AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆ ಆರಂಭಕ್ಕೂ ಮೊದಲೇ ಬೆಂಗಳೂರಿಗರಿಗೆ ಶಾಕ್: ನೀರು ವ್ಯರ್ಥ ಮಾಡಿದರೆ ಬೀಳುತ್ತೆ ದಂಡ

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆಯನ್ನು ತಪ್ಪಿಸಲು, ಜಲಮಂಡಳಿಯು ಹೊಸ ಆದೇಶ ಹೊರಡಿಸಿದೆ. ವಾಹನ ತೊಳೆಯುವುದು, ಕೈದೋಟ, ಮತ್ತು ಇತರ ಅನಗತ್ಯ ಬಳಕೆಗಳಿಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಉಲ್ಲಂಘಿಸಿದರೆ 5000 ರೂ. ದಂಡ ವಿಧಿಸಲಾಗುವುದು. ಈ ಬಾರಿ ಬೇಸಿಗೆ ಆರಂಭಕ್ಕೂ ಮೊದಲೇ ಆದೇಶ ಜಾರಿ ಮಾಡಲಾಗಿದೆ.

ಬೇಸಿಗೆ ಆರಂಭಕ್ಕೂ ಮೊದಲೇ ಬೆಂಗಳೂರಿಗರಿಗೆ ಶಾಕ್: ನೀರು ವ್ಯರ್ಥ ಮಾಡಿದರೆ ಬೀಳುತ್ತೆ ದಂಡ
ಬೇಸಿಗೆ ಆರಂಭಕ್ಕೂ ಮೊದಲೇ ಬೆಂಗಳೂರಿಗರಿಗೆ ಶಾಕ್: ನೀರು ವ್ಯರ್ಥ ಮಾಡಿದರೆ ಬೀಳುತ್ತೆ ದಂಡ
ಶಾಂತಮೂರ್ತಿ
ಶಾಂತಮೂರ್ತಿ | Edited By: |

Updated on: Feb 17, 2025 | 9:45 PM

Share

ಬೆಂಗಳೂರು, ಫೆಬ್ರವರಿ 17: ಇನ್ನೂ ಚಳಿಗಾಲ ಮುಗಿದಿಲ್ಲ. ಬೇಸಿಗೆ ಶುರುವಾಗಿಲ್ಲ. ಆಗಲೇ ಕುಡಿಯುವ ನೀರಿಗೆ (Water) ಹಾಹಾಕಾರ ಶುರುವಾಗಿದೆ. ಇತ್ತ ಸಿಲಿಕಾನ್​ ಸಿಟಿ ಜನರಿಗೆ ಯಲ್ಲಿ ಬೇಸಿಗೆ ಆರಂಭಕ್ಕೂ ಮೊದಲೇ ಶಾಕ್ ಎದುರಾಗಿದೆ. ಕಳೆದ ಬಾರಿ ಬೇಸಿಗೆಯಲ್ಲಿ ಹೊರಡಿಸಿದ್ದ ಆದೇಶ ಮರು ಜಾರಿ ಮಾಡಲಾಗಿದ್ದು, ಅನಗತ್ಯವಾಗಿ ನೀರು ವ್ಯರ್ಥ ಮಾಡಿದವರಿಗೆ ದಂಡ ವಿಧಿಸಲು ಜಲಮಂಡಳಿ ಸಜ್ಜಾಗಿದೆ.

ಈ ಬಗ್ಗೆ ಆದೇಶ ಹೊರಡಿಸಿರುವ ಜಲಮಂಡಳಿ ಕೈದೋಟ, ವಾಹನ ತೊಳೆಯಲು ಕುಡಿಯುವ ನೀರು ಬಳಸಿದರೆ 5 ಸಾವಿರ ರೂ. ದಂಡ ವಿಧಿಸುವುದಾಗಿ ತಿಳಿಸಿದೆ. ಆದೇಶ ಉಲ್ಲಂಘಿಸಿದವರ ಬಗ್ಗೆ ಸಹಾಯವಾಣಿ ಸಂಖ್ಯೆ 1916 ಕರೆ ಮಾಡಿ ದೂರು ನೀಡಲು ಸೂಚನೆ ನೀಡಲಾಗಿದೆ.

ಜಲಮಂಡಳಿ ಆದೇಶದಲ್ಲೇನಿದೆ?

ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿದಂತೆ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯಕವಾಗಿದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟುವುದು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಅಗತ್ಯಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಸಾರ್ವಜನಿಕರಿಂದ ದೂರು: ಬೆಸ್ಕಾಂ, ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ಈ ಕೆಳಕಂಡ ಉದ್ದೇಶಗಳಿಗೆ ಬಳಸಲು ಈ ಮೂಲಕ ನೀಷೇದಿಸಲಾಗಿದೆ.

  • ವಾಹನಗಳ ಸ್ವಚ್ಚತೆಗೆ
  • ಕೈದೋಟಕ್ಕೆ
  • ಕಟ್ಟಡ ನಿರ್ಮಾಣಕ್ಕೆ
  • ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ
  • ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ
  • ರಸ್ತೆ ನಿರ್ಮಾಣ ಮತ್ತು ಸ್ವಚ್ಛತೆಗೆ

ಇದನ್ನೂ ಓದಿ: ನೀರಿನ ದರ ಹೆಚ್ಚಳ ಸುಳಿವು ನೀಡಿದ ಬೆಂಗಳೂರು ಜಲಮಂಡಳಿ: ಡಿಕೆಶಿ ನೇತೃತ್ವದ ಮುಂದಿನ ಸಭೆಯಲ್ಲಿ ತೀರ್ಮಾನ ಸಾಧ್ಯತೆ

ಮೇಲ್ಕಂಡ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ರೂ. 5000 ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ ರೂ.5000 ಜೊತೆಗೆ ಹೆಚ್ಚುವರಿಯಾಗಿ ರೂ.500 ಪ್ರತಿದಿನದಂತೆ ದಂಡ ವಿಧಿಸಲಾಗುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shanthamurthy
Shanthamurthy
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ