ಬೆಂಗಳೂರು ಹೊರ ವಲಯದ ನೀರಿನ ಅಭಾವ ತಪ್ಪಿಸಲು ಜಲಮಂಡಳಿಯಿಂದ ಹೊಸ ಪ್ಲ್ಯಾನ್​​

Bengaluru Water Crisis: ಬೆಂಗಳೂರು ನಗರ ಮತ್ತು ಹೊರವಲಯದಲ್ಲಿ ನೀರಿನ ಬಿಕ್ಕಟ್ಟು ತೀವ್ರಗೊಂಡಿದೆ. ಹೀಗಾಗಿ ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಮಂಡಳಿ ಕೆರೆಗಳ ಮೊರೆ ಹೋಗಿದೆ. ಐಐಎಸ್​ಸಿ ಸಹಯೋಗದಲ್ಲಿ ಬೆಂಗಳೂರಿನ ಎಂಟು ಕೆರೆಗಳಲ್ಲಿ ಫಿಲ್ಟರ್ ಬೋರ್ ವೆಲ್ ಅಳವಡಿಸಲು ತಯಾರಿ ನಡೆಸಿದೆ.

ಬೆಂಗಳೂರು ಹೊರ ವಲಯದ ನೀರಿನ ಅಭಾವ ತಪ್ಪಿಸಲು ಜಲಮಂಡಳಿಯಿಂದ ಹೊಸ ಪ್ಲ್ಯಾನ್​​
ಬೆಂಗಳೂರು ಜಲ ಮಂಡಳಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Mar 09, 2024 | 12:39 PM

ಬೆಂಗಳೂರು, ಮಾರ್ಚ್​ 09: ಬೆಂಗಳೂರು ನಗರ ಮತ್ತು ಹೊರವಲಯದಲ್ಲಿ ನೀರಿನ ಬಿಕ್ಕಟ್ಟು (Bengaluru Water Crisis) ತೀವ್ರಗೊಂಡಿದೆ. ಇನ್ನೇನು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಈ ವರ್ಷ ಕುಡಿಯುವ ನೀರಿಗೂ ಹಲವೆಡೆ ಸಮಸ್ಯೆ ಎದುರಾಗಿದೆ. ಈ ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಮಂಡಳಿ (Bangaluru Water Supply and Sewerage Board) ಕೆರೆಗಳ (Lake) ಮೊರೆ ಹೋಗಿದೆ. ಐಐಎಸ್​ಸಿ ಸಹಯೋಗದಲ್ಲಿ ಬೆಂಗಳೂರಿನ ಎಂಟು ಕೆರೆಗಳಲ್ಲಿ ಫಿಲ್ಟರ್ ಬೋರ್ ವೆಲ್ ಅಳವಡಿಸಲು ತಯಾರಿ ನಡೆಸಿದೆ. ಅದರಂತೆ ಮೊದಲಿಗೆ ನಾಯಂಡಹಳ್ಳಿ ಕೆರೆ, ಚಿಕ್ಕ ಬಾಣವಾರ ಕೆರೆ, ವರ್ತೂರು ಕೆರೆ ಸೇರಿದಂತೆ ಎಂಟು ಕೆರಳ ನೀರನ್ನು 10 ರಿಂದ 15 ದಿನಗಳಲ್ಲಿ ಸಂಗ್ರಹಿಸಲಾಗುತ್ತಾದೆ. ಬಳಿಕ ತಜ್ಞರು ನೀರಿನ ಗುಣಮಟ್ಟ ಪರಿಶೀಲಿಸಲಿದ್ದಾರೆ.

ತಜ್ಞರ ಪರೀಕ್ಷೆಯಲ್ಲಿ ನೀರು ಕುಡಿಯಲು ಯೋಗ್ಯವೆಂದು ವರದಿ ಬಂದರೇ, ಬಳಿಕ ಬೋರ್​​ವೆಲ್​ ಕೊರೆಯಲಾಗುತ್ತದೆ. ನಂತರ ನೀರು ಶುದ್ಧೀಕರಣ ಮಾಡಿ, ಬಳಿಕ ಮನೆ ಮನೆಗೆ ಸರಬರಾಜು ಮಾಡಲಾಗುತ್ತದೆ ಎಂದು ಜಲಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟ್ಯಾಂಕರ್ ನೀರಿಗೆ ದರ ನಿಗದಿಪಡಿಸಿ ಜಿಲ್ಲಾಡಳಿತ ಆದೇಶ

ಟ್ಯಾಂಕರ್ ಮಾಲೀಕರ ಜೊತೆ ಮೂರ್ನಾಲ್ಕು ಬಾರಿ ಸಭೆ ನಡೆಸಿದ ನಂತರ ಜಿಲ್ಲಾಡಳಿತ ಬೆಲೆ ನಿಗದಿ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮುಖ್ಯಮಂತ್ರಿಗಳ ಗೃಹಕಚೇರಿಗೂ ತಟ್ಟಿದ ನೀರಿನ ಬಿಸಿ; ಟ್ಯಾಂಕರ್​ನಲ್ಲಿ ನೀರು ಪೂರೈಕೆ

ಟ್ಯಾಂಕರ್ ನೀರಿನ ದರ ವಿವರ ಇಲ್ಲಿದೆ

  • 6 ಸಾವಿರ ಲೀಟರ್ ಟ್ಯಾಂಕರ್​ಗೆ 600 ರೂ. ದರ ನಿಗದಿ. ಇದು 5 ಕಿಲೋ ಮೀಟರ್ ಒಳಗಡೆಗೆ ಮಾತ್ರ ಅನ್ವಯವಾಗಲಿದೆ.
  • 6 ಸಾವಿರ ಲೀಟರ್ ಟ್ಯಾಂಕರ್ ಗೆ 750 ರೂ. ದರ ನಿಗದಿ. ಇದು 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅನ್ವಯವಾಗಲಿದೆ.
  • 8 ಸಾವಿರ ಲೀಟರ್ ಟ್ಯಾಂಕರ್​ಗೆ 700 ರೂ. ದರ ನಿಗದಿ‌‌ ಮಾಡಲಾಗಿದ್ದು, ಇದು 5 ಕಿಲೋ ಮೀಟರ್ ಒಳಗೆ ಅನ್ವಯವಾಗಲಿದೆ.
  • 8 ಸಾವಿರ ಲೀಟರ್​ಗೆ 850 ರೂ. ದರ ನಿಗದಿ ಮಾಡಲಾಗಿದ್ದು, 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಈ ದರ ಪಡೆಯಬಹುದಾಗಿದೆ.
  • 5 ಕಿಲೋ ಮೀಟರ್ ವ್ಯಾಪ್ತಿಗೆ 1,200 ಲೀಟರ್ ಟ್ಯಾಂಕರ್​​ಗೆ 1000 ರೂ. ದರ ನಿಗದಿ ಮಾಡಲಾಗಿದೆ.
  • 1200 ಲೀಟರ್ ಟ್ಯಾಂಕರ್​​​ಗೆ 1200 ರೂ. ದರ ಫಿಕ್ಸ್ ಮಾಡಲಾಗಿದ್ದು 10 ಕಿಲೋ ಮೀಟರ್ ವ್ಯಾಪ್ತಿಗೆ ಅನ್ವಯವಾಗಲಿದೆ.
  • ಜಿಎಸ್​​ಟಿ ಸೇರಿಸಿ ಈ ದರ ಫಿಕ್ಸ್ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ತಿಂಗಳ ಬಾಡಿಗೆ ಒಪ್ಪಿಕೊಳ್ಳುವವರಿಗೆ 5 ಕಿಲೋ ಮೀಟರ್​​​ಗೆ 510 ರೂ. ನಿಗದಿಪಡಲಾಗಿದೆ. 10 ಕಿಲೋ ಮೀಟರ್ ಹೋದರೆ 650 ರೂ. ದರ ಫಿಕ್ಸ್ ಮಾಡಲಾಗಿದೆ.
  • ಜಿಎಸ್​​ಟಿ ಸೇರಿಸಿ ಈ ದರ ಫಿಕ್ಸ್ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ತಿಂಗಳ ಬಾಡಿಗೆ ಒಪ್ಪಿಕೊಳ್ಳುವವರಿಗೆ 5 ಕಿಲೋ ಮೀಟರ್​​​ಗೆ 510 ರೂ. ನಿಗದಿಪಡಲಾಗಿದೆ. 10 ಕಿಲೋ ಮೀಟರ್ ಹೋದರೆ 650 ರೂ. ದರ ಫಿಕ್ಸ್ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ