಿ, 5.11 ಲಕ್ಷ ಗ್ರಾಹಕರಿಗೆ ಸಂಬಂಧಿಸಿ ಬಾಕಿ ಬಿಲ್‌ಗಳು ಇರುವುದಾಗಿ ಅವರು ತಿಳಿಸಿದ್ದಾರೆ.

ಏಪ್ರಿಲ್‌ನಿಂದ ಜೂನ್‌ವರೆಗೆ OTS ಯೋಜನೆ

ಅಂಕಿಅಂಶಗಳ ಪ್ರಕಾರ, ಫೆಬ್ರವರಿ ಅಂತ್ಯದ ವೇಳೆಗೆ ಬಾಕಿ ಇರುವ ನೀರಿನ ಬಿಲ್‌ಗಳ ಒಟ್ಟು ಮೊತ್ತ 851.33 ಕೋಟಿ ರೂಪಾಯಿಗಳಾಗಿದ್ದು, ಇದರಲ್ಲಿ ಮೂಲ ಮೊತ್ತ 539.43 ಕೋಟಿ ರೂಪಾಯಿ ಹಾಗೂ ಬಡ್ಡಿ 311.90 ಕೋಟಿ ರೂಪಯಿಗಳು ಸೇರಿವೆ. ಈ ಬಾಕಿ ಮೊತ್ತವನ್ನು ಸುಲಭವಾಗಿ ತೀರಿಸಲು ಏಪ್ರಿಲ್‌ನಿಂದ ಜೂನ್‌ವರೆಗೆ OTS ಯೋಜನೆಯನ್ನು ಜಾರಿಗೆ ತರಲಾಗಿದೆ. OTS ಯೋಜನೆಗೆ ಅರ್ಹರಾಗಿರುವ ಗ್ರಾಹಕರಿಗೆ ಈ ತಿಂಗಳ ನೀರಿನ ಬಿಲ್ ಜೊತೆಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ ಎಂದು ರಾಮ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಇದನ್ನೂ ಓದಿ: ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ; ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ

ಬಾಕಿ ಇರುವ ಮೂಲ ಮೊತ್ತ, ಮನ್ನಾ ಮಾಡಲಾಗುವ ಬಡ್ಡಿ ಮೊತ್ತ, ಅಂತಿಮವಾಗಿ ಪಾವತಿಸಬೇಕಾದ ಮೊತ್ತ, ಪಾವತಿ ವಿಧಾನಗಳು ಹಾಗೂ ಯೋಜನೆಯ ಅರ್ಹತಾ ಮಾನದಂಡಗಳ ವಿವರಗಳನ್ನು ಪ್ರತ್ಯೇಕ ಪತ್ರದ ಮೂಲಕ ಬಿಲ್ ಜೊತೆ ಸೇರಿಸಿ ನೀಡಲಾಗುತ್ತದೆ. ದೀರ್ಘಕಾಲದಿಂದ ಬಿಲ್​​ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಅವರು ಮನವಿ ಮಾಡಿರೋದಾಗಿ ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:49 pm, Tue, 7 April 26

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow Us