Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಸ್ಥಳಾಂತರ ಇಲ್ಲ, ಚಿನ್ನಸ್ವಾಮಿ ಸ್ಟೇಡಿಯಂಗೆ ಸಂಸ್ಕರಿಸಿದ ನೀರು: ಜಲ ಮಂಡಳಿ ಭರವಸೆ

ನೀರಿನ ಅಭಾವದ ಹಿನ್ನೆಲೆಯಲ್ಲಿ ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನಿಂದ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂಬ ವದಂತಿಗಳ ಮಧ್ಯೆ, ಪಂದ್ಯದ ಅಗತ್ಯಗಳಿಗಾಗಿ ಸಂಸ್ಕರಿಸಿದ ನೀರನ್ನು ಪೂರೈಸುವುದಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಭರವಸೆ ನೀಡಿದೆ. ಇದರಿಂದಾಗಿ, ಪಂದ್ಯಗಳು ಬೆಂಗಳೂರಿನಿಂದ ಸ್ಥಳಾಂತರಗೊಳ್ಳಬಹುದು ಎಂಬ ಆತಂಕ ದೂರವಾಗಿದೆ.

ಐಪಿಎಲ್ ಸ್ಥಳಾಂತರ ಇಲ್ಲ, ಚಿನ್ನಸ್ವಾಮಿ ಸ್ಟೇಡಿಯಂಗೆ ಸಂಸ್ಕರಿಸಿದ ನೀರು: ಜಲ ಮಂಡಳಿ ಭರವಸೆ
ಚಿನ್ನಸ್ವಾಮಿ ಸ್ಟೇಡಿಯಂ
Follow us
Ganapathi Sharma
|

Updated on: Mar 21, 2024 | 7:43 AM

ಬೆಂಗಳೂರು, ಮಾರ್ಚ್​ 21: ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು (Bengaluru Water Crisis) ತೀವ್ರಗೊಂಡಿರುವ ಕಾರಣ ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ನಡೆಯಲಿರುವ ಐಪಿಎಲ್ ಪಂದ್ಯಗಳನ್ನು (IPL Matches) ಸ್ಥಳಾಂತರ ಮಾಡಬೇಕೆಂದು ಇತ್ತೀಚೆಗೆ ಕೆಲವು ಸಂಘಟನೆಗಳು ಒತ್ತಾಯಿಸಿದ್ದವು. ಆದರೆ ಈ ವಿಚಾರವಾಗಿ ಅಂತಿಮ ನಿರ್ಧಾರಕ್ಕೆ ಬಂದಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪಂದ್ಯಾವಳಿಯ ಅಗತ್ಯಕ್ಕೆ ಸಂಸ್ಕರಿಸಿದ ನೀರನ್ನು ಒದಗಿಸುವುದಾಗಿ ಹೇಳಿದೆ. ಈ ಮೂಲಕ ನೀರಿನ ಸಮಸ್ಯೆಯಿಂದಾಗಿ ಐಪಿಎಲ್ ಪಂದ್ಯಗಳು ಬೆಂಗಳೂರಿನಿಂದ ಸ್ಥಳಾಂತರಿಸಬಹುದು ಎಂಬ ಊಹಾಪೋಹಗಳಿಗೆ ತೆರೆ ಎಳೆದಿದೆ. ಪಂದ್ಯದ ವೇಳೆ ಕ್ರೀಡಾಂಗಣಕ್ಕೆ 75,000 ಲೀಟರ್ ಸಂಸ್ಕರಿಸಿದ ನೀರನ್ನು ಪೂರೈಸುವ ಭರವಸೆಯನ್ನು ಬಿಡಬ್ಲ್ಯುಎಸ್‌ಎಸ್‌ಬಿ ನೀಡಿದೆ.

ಬಿಡಬ್ಲ್ಯುಎಸ್‌ಎಸ್‌ಬಿ ಹೇಳಿಕೆಯ ಪ್ರಕಾರ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧಿಕಾರಿಗಳು ಬುಧವಾರ ಮಂಡಳಿ ಅಧ್ಯಕ್ಷ ಡಾ ರಾಮಪ್ರಸಾತ್ ಮನೋಹರ್ ವಿ ಅವರನ್ನು ಭೇಟಿ ಮಾಡಿ ಪಂದ್ಯದ ಎಲ್ಲಾ ದಿನಗಳಲ್ಲಿ ಸಂಸ್ಕರಿಸಿದ ನೀರನ್ನು ಪೂರೈಸುವಂತೆ ಮನವಿ ಮಾಡಿದ್ದಾರೆ.

ಕ್ರೀಡಾಂಗಣವು ಕಾವೇರಿ ನೀರು ಅಥವಾ ಬೋರ್‌ವೆಲ್ ನೀರನ್ನು ಬಳಸುತ್ತಿಲ್ಲ. ಹೀಗಾಗಿ ನೀರಿನ ದುರುಪಯೋಗವಾಗದಂತೆ ನೋಡಿಕೊಳ್ಳುವ ಮೂಲಕ ಅವರು ಪಂದ್ಯಗಳನ್ನು ಮುಂದುವರಿಸಲು ಅವಕಾಶ ನೀಡಬಹುದು ಎಂದು ಮನೋಹರ್ ಹೇಳಿದ್ದಾರೆ.

ಕೆಎಸ್‌ಸಿಎ ಅಧಿಕಾರಿಗಳು ಸಂಸ್ಕರಿಸಿದ ನೀರನ್ನು ಕೇಳಿದ್ದಾರೆ. ಸಂಸ್ಕರಿಸಿದ ನೀರಿನ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಾವು ಅವರ ಮನವಿಯನ್ನು ಒಪ್ಪಿಕೊಂಡಿದ್ದೇವೆ. ಕಬ್ಬನ್ ಪಾರ್ಕ್‌ನಲ್ಲಿರುವ ಕೊಳಚೆ ನೀರು ಸಂಸ್ಕರಣಾ ಘಟಕದಿಂದ ಐಪಿಎಲ್​ ಪಂದ್ಯಾವಳಿಗಳಿಗೆ ನೀರು ಸರಬರಾಜು ಮಾಡಲಾಗುವುದು ಎಂದು ಮನೋಹರ್ ತಿಳಿಸಿದ್ದಾರೆ.

ಸುಮಾರು 32,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿರುವ ಚಿನ್ನಸ್ವಾಮಿ ಕ್ರೀಡಾಂಗಣವು ಮಾರ್ಚ್ 25 ರಂದು ನಗರದಲ್ಲಿ ಮೊದಲ ಐಪಿಎಲ್ ಪಂದ್ಯವನ್ನು ಆಯೋಜಿಸಲು ಸಿದ್ಧವಾಗಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಅನ್ನು ಎದುರಿಸಲಿದೆ. ನಂತರದ ಪಂದ್ಯಗಳು ಮಾರ್ಚ್ 29 ಮತ್ತು ಏಪ್ರಿಲ್ 2 ರಂದು ನಡೆಯಲಿವೆ.

ಇದನ್ನೂ ಓದಿ: ಬೆಂಗಳೂರಲ್ಲಿ ನೀರಿನ ಅಭಾವ, ಐಪಿಎಲ್​​ ಪಂದ್ಯ ಸ್ಥಳಾಂತರಕ್ಕೆ ಚಿಂತನೆ: ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ ವಾಟಾಳ್

ನೀರಿನ ಬಿಕ್ಕಟ್ಟು ಇರುವ ಕಾರಣ ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನಿಂದ ಸ್ಥಳಾಂತರಿಸಬೇಕು ಎಂಬ ಆಗ್ರ ಇತ್ತೀಚಿಗೆ ವ್ಯಕ್ತವಾಗಿತ್ತು. ಆದರೆ ಇದಕ್ಕೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರೋಧ ವ್ಯಕ್ತಪಡಿಸಿದ್ದರು. ನೀರಿಲ್ಲ ಎಂಬ ಕಾರಣಕ್ಕೆ ಪಂದ್ಯಗಳನ್ನು ಸ್ಥಳಾಂತರ ಗೊಳಿಸುವುದು ನಮಗೆ ಅವಮಾನಕರ. ಒಂದು ವೇಳೆ ಪಂದ್ಯಗಳನ್ನು ಸ್ಥಳಾಂತರ ಗೊಳಿಸಿದ್ದೇ ಆದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್