ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ: ನೀರು ಸರಬರಾಜು ಮಂಡಳಿ ಅಧ್ಯಕ್ಷರು ಹೇಳಿದ್ದೇನು?

ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ರಾಜ್ಯ ಸರ್ಕಾರ ಸಭೆಗಳನ್ನು ನಡೆಸುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ. ಈ ನಡುವೆ ತುರ್ತು ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ (BWSSB) ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್, ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕಬೇಡ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ: ನೀರು ಸರಬರಾಜು ಮಂಡಳಿ ಅಧ್ಯಕ್ಷರು ಹೇಳಿದ್ದೇನು?
ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ: ಯಾವುದೇ ಆತಂಕ ಬೇಡ ಎಂದ BWSSB ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್
Follow us
| Updated By: Rakesh Nayak Manchi

Updated on:Mar 09, 2024 | 6:09 PM

ಬೆಂಗಳೂರು, ಮಾ.9: ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನ (Bengaluru) ಬಹುತೇಕ ಭಾಗಗಳಲ್ಲಿ ನೀರಿಗೆ (Water Problem) ಹಾಹಾಕಾರ ಎದ್ದಿದೆ. ರಾಜ್ಯ ಸರ್ಕಾರ ಸಭೆಗಳನ್ನು ನಡೆಸುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ. ಈ ನಡುವೆ ತುರ್ತು ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ (BWSSB) ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್, ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕಬೇಡ ಎಂದು ಹೇಳಿದ್ದಾರೆ.

ನಮ್ಮ ಬಳಿ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ. ಹೀಗಾಗಿ ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕಬೇಡ ಎಂದು ರಾಮ್ ಪ್ರಸಾದ್ ಮನವಿ ಮಾಡಿದರು. 1470 ಎಂಎಲ್‌ಡಿ ನೀರು ಪಂಪ್‌ ಮಾಡಲು ಅವಕಾಶವಿದೆ. ನಮ್ಮ ಕೆಪಾಸಿಟಿಗಿಂತ 20 ಟಿಎಂಸಿ ನೀರು ಪಂಪ್ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: ಬೆಂಗಳೂರು ಹೊರ ವಲಯದ ನೀರಿನ ಅಭಾವ ತಪ್ಪಿಸಲು ಜಲಮಂಡಳಿಯಿಂದ ಹೊಸ ಪ್ಲ್ಯಾನ್​​

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳು ಕಾವೇರಿ ನೀರು ಅವಲಂಬಿಸಿಲ್ಲ. ಬೋರ್‌ವೆಲ್‌ನಲ್ಲಿ ಅಂತರ್ಜಲ ಕುಸಿತದಿಂದ ಕಾವೇರಿ ನೀರು ಅವಲಂಬನೆ ಮಾಡಲಾಗಿದೆ. ಹೀಗಾಗಿ ಬೆಂಗಳೂರು ನಗರದ ಹೊರವಲಯದಲ್ಲಿ ಸಮಸ್ಯೆ ಆಗುತ್ತಿದೆ. ಅಂತರ್ಜಲ ಹೆಚ್ಚಿಸಲು ಈಗಾಗಲೇ ತಜ್ಞರ ಜೊತೆ ಚರ್ಚಿಸಿದ್ದೇವೆ ಎಂದರು.

ಬೆಂಗಳೂರಿನಲ್ಲಿ ನೀರಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಟುತ್ತಿವೆ. ನೀರಿಲ್ಲಾ.. ನೀರಿಲ್ಲಾ.. ಎಂದು ಟ್ರೋಲ್​ಗಳನ್ನು ಮಾಡಲಾಗುತ್ತಿದೆ. ಆದರೆ, ಇದು ಸುಳ್ಳು. ಕೆಲವು ಅಪಾರ್ಟ್​​ಮೆಂಟ್​ಗಳಲ್ಲಿ ನೀರಿಗೆ ಕೊರತೆಯಾಗಿದೆ. ಇನ್ನುಳಿದಂತೆ ಯಾವುದೇ ಸಮಸ್ಯೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ಕೊಡಲು ಸುದ್ದಿಗೋಷ್ಠಿ ಕರೆದಿದ್ದೇವೆ. ಅಪಾರ್ಟ್​​ಮೆಂಟ್​ಗಳಲ್ಲಿ ಬೋರ್​ವೆಲ್​ಗಳಲ್ಲಿ ನೀರು ಬತ್ತಿದ ಹಿನ್ನೆಲೆ ಕಾವೇರಿ ನೀರಿಗೆ ಬೇಡಿಕೆ ಹೆಚ್ಚಾಗಿದೆ. ಸದ್ಯ, 1450 ಮಿಲಿಯನ್ ಲೀಟರ್ ನೀರು ಪಂಪ್ ಮಾಡುತ್ತಿದ್ದೇವೆ. ಜುಲೈವರೆಗೆ 8 ಟಿಎಂಸಿ ನೀರಿನ ಅವಶ್ಯಕತೆಯಿದ್ದು, ಪ್ರತಿ ತಿಂಗಳಿಗೆ 1.54 ಟಿಎಂಸಿ ನೀರು ಅವಶ್ಯಕತೆಯಿದೆ ಎಂದರು. 1992 ರಿಂದ ಕಾವೇರಿ ನೀರು ತರಲು 4 ಹಂತದ ಪ್ರಾಜೆಕ್ಟ್ ಮಾಡಿದ್ದೇವೆ. ಈಗ ಐದನೇ ಪ್ರಾಜೆಕ್ಟ್ ಆರಂಭಿಸಲಾಗಿದೆ ಎಂದರು.

ವರದಿ: ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:32 pm, Sat, 9 March 24

 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ