Bangalore Water Crisis: ಬೆಂಗಳೂರಿನ ಹೌಸಿಂಗ್ ಸೊಸೈಟಿಯಲ್ಲಿ ನೀರು ದುರ್ಬಳಕೆ ತಡೆಯಲು ಭದ್ರತಾ ಸಿಬ್ಬಂದಿ, 5000 ರೂ. ದಂಡ!

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಅನೇಕ ಅಪಾರ್ಟ್​ಮೆಂಟ್​ಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಬಳಕೆಯನ್ನೇ ಕಡಿಮೆ ಮಾಡುವಂತೆ ನಿವಾಸಿಗಳಿಗೆ ಸೂಚನೆ ನೀಡಿವೆ. ಇನ್ನೂ ಕೆಲವು ಅಪಾರ್ಟ್​ಮೆಂಟ್​ಗಳು ಮಿತಿಗಿಂತ ಹೆಚ್ಚು ನೀರು ಬಳಸಿದರೆ, ಅಂಥವರಿಗೆ ದಂಡ ವಿಧಿಸಲೂ ಮುಂದಾಗಿವೆ. ನೀರಿನ ಬಳಕೆ ಮೇಲೆ ನಿಗಾ ಇಡಲು ಭದ್ರತಾ ಸಿಬ್ಬಂದಿ ನೇಮಕ ಮಾಡಲೂ ಕೆಲವು ಅಪಾರ್ಟ್​ಮೆಂಡ್​ಗಳು ಮುಂದಾಗಿವೆ.

Bangalore Water Crisis: ಬೆಂಗಳೂರಿನ ಹೌಸಿಂಗ್ ಸೊಸೈಟಿಯಲ್ಲಿ ನೀರು ದುರ್ಬಳಕೆ ತಡೆಯಲು ಭದ್ರತಾ ಸಿಬ್ಬಂದಿ, 5000 ರೂ. ದಂಡ!
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Mar 06, 2024 | 10:24 AM

ಬೆಂಗಳೂರು, ಮಾರ್ಚ್​ 6: ಬೆಂಗಳೂರು (Bengaluru) ನಗರದಲ್ಲಿ ದಿನನಿತ್ಯದ ಬಳಕೆಗೆ ಮತ್ತು ಕುಡಿಯುವ ನೀರಿನ (Water Crisis) ಸಮಸ್ಯೆ ಎದುರಿಸುತ್ತಿರುವ ವಿಚಾರ ಈಗಾಗಲೇ ರಾಜ್ಯದಾದ್ಯಂತ ಸುದ್ದಿಯಾಗಿದೆ. ಇದೀಗ ಬೆಂಗಳೂರಿನ ಹೌಸಿಂಗ್ ಸೊಸೈಟಿಯೊಂದರಲ್ಲಿ (Housing Society) ನೀರಿನ ಪೋಲು, ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗಿದ್ದು, 5000 ರೂ. ವರೆಗೆ ದಂಡ ವಿಧಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ! ಒಟ್ಟಾರೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ಭದ್ರತಾ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗುವುದು ಎಂದು ಸೊಸೈಟಿ ಹೇಳಿದೆ.

ಹೆಚ್ಚುತ್ತಿರುವ ನೀರಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ದೈನಂದಿನ ನೀರಿನ ಬಳಕೆ ವೇಳೆ ಹೆಚ್ಚು ಜಾಗರೂಕತೆ ವಹಿಸುವಂತೆ ಬೆಂಗಳೂರಿನ ಹಲವಾರು ಹೌಸಿಂಗ್ ಸೊಸೈಟಿಗಳು ನಿವಾಸಿಗಳಿಗೆ ಸೂಚನೆ ನೀಡಿವೆ. ವೈಟ್‌ಫೀಲ್ಡ್, ಯಲಹಂಕ ಮತ್ತು ಕನಕಪುರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ನೀರಿನ ತೀವ್ರ ಕೊರತೆ ಎದುರಾಗಿದೆ.

ಅಪಾರ್ಟ್​ಮೆಂಟ್​ಗಳಿಗೆ ಸರಬರಾಜಾಗುತ್ತಿಲ್ಲ ನೀರು

ವೈಟ್‌ಫೀಲ್ಡ್‌ನಲ್ಲಿರುವ ಪಾಮ್ ಮೆಡೋಸ್ ಹೌಸಿಂಗ್ ಸೊಸೈಟಿಯು ನಿವಾಸಿಗಳಿಗೆ ನೋಟಿಸ್ ಕಳುಹಿಸಿದ್ದು, ಕಳೆದ ನಾಲ್ಕು ದಿನಗಳಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ನೀರು ಸರಬರಾಜಾಗುತ್ತಿಲ್ಲ ಎಂದು ಹೇಳಿದೆ. ಸೊಸೈಟಿಯ ಅಧಿಕಾರಿಗಳು ಬೋರ್‌ವೆಲ್‌ಗಳ ಮೂಲಕ ನಿರ್ವಹಣೆ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಬೋರ್‌ವೆಲ್‌ಗಳ ನೀರಿನ ಪ್ರಮಾಣ ಕೂಡ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸೊಸೈಟಿ ಆತಂಕ ವ್ಯಕ್ತಪಡಿಸಿದೆ.

ನೀರಿನ ದುರ್ಬಳಕೆಗೆ ದಂಡ

ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವುದಕ್ಕಾಗಿ ನೀರಿನ ಬಳಕೆಯನ್ನು ಶೇಕಡಾ 20 ರಷ್ಟು ಕಡಿಮೆ ಮಾಡುವಂತೆ ನಿವಾಸಿಗಳಿಗೆ ಸೂಚಿಸಲು ಸೊಸೈಟಿ ನಿರ್ಧರಿಸಿದೆ. ಇದನ್ನು ಮತ್ತೆ ಮತ್ತೆ ಉಲ್ಲಂಘಿಸಿದಲ್ಲಿ ಹೆಚ್ಚಿನ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ನೀರಿನ ದುರ್ಬಳಕೆ ಮೇಲೆ ಕಣ್ಗಾವಲಿಡಲು ಸಿಬ್ಬಂದಿ ನೇಮಕ ಮಾಡುವುದಾಗಿಯೂ ಹೇಳಿದೆ.

ಮತ್ತೊಂದೆಡೆ, ಕನಕಪುರದಲ್ಲಿರುವ ಪ್ರೆಸ್ಟೀಜ್ ಫಾಲ್ಕನ್ ಸಿಟಿ ಅಪಾರ್ಟ್ಮೆಂಟ್ ಕೂಡ ತನ್ನ 2,500 ಫ್ಲ್ಯಾಟ್​ಗಳ ನಿವಾಸಿಗಳಿಗೆ ನೀರಿನ ಬಳಕೆ ಮಿತಿಗೊಳಿಸುವಂತೆ ಸೂಚನೆಯುಳ್ಳ ಸಂದೇಶ ಕಳುಹಿಸಿದೆ. ಸದ್ಯ ಓವರ್‌ಹೆಡ್‌ ಟ್ಯಾಂಕ್‌ಗಳಲ್ಲಿ ಮಾತ್ರ ನೀರು ಸಂಗ್ರಹವಾಗಿದ್ದು, ಅದು ಹೆಚ್ಚು ದಿನ ಉಳಿಯುವುದಿಲ್ಲ. ಪೂರೈಕೆ ಸಮಸ್ಯೆ ಇದೆ ಎಂದು ಅಪಾರ್ಟ್ಮೆಂಟ್ ತಿಳಿಸಿದೆ.

ಇದನ್ನೂ ಓದಿ: ಮುಖ್ಯಮಂತ್ರಿಗಳ ಗೃಹಕಚೇರಿಗೂ ತಟ್ಟಿದ ನೀರಿನ ಬಿಸಿ; ಟ್ಯಾಂಕರ್​ನಲ್ಲಿ ನೀರು ಪೂರೈಕೆ

ಬೆಂಗಳೂರು ಮತ್ತು ರಾಜ್ಯದ ಇತರ ಕಡೆಗಳಲ್ಲಿನ ನೀರಿನ ಸಮಸ್ಯೆ ಬಗ್ಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದು, ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಟ್ಯಾಂಕರ್ ಮಾಫಿಯಾದವರಿಗೂ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ