AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Water Crisis: ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಗ್ರಾಹಕರಿಗೆ ನೀರು ಸರಬರಾಜಿನಲ್ಲಿ ಶೇ 20 ಕಡಿತ

ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ತೀವ್ರಗೊಂಡಿರುವ ಕಾರಣ, ದೊಡ್ಡ ಮಟ್ಟದ ಗ್ರಾಹಕರಿಗೆ ನೀರು ಸರಬರಾಜಿನಲ್ಲಿ ಕಡಿತ ಮಾಡಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ಧಾರ ಕೈಗೊಂಡಿದೆ. ಯಾವೆಲ್ಲ ಸಂಸ್ಥೆಗಳಿಗೆ ಇದರ ಹೊಡೆತ ತಟ್ಟಲಿದೆ? ಯಾವೆಲ್ಲ ಸಂಸ್ಥೆಗಳಿಗೆ ಇದರಿಂದ ವಿನಾಯಿತಿ ಇದೆ ಎಂಬ ಮಾಹಿತಿ ಇಲ್ಲಿದೆ.

Bengaluru Water Crisis: ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಗ್ರಾಹಕರಿಗೆ ನೀರು ಸರಬರಾಜಿನಲ್ಲಿ ಶೇ 20 ಕಡಿತ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Mar 13, 2024 | 9:39 AM

Share

ಬೆಂಗಳೂರು, ಮಾರ್ಚ್​ 13: ಬೆಂಗಳೂರಿನಾದ್ಯಂತ (Bengaluru) ಅಪಾರ ಪ್ರಮಾಣದಲ್ಲಿ ನೀರು ಬಳಸುವ ಮತ್ತು ದೊಡ್ಡ ಮಟ್ಟದ ಗ್ರಾಹಕರಿಗೆ ಮಾಡಲಾಗುತ್ತಿರುವ ಸರಬರಾಜಿನಲ್ಲಿ ಶೇ 20ರಷ್ಟು ಕಡಿತ ಮಾಡಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನಿರ್ಧರಿಸಿದೆ. ಸದ್ಯ ಲಭ್ಯವಿರುವ ಕಾವೇರಿ ನೀರನ್ನು (Cauvery Water) ತುರ್ತಾಗಿ ನೀರಿನ ಅಗತ್ಯವಿರುವ ಪ್ರದೇಶಗಳಿಗೆ ಪೂರೈಕೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ವಿಚಾರವಾಗಿ ದೊಡ್ಡಮಟ್ಟದ ಗ್ರಾಹಕರ ಜತೆ ಮಂಡಳಿ ಅಧಿಕಾರಿಗಳು ಸಭೆ ನಡೆಸಿದ್ದು, ನಗರವು ಎದುರಿಸುತ್ತಿರುವ ತೀವ್ರ ನೀರಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸರಬರಾಜಿನಲ್ಲಿ ಕಡಿತ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನೀರಿನ ತೀವ್ರ ಕೊರತೆಯಿದೆ. ನಗರದ 1.4 ಕೋಟಿ ಜನಸಂಖ್ಯೆಯ ಯೋಗಕ್ಷೇಮವನ್ನು ಪರಿಗಣಿಸಿ, ಈ ಕ್ರಮ ಕೈಗೊಳ್ಳುವುದು ಮತ್ತು ಕುಡಿಯುವ ನೀರಿನ ಕೊರತೆ ಎದುರಿಸುತ್ತಿರುವ ಪ್ರದೇಶಗಳಿಗೆ ಹಂಚಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷ ಡಾ ರಾಮಪ್ರಸಾತ್ ಮನೋಹರ್ ವಿ. ತಿಳಿಸಿದ್ದಾರೆ.

ದೊಡ್ಡ ಮಟ್ಟದ ಗ್ರಾಹಕರು ಯಾರು?

ದಿನವೊಂದಕ್ಕೆ ಎರಡು ಕೋಟಿ ಲೀಟರ್‌ಗಿಂತಲೂ ಹೆಚ್ಚು ನೀರು ಬಳಕೆ ಮಾಡುವ ಸಂಸ್ಥೆಗಳನ್ನು ಬಿಡಬ್ಲ್ಯುಎಸ್‌ಎಸ್‌ಬಿ ಬೃಹತ್ ಗ್ರಾಹಕರು ಎಂದು ವರ್ಗೀಕರಿಸಿದೆ. ನಗರದಲ್ಲಿ ಅಂತಹ 38 ಬಳಕೆದಾರರಿದ್ದಾರೆ. ಅವರು ಪ್ರಸ್ತುತ ತಿಂಗಳಿಗೆ ಒಟ್ಟು 1,765 ಮಿಲಿಯನ್ ಲೀಟರ್‌ ನೀರು ಬಳಸುತ್ತಾರೆ.

ದೊಡ್ಡ ಗ್ರಾಹಕರಿಗೆ ಶೇ 20ರಷ್ಟು ಸರಬರಾಜು ಕಡಿತಗೊಳಿಸುವ ಈ ನಿರ್ಧಾರದಿಂದ ನಾವು ದಿನಕ್ಕೆ ಕನಿಷ್ಠ 10 ಎಂಎಲ್​ಡಿ ನೀರನ್ನು ಉಳಿಸಲು ಸಾಧ್ಯವಾಗುತ್ತದೆ. ನಗರದ ಕೊಳೆಗೇರಿಗಳು ಮತ್ತು ಬಡವರ ಅಗತ್ಯಗಳನ್ನು ಪೂರೈಸಲು ಇದನ್ನು ಮರುಹಂಚಿಕೆ ಮಾಡಬಹುದು ಎಂದು ಮನೋಹರ್ ತಿಳಿಸಿದ್ದಾರೆ.

ಆದಾಗ್ಯೂ, ನೀರಿನ ಸರಬರಾಜಿನಲ್ಲಿ ಈಗಲೇ ಹಠಾತ್ ಕಡಿತ ಮಾಡುವುದಿಲ್ಲ. ಮಾರ್ಚ್ 15 ರಿಂದ ಹಂತಹಂತವಾಗಿ ಕಡಿತಗೊಳಿಸಲಾಗುವುದು. ಏಪ್ರಿಲ್ 15 ರ ವೇಳೆಗೆ ಒಟ್ಟು ಶೇ 20 ರ ಕಡಿತದ ಗುರಿಯನ್ನು ಸಾಧಿಸಲಾಗುತ್ತದೆ ಎಂದು ಮನೋಹರ್ ಹೇಳಿರುವುದಾಗಿ ಪತ್ರಿಕಾ ವರದಿಗಳು ಉಲ್ಲೇಖಿಸಿವೆ.

ಆಸ್ಪತ್ರೆಗಳಿಗೆ ವಿನಾಯಿತಿ

ಬೆಂಗಳೂರಿನಲ್ಲಿ ಮೂರು ಆಸ್ಪತ್ರೆಗಳು (ನಿಮ್ಹಾನ್ಸ್, ವಿಕ್ಟೋರಿಯಾ ಮತ್ತು ಕಮಾಂಡ್ ಆಸ್ಪತ್ರೆ) ಬೃಹತ್ ಪ್ರಮಾಣದ ನೀರು ಬಳಕೆಯ ಗ್ರಾಹಕರಾಗಿದ್ದಾರೆ. ವೈದ್ಯಕೀಯ ತುರ್ತು ಪರಿಸ್ಥಿತಿ ಪರಿಗಣಿಸಿ ಈ ಮೂರು ಸಂಸ್ಥೆಗಳಿಗೆ ನೀರು ಸರಬರಾಜು ಕಡಿತದ ನಿರ್ಧಾರ ಅನ್ವಯಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಈಜು ಕೊಳಕ್ಕೆ ಕುಡಿಯುವ ನೀರಿನ ಬಳಕೆಗೆ ನಿಷೇಧ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್), ಬಯೋಕಾನ್ ಪ್ರೈವೇಟ್ ಲಿಮಿಟೆಡ್, ಏರ್ ಫೋರ್ಸ್ ಸ್ಟೇಷನ್‌ಗಳು, ಬೆಂಗಳೂರು ವಿಶ್ವವಿದ್ಯಾಲಯ, ರೈಲ್ವೇಸ್ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಇವುಗಳು ಸಹ ದೊಡ್ಡ ಗ್ರಾಹಕರ ಪಟ್ಟಿಯಲ್ಲಿ ಸೇರಿದ್ದು, ನೀರು ಸರಬರಾಜಿನಲ್ಲಿ ಕಡಿತ ಎದುರಿಸಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:37 am, Wed, 13 March 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ