AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Water Crisis: ಬೆಂಗಳೂರು, ಉಚಿತ ನೀರನ್ನು ಮಾರಾಟ ಮಾಡಿದ ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ದೂರು

ಬೆಂಗಳೂರು ನಗರವು ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಕಾರಣ ನೀರಿನ ದುರ್ಬಳಕೆ ವಿರುದ್ಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಠಿಣ ಕ್ರಮಕ್ಕೆ ಮುಂದಾಗಿದೆ. ಜಲ ಮಂಡಳಿಯು ಉಚಿತವಾಗಿ ಸರಬರಾಜು ಮಾಡುವ ನೀರನ್ನು ಮಾರಾಟ ಮಾಡಿದ ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

Bangalore Water Crisis: ಬೆಂಗಳೂರು, ಉಚಿತ ನೀರನ್ನು ಮಾರಾಟ ಮಾಡಿದ ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ದೂರು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Mar 26, 2024 | 9:08 AM

Share

ಬೆಂಗಳೂರು, ಮಾರ್ಚ್​ 26: ಉಚಿತವಾಗಿ ಪೂರೈಸಬೇಕಾದ ನೀರನ್ನು ದುರ್ಬಳಕೆ ಮಾಡಿದ ಆರೋಪದಲ್ಲಿ ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದೆ. ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ಪ್ರದೇಶಗಳಿಗೆ ಉಚಿತವಾಗಿ ನೀರು ಪೂರೈಸುವುದಕ್ಕಾಗಿ ಮಂಡಳಿಯು ಖಾಸಗಿ ಟ್ಯಾಂಕರ್ (Private Tanker) ಅನ್ನು ತಾತ್ಕಾಲಿಕವಾಗಿ ನಿಯಂತ್ರಣಕ್ಕೆ ತೆಗೆದುಕೊಂಡಿತ್ತು. ಅದರಂತೆ ನೀರು ಪೂರೈಸಲು ಚಾಲಕನಿಗೆ ಸೂಚಿಸಲಾಗಿತ್ತು ಎಂದು ಮಂಡಳಿಯ ಪ್ರಕಟಣೆ ತಿಳಿಸಿದೆ.

ವಾರ್ಡ್​ ಸಂಖ್ಯೆ 130ರಲ್ಲಿ ನೀರಿನ ತೀವ್ರ ಅಭಾವ ಇರುವುದು ಗೊತ್ತಾಗಿತ್ತು. ಆ ವಾರ್ಡ್‌ಗೆ ಚಾಲಕ ನೀರು ಸರಬರಾಜು ಮಾಡಬೇಕಾಗಿತ್ತು. ಸೂಚನೆಯನ್ನು ಪಾಲಿಸುವ ಬದಲು ಚಾಲಕ ವಾಣಿಜ್ಯ ಉದ್ದೇಶಕ್ಕಾಗಿ ವಾರ್ಡ್ ಸಂಖ್ಯೆ 14 ರಲ್ಲಿನ ಸಂಸ್ಥೆಗೆ ನೀರನ್ನು ಮಾರಾಟ ಮಾಡಿದ್ದಾರೆ. ಆದ್ದರಿಂದ, ನಾವು ಅವರ ವಿರುದ್ಧ ದೂರು ನೀಡಿದ್ದೇವೆ ಎಂದು ಮಂಡಳಿ ತಿಳಿಸಿದೆ.

ನಗರದಲ್ಲಿನ ನೀರಿನ ಕೊರತೆ ನೀಗಿಸಲು ಹಲವು ಖಾಸಗಿ ಟ್ಯಾಂಕರ್‌ಗಳನ್ನು ನಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇವೆ. ಖಾಸಗಿ ಟ್ಯಾಂಕರ್​​ಗಳು ನೀರಿನ ದುರ್ಬಳಕೆಯನ್ನು ಮಾಡಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ನೀರಿನ ದುರುಪಯೋಗದ ವಿರುದ್ಧ ಎಲ್ಲಾ ಖಾಸಗಿ ಟ್ಯಾಂಕರ್ ಮಾಲೀಕರಿಗೆ ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ವಿ ಎಚ್ಚರಿಕೆ ನೀಡಿದ್ದಾರೆ.

ಈ ಮಧ್ಯೆ, ಅಂತರ್ಜಲ ಮಟ್ಟವನ್ನು ಸುಧಾರಿಸುವುದಕ್ಕಾಗಿ ಕೆಂಗೇರಿ ಸೇರಿದಂತೆ ನಗರದ 14 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಜಲ ಮಂಡಳಿ ಭರ್ತಿ ಮಾಡುತ್ತಿದೆ. ಹೀಗಾಗಿ ಈ ಕೆರೆಗಳ ನೀರನ್ನು ನೇರವಾಗಿ ಬಳಸದಂತೆ ನಾಗರಿಕರಿಗೆ ಜಲ ಮಂಡಳಿ ಎಚ್ಚರಿಕೆ ನೀಡಿದೆ.

ಕೆರೆಗಳನ್ನು ಸಂಸ್ಕರಿಸಿದ ನೀರಿನಿಂದ ತುಂಬಿಸುತ್ತಿರುವಾಗ, ಅದನ್ನು ನೇರ ಬಳಕೆ ಅಥವಾ ಬಳಕೆಗೆ ಬಳಸಲಾಗುವುದಿಲ್ಲ. ಆದ್ದರಿಂದ, ಜನರು ಇದನ್ನು ಬಳಸದಂತೆ ವಿನಂತಿಸಲಾಗಿದೆ ಮಂಡಳಿಯ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರು: ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ; ಸಾರ್ವಜನಿಕರ ಆಕ್ರೋಶ

ನೀರಿನ ದುರುಪಯೋಗದ ಮೇಲೆ ಜಲಮಂಡಳಿ ನಗರದಾದ್ಯಂತ ತೀವ್ರ ನಿಗಾ ಇರಿಸಿದೆ. ನಿಯಮ ಉಲ್ಲಂಘಿಸಿದಲ್ಲಿ ಗಂಭೀರವಾಗಿ ಪರಿಗಣಿಸಲಾಗುತ್ತದೆ. ನಗರದಲ್ಲಿ ಒಂದೆರಡು ಹೋಟೆಲ್‌ಗಳು ಪೂಲ್ ಪಾರ್ಟಿಗಳು ಮತ್ತು ರೈನ್ ಡ್ಯಾನ್ಸ್‌ಗಳನ್ನು ಯೋಜಿಸಿ ಪ್ರಕಟಣೆ ಹೊರಡಿಸಿದ್ದವು. ಆದರೆ, ಜಲ ಮಂಡಳಿಯ ಸೂಚನೆಯ ನಂತರ ಪ್ರಕಟಣೆಯನ್ನು ಹಿಂತೆಗೆದುಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ