Bengaluru Water Crisis: ಬೆಂಗಳೂರು ನೀರಿನ ಬಿಕ್ಕಟ್ಟು; ವರ್ಕ್ ಫ್ರಂ ಹೋಮ್, ಆನ್​ಲೈನ್ ತರಗತಿಗಳಿಗೆ ಹೆಚ್ಚಿದ ಬೇಡಿಕೆ

ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ತೀವ್ರಗೊಂಡಿರುವ ಕಾರಣ ವರ್ಕ್ ಫ್ರಂ ಹೋಂ ಮತ್ತು ಆನ್ಲೈನ್ ತರಗತಿಗಳಿಗೆ ಬೇಡಿಕೆ ಹೆಚ್ಚಾಗಿದೆ. ನೀರನ್ನು ಉಳಿಸುವ ನಿಟ್ಟಿನಲ್ಲಿ ಮತ್ತು ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ಐಟಿ ಕ್ಷೇತ್ರದ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನೀಡಬೇಕು ಎಂದು ಅನೇಕರು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದ್ದಾರೆ.

Bengaluru Water Crisis: ಬೆಂಗಳೂರು ನೀರಿನ ಬಿಕ್ಕಟ್ಟು; ವರ್ಕ್ ಫ್ರಂ ಹೋಮ್, ಆನ್​ಲೈನ್ ತರಗತಿಗಳಿಗೆ ಹೆಚ್ಚಿದ ಬೇಡಿಕೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Mar 11, 2024 | 7:22 AM

ಬೆಂಗಳೂರು, ಮಾರ್ಚ್ 11: ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು (Bengaluru Water Crisis) ತೀವ್ರಗೊಂಡಿರುವುದರ ಮಧ್ಯೆ ಮಳೆಗಾಲ ಆರಂಭವಾಗುವ ವರೆಗೆ ವರ್ಕ್ ಫ್ರಂ ಹೋಮ್ (Work From Home) ಹಾಗೂ ಆನ್​ಲೈನ್ ತರಗತಿಗಳ (Online Classes) ಆಯ್ಕೆ ನೀಡುವಂತೆ ನಗರದ ನಿವಾಸಿಗಳಿಂದ ಆಗ್ರಹ ವ್ಯಕ್ತವಾಗಿದೆ. ಕಳೆದ ಎರಡು ವಾರಗಳಿಂದ ತೀವ್ರ ನೀರಿನ ಸಮಸ್ಯೆಯಿಂದ ಬೆಂಗಳೂರಿನ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದು, ಈ ನಡುವೆ ತಾಪಮಾನ ಏರಿಕೆಯಾಗುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿದೆ. ನೀರನ್ನು ಉಳಿಸುವುದರ ಜತೆಗೆ ನೌಕರರು ಮತ್ತು ವಿದ್ಯಾರ್ಥಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಆನ್‌ಲೈನ್ ತರಗತಿಗಳನ್ನು ಮುಂದುವರಿಸಲು, ಮನೆಯಿಂದಲೇ ಕೆಲಸದ ಅವಕಾಶ ನೀಡುವಂತೆ ಐಟಿ ಕ್ಷೇತ್ರದ ಉದ್ಯೋಗಿಗಳು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಏತನ್ಮಧ್ಯೆ, ಐಟಿ ಕಂಪನಿಗಳಿಗೆ ಮನೆಯಿಂದ ಕೆಲಸವನ್ನು ಕಡ್ಡಾಯಗೊಳಿಸುವಂತೆ ಮತ್ತು ಶಾಲೆಗಳು ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡುವಂತೆ ಸೂಚನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಅನೇಕ ಮನವಿಗಳು ಸಲ್ಲಿಕೆಯಾಗಿವೆ. ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಮಾಡಿದಂತೆಯೇ ನೀರಿನ ಬಿಕ್ಕಟ್ಟಿನ ಸಮಯದಲ್ಲಿಯೂ ವರ್ಕ್ ಫ್ರಂ ಹೋಮ್, ಆನ್​ಲೈನ್ ತರಗತಿಗಳು ಸೂಕ್ತ ಎಂದು ಬೆಂಗಳೂರಿಗರು ಅಭಿಪ್ರಾಯಪಟ್ಟಿದ್ದಾರೆ.

2023 ರ ಮುಂಗಾರಿನಲ್ಲಿ ಮಳೆ ಕೊರತೆಯ ಕಾರಣ ಕರ್ನಾಟಕದಲ್ಲಿ, ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ಉಲ್ಬಣಗೊಂಡಿದೆ.

ಈ ಮಧ್ಯೆ ಮಳೆ ಕೊರತೆಗೆ ಎಲ್ ನಿನೋ ಪರಿಣಾಮ ಕಾರಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಈ ವರ್ಷ ಬೇಸಿಗೆ ಹೆಚ್ಚು ತೀವ್ರವಾಗಿರುವ ಸಾಧ್ಯತೆ ಇದೆ ಎಂದು ಇಲಾಖೆ ಅಂದಾಜಿಸಿದೆ. ಫೆಬ್ರವರಿ 10 ರವರೆಗೆ ರಾಜ್ಯ ಸರ್ಕಾರವು ಮಾಡಿದ ಮೌಲ್ಯಮಾಪನದ ಪ್ರಕಾರ, ಮುಂಬರುವ ತಿಂಗಳುಗಳಲ್ಲಿ ಬೆಂಗಳೂರು ನಗರ ಜಿಲ್ಲೆ ಸೇರಿದಂತೆ ಕರ್ನಾಟಕದಾದ್ಯಂತ ಸುಮಾರು 7,082 ಗ್ರಾಮಗಳು ಮತ್ತು 1,193 ವಾರ್ಡ್‌ಗಳು ಕುಡಿಯುವ ನೀರಿನ ಸಮಸ್ಯೆಗೆ ಗುರಿಯಾಗಲಿವೆ.

ಸುಮಾರು 50 ಪ್ರತಿಶತದಷ್ಟು ಬೋರ್‌ವೆಲ್‌ಗಳು ಬತ್ತಿ ಹೋಗಿರುವ ನಗರದ ಅಂತರ್ಜಲ ಮೂಲಗಳನ್ನು ಮರುಪೂರಣಗೊಳಿಸಲು ಬೆಂಗಳೂರಿನ ಅಧಿಕಾರಿಗಳು ಒಣಗುತ್ತಿರುವ ಕೆರೆಗಳಿಗೆ ದಿನಕ್ಕೆ 1,300 ಮಿಲಿಯನ್ ಲೀಟರ್ ಶುದ್ಧೀಕರಿಸಿದ ನೀರನ್ನು ಮರುಪೂರಣಗೊಳಿಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ನೀರಿಗಾಗಿ ಹಾಹಾಕಾರ; ಬೇಕಾಬಿಟ್ಟಿ ಬೋರ್​ವೆಲ್ ಕೊರೆಯುವವರಿಗೆ ಶಾಕ್

ಬೆಂಗಳೂರಿಗೆ ಕಾವೇರಿ ನೀರು ಸರಬರಾಜು ಮಾಡುವ ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ ಅಣೆಕಟ್ಟಿನಲ್ಲಿ ಬೇಸಿಗೆಯ ಕಾರಣ ಸಮರ್ಪಕ ನೀರು ಇಲ್ಲದ ಕಾರಣ ಪರಿಸ್ಥಿತಿ ಈ ವರ್ಷ ಭೀಕರವಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ